ಗೃಹ ಸಚಿವ ಜಿ ಪರಮೇಶ್ವರ್ 
ರಾಜ್ಯ

ಬೆಂಗಳೂರು ದರೋಡೆ ಪ್ರಕರಣ: ಆರೋಪಿಗಳ ಸುಳಿವು ಸಿಕ್ಕಿದೆ ಎಂದ ಗೃಹ ಸಚಿವ ಪರಮೇಶ್ವರ್

ಎಟಿಎಂಗಳಲ್ಲಿ ಹಣ ಠೇವಣಿ ಇಡುವ ಬಗ್ಗೆ ಆರೋಪಿಗಳಿಗೆ ಮಾಹಿತಿ ನೀಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ವ್ಯಕ್ತಿಯನ್ನು ಗುರುತಿಸಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡ ಹಗಲೇ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಬಂಧನಕ್ಕೊಳಪಡಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಗುರುವಾರ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಎಟಿಎಂಗಳಲ್ಲಿ ಹಣ ಠೇವಣಿ ಇಡುವ ಬಗ್ಗೆ ಆರೋಪಿಗಳಿಗೆ ಮಾಹಿತಿ ನೀಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ವ್ಯಕ್ತಿಯನ್ನು ಗುರುತಿಸಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆಂದು ಹೇಳಿದ್ದಾರೆ.

ಎಟಿಎಂಗಳಿಗೆ ಹಣ ಹಾಕುವ ಮಾಹಿತಿಯನ್ನು ಆರೋಪಿಗಳಿಗೆ ಯಾರೋ ನೀಡಿದ್ದಾರೆ. ಇದಕ್ಕೆ ಕಾರಣ ಏನು? ಮಾಹಿತಿ ಕೊಟ್ಟಿದ್ದು ಯಾರು? ಹಣ ಹಾಕುವವರಲ್ಲಿ ಯಾರಾದರೂ ಇದ್ದಾರೋ? ಎಂಬುದರ ಬಗ್ಗೆ ಈಗಷ್ಟೇ ಮಾಹಿತಿ ಸಿಕ್ಕಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

ನಗರದಲ್ಲಿ ಹಗಲು ಹೊತ್ತಿನಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲು. 7 ಕೋಟಿ ರೂ.ಗೂ ಹೆಚ್ಚು ಮೊತ್ತದ ಹಣ ದರೋಡೆಯಾಗಿದೆ. ವಾಹನ ಸಂಖ್ಯೆ ಎಲ್ಲದರ ಮಾಹಿತಿ ಸಿಕ್ಕಿದೆ. ಕೃತ್ಯ ಎಸಗಿದವರು ಇಲ್ಲಿಯವರಾ? ಹೊರ ರಾಜ್ಯದವರಾ? ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಮಾಹಿತಿ ಸಿಕ್ಕಿದೆ. ತನಿಖೆಗೆ ಅಡ್ಡಿಯಾಗುವುದರಿಂದ ಎಲ್ಲ ಮಾಹಿತಿಯನ್ನು ಹಂಚಿಕೊಳ್ಳಲಾಗುವುದಿಲ್ಲ. ಖಂಡಿತವಾಗಿ ಅರೋಪಿಗಳನ್ನು ಬಂಧಿಸುತ್ತೇವೆಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ