ಸಿಎಂ ಸಿದ್ದರಾಮಯ್ಯ ಪತ್ನಿ ಬಿಎಂ ಪಾರ್ವತಿ 
ರಾಜ್ಯ

ಸಿಎಂ ಸಿದ್ದರಾಮಯ್ಯ ಪತ್ನಿ ಆರೋಗ್ಯದಲ್ಲಿ ಚೇತರಿಕೆ: ವಾರ್ಡ್‌ಗೆ ಶಿಫ್ಟ್

ಹಿರಿಯ ಸಲಹೆಗಾರ ಡಾ. ಬಿ.ಸಿ. ಶ್ರೀನಿವಾಸ್ ಅವರ ತಂಡ ಪಾರ್ವತಿ ಅವರಿಗೆ ಚಿಕಿತ್ಸೆ ನೀಡಿದ್ದರು. ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದ ಹಿನ್ನೆಲೆಯಲ್ಲಿ ವಾರ್ಡ್ ಗೆ ಶಿಫ್ಟ್ ಮಾಡಲಾಗಿದ್ದು. ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ.

ಬೆಂಗಳೂರು: ಆರೋಗ್ಯಗದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರನ್ನು ಮಂಗಳವಾರ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಿಂದ (ಐಸಿಯು) ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪಾರ್ವತಿ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಯಿತು. ಶ್ವಾಸಕೋಶದ ಎಡಿಮಾ ಇರುವುದು ಪತ್ತೆಯಾದ ನಂತರ ಐಸಿಯುಗೆ ವರ್ಗಾಯಿಸಲಾಯಿತು.

ಹಿರಿಯ ಸಲಹೆಗಾರ ಡಾ. ಬಿ.ಸಿ. ಶ್ರೀನಿವಾಸ್ ಅವರ ತಂಡ ಪಾರ್ವತಿ ಅವರಿಗೆ ಚಿಕಿತ್ಸೆ ನೀಡಿದ್ದರು. ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದ ಹಿನ್ನೆಲೆಯಲ್ಲಿ ವಾರ್ಡ್ ಗೆ ಶಿಫ್ಟ್ ಮಾಡಲಾಗಿದ್ದು. ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ.

ಪಾರ್ವತಿ ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ. ಅರಸಿಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಮುಖ್ಯಮಂತ್ರಿ ಅವರ ಮಗ ಯತೀಂದ್ರ ಅವರನ್ನು ಭೇಟಿ ಮಾಡಿ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!