ಡಿಸಿಎಂ ಡಿಕೆ.ಶಿವಕುಮಾರ್ 
ರಾಜ್ಯ

ಪಾಲಿಕೆ ಚುನಾವಣೆಯ ವಾರ್ಡ್ ಮೀಸಲಾತಿ ಪಟ್ಟಿ ಸಿದ್ಧ, ಶೀಘ್ರದಲ್ಲೇ ಬಿಡುಗಡೆ: ರಾಜ್ಯ ಸರ್ಕಾರ

ಬೆಂಗಳೂರಿನಲ್ಲಿ ಜಿಬಿಎ ಮೂಲಕ 369 ವಾರ್ಡ್‌ಗಳನ್ನು ಮಾಡಲಾಗಿದ್ದು, ಸದ್ಯದಲ್ಲೇ ಚುನಾವಣೆ ನಡೆಯಲಿದೆ. ಜೊತೆಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಯಲಿದೆ.

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿ ಬರುವ 369 ವಾರ್ಡ್‌ಗಳ ವಾರ್ಡ್ ಮೀಸಲಾತಿ ಪಟ್ಟಿ ಸಿದ್ಧವಾಗಿದ್ದು, ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಬುಧವಾರ ಹೇಳಿದರು.

ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆಯಂದು ಬುಧವಾರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಜಿಬಿಎ ಮೂಲಕ 369 ವಾರ್ಡ್‌ಗಳನ್ನು ಮಾಡಲಾಗಿದ್ದು, ಸದ್ಯದಲ್ಲೇ ಚುನಾವಣೆ ನಡೆಯಲಿದೆ. ಜೊತೆಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಯಲಿದೆ. ಪಾಲಿಕೆ ಚುನಾವಣೆಯ ವಾರ್ಡ್ ಮೀಸಲಾತಿ ಪಟ್ಟಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಹೇಳಿದರು.

ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವವರಿಗೆ ಅರ್ಜಿ ಕರೆಯಲಾಗುವುದು. ಈಗ ಹೊಸ ಮತದಾರರ ಪಟ್ಟಿ ರಚನೆಯಾಗಲಿದೆ. ಕೂಡಲೇ ಮನೆ ಮನೆಗೆ ಹೋಗಿ ಖಾತಾ ಯೋಜನೆ, ಆಸ್ತಿ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಿಳಿಸಿ ಪ್ರಚಾರ ಮಾಡಬೇಕು ಎಂದು ಕರೆ ನೀಡಿದರು.

ಇಂದಿರಾ ಗಾಂಧಿ ದೇಶಕ್ಕಾಗಿ ಶ್ರಮಿಸಿದ್ದರು. ಅವರು ಮಹಿಳಾ ಸಬಲೀಕರಣವನ್ನು ಪ್ರತಿನಿಧಿಸುತ್ತಾರೆ. ಅದಕ್ಕಾಗಿಯೇ ನಾವು ಉದಯೋನ್ಮುಖ ನಾಯಕರಿಗೆ ಹೆಚ್ಚಿನ ಶಕ್ತಿಯನ್ನು ನೀಡಬೇಕಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

Odisha Literary Festival 2026: ಭಾರತದ ವೈಜ್ಞಾನಿಕ ಕ್ಷೇತ್ರದ ಸಾಧಕರನ್ನು ಮರೆತಿರುವುದಕ್ಕೆ ವಸಾಹತುಶಾಹಿ ಮನಸ್ಥಿತಿಯೇ ಕಾರಣ! ಆನಂದ್ ರಂಗನಾಥನ್

ಹುಬ್ಬಳ್ಳಿ: ʻಗೌರಿ ಲಂಕೇಶ್ʼ ಕೊಲೆ ಕೇಸ್‌ ಹಾಗೂ ಗಾಂಜಾ ಕೇಸ್ ಆರೋಪಿಯಿಂದ ನೂತನ ಪೊಲೀಸ್‌ ಆಯುಕ್ತರಿಗೆ ಸನ್ಮಾನ! ವಿವಾದ

ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಿ ಭಾರಿ ಭೂಕುಸಿತ: ಭಾರಿ ಪ್ರಮಾಣದ ಹಾನಿ ಶಂಕೆ| video

Bigg Boss Kannada 13: ದೊಡ್ಮನೆಗೆ ಬರೋ ಕಂಟೆಸ್ಟೆಂಟ್‌ಗಳು ಇವರೇ ನೋಡಿ!