ಜಿ.ಪರಮೇಶ್ವರ್ 
ರಾಜ್ಯ

ಮೆಟ್ರೋ ವಿಸ್ತರಣೆಯಿಂದ ಬೆಂಗಳೂರು ಮೇಲಿನ ಒತ್ತಡ ಕಡಿಮೆಯಾಗಲಿದೆ: ಸಚಿವ ಪರಮೇಶ್ವರ್‌

ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಅನೇಕ ವಿಚಾರಗಳು ಸಂಸದ ತೇಜಸ್ವಿಸೂರ್ಯ ಅವರ ಗಮನದಲ್ಲಿಲ್ಲ. ಇದೇ ಕಾರಣದಿಂದ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನಿಂದ ತುಮಕೂರಿಗೆ ನಮ್ಮ ಮೆಟ್ರೋ ರೈಲು ವಿಸ್ತರಣೆಯಿಂದ ತುಮಕೂರು ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಯೋಜನೆಗೆ ಅಪಸ್ವರ ತೆಗೆದಿರುವ ತೇಜಸ್ವಿ ಸೂರ್ಯಗೆ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಪರಮೇಶ್ವರ್‌ ಅವರು, ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಅನೇಕ ವಿಚಾರಗಳು ಸಂಸದ ತೇಜಸ್ವಿಸೂರ್ಯ ಅವರ ಗಮನದಲ್ಲಿಲ್ಲ. ಇದೇ ಕಾರಣದಿಂದ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರತಿನಿತ್ಯ ತುಮಕೂರಿನಿಂದ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ನೆಲಮಂಗಲ, ದಾಬಸ್‌ಪೇಟೆ, ಕ್ಯಾತ್ಸಂದ್ರ ಭಾಗ ವೇಗವಾಗಿ ಬೆಳೆಯುತ್ತಿವೆ. ಕೈಗಾರಿಕೆ ಉದ್ದೇಶದಿಂದ ಜನರ ಜೀವನ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಒತ್ತಡ ಜಾಸ್ತಿ ಇದೆ. ನೀರಿಗೆ ಕಷ್ಟ, ಓಡಾಡೋಕೆ ಟ್ರಾಫಿಕ್ ಸಮಸ್ಯೆ ಇದೆಲ್ಲ ನೋಡಿಕೊಂಡು ಆ ಕಡೆ ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ತುಮಕೂರಿನಲ್ಲಿ 20 ಸಾವಿರ ಎಕರೆಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಿಸಲಾಗಿದೆ. ಈಗಾಗಲೇ 200 ಕೈಗಾರಿಕೆಗಳು ಬಂದಿವೆ. ಫುಡ್‌ಪಾರ್ಕ್, ಟೈಮೆಕ್ ಜಪಾನೀಸ್ ಫ್ಯಾಕ್ಟರಿ, ಜಪಾನೀಸ್ ಟೌನ್‌ಶಿಪ್‌ಗೆ ಜಾಗ ಕೊಟ್ಟಿದ್ದೇವೆ.

ಇಷ್ಟು ವೇಗವಾಗಿ ಬೆಳೆಯುತ್ತಿರುವಾಗ ಸಂಪರ್ಕ (ಕನೆಕ್ಟಿವಿಟಿ) ವ್ಯವಸ್ಥೆ ಬೇಕಲ್ಲವೇ ಎಂದು ಪ್ರಶ್ನಿಸಿದ ಅವರು, ರಸ್ತೆ, ಮೆಟ್ರೋ, ರೈಲು ಸಂಪರ್ಕ ಇದ್ದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂಬುದು ಉದ್ದೇಶ. ರಾಮನಗರ, ಕೋಲಾರ, ತುಮಕೂರು ನಗರಗಳನ್ನು ಬೆಳೆಸಿದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂದು ಹೇಳಿದ್ದಾರೆ.

ಎರಡು ವರ್ಷದ ಹಿಂದೆಯೇ ತುಮಕೂರಿಗೆ ಮೆಟ್ರೋ ಯೋಜನೆ ತೆಗೆದುಕೊಂಡು ಹೋಗಬೇಕು ಎಂದು ಪ್ರಸ್ತಾಪ ಮಾಡಿದ್ದೆ. ಮುಖ್ಯಮಂತ್ರಿಗಳು ಫಿಸಿಬಲಿಟಿ ಸ್ಟಡಿ ಮಾಡುವುದಾಗಿ 2024ರ ಬಜೆಟ್‌ನಲ್ಲಿ ಘೋಷಿಸಿದ್ದರು. ಫಿಸಿಬಲಿಟಿ ವರದಿಯಲ್ಲಿ ತುಮಕೂರು ಮೆಟ್ರೋ ಯೋಜನೆ ಬಗ್ಗೆ ಪಾಸಿಟಿವ್ ಆಗಿ ಕೊಟ್ಟಿದ್ದಾರೆ. ಎಲ್ಲರೊಂದಿಗೆ ಚರ್ಚೆ ಮಾಡಿ ಡಿಪಿಆರ್ ಮಾಡಲು ಅನುಮತಿ ಕೊಟ್ಟಿದ್ದಾರೆ ಎಂದು ಪರಮೇಶ್ವರ್‌ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT