ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳನ್ನು ಸಂಗ್ರಹಿಸಿದ ನಂತರ ಎಸ್‌ಐಟಿ ಸದಸ್ಯರು ತೆರಳುತ್ತಿರುವುದು  online desk
ರಾಜ್ಯ

ಧರ್ಮಸ್ಥಳ ಬುರುಡೆ ಕೇಸ್: ಕೋರ್ಟ್ ಗೆ SIT ತನಿಖಾ ವರದಿ ಸಲ್ಲಿಕೆ; 4 ಸಾವಿರ ಪುಟಗಳಲ್ಲಿ ಷಡ್ಯಂತ್ರ, ಸುಳ್ಳು ಸಾಕ್ಷ್ಯದ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗ!

BNSS 215ರ ಅಡಿಯಲ್ಲಿ ಸುಳ್ಳು ಸಾಕ್ಷ್ಯದ ಕುರಿತ ಪ್ರಕರಣದ ತನಿಖಾ ವರದಿ ಇದಾಗಿದ್ದು, ಸುಮಾರು 4 ಸಾವಿರ ಪುಟಗಳನ್ನು ಹೊಂದಿದೆ.

ಬೆಳ್ತಂಗಡಿ: ಧರ್ಮಸ್ಥಳ ತಲೆಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಯೊಂದು ಸಂಭವಿಸಿದ್ದು, 3 ತಿಂಗಳುಗಳಿಂದ ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ (SIT) ತಂಡ, ಬೆಳ್ತಂಗಡಿ ಕೋರ್ಟ್‌ಗೆ ತನಿಖಾ ವರದಿ ಸಲ್ಲಿಸಿದೆ.

ಈ ತನಿಖಾ ವರದಿಯಲ್ಲಿ ಅನೇಕ ಅಚ್ಚರಿಯ ಮಾಹಿತಿಯನ್ನೊಳಗೊಂಡ ವಿವರಗಳನ್ನು ಉಲ್ಲೇಖಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಹೆಣಗಳನ್ನು ಹೂತುಹಾಕಿದ್ದೆ ಎಂದು ಹೇಳಿಕೊಂಡಿದ್ದ ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಸುಜಾತಾ ಭಟ್ ಸೇರಿದಂತೆ ಒಟ್ಟು 6 ಮಂದಿ ಹೆಸರನ್ನು ಉಲ್ಲೇಖಿಸಲಾಗಿದೆ.

BNSS 215ರ ಅಡಿಯಲ್ಲಿ ಸುಳ್ಳು ಸಾಕ್ಷ್ಯದ ಕುರಿತ ಪ್ರಕರಣದ ತನಿಖಾ ವರದಿ ಇದಾಗಿದ್ದು, ಸುಮಾರು 4 ಸಾವಿರ ಪುಟಗಳನ್ನು ಹೊಂದಿದೆ.

ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸುಳ್ಳು‌ ಸಾಕ್ಷಿ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು, ಸುಮಾರು‌ ಮೂರು ತಿಂಗಳುಗಳ ಕಾಲ ತನಿಖೆ ನಡೆಸಿದ್ದಾರೆ. ರಾಜ್ಯ ಸರಕಾರಕ್ಕೂ SIT ಮುಖ್ಯಸ್ಥ DGP ಪ್ರಣಬ್ ಮೊಹಾಂತಿ ಅವರು ತನಿಖಾ ವರದಿ ಸಲ್ಲಿಸುವ ಸಾಧ್ಯತೆ ಇದೆ.

ಹಲವು ವಿಚಾರಗಳ ಬಗ್ಗೆ ಉಲ್ಲೇಖ

ಎಸ್‌ಐಟಿ ವರದಿಯಲ್ಲಿ ಧರ್ಮಸ್ಥಳ ವಿರುದ್ಧದ ಷಡ್ಯಂತ್ರದ ವಿಚಾರವಾಗಿಯೂ ಉಲ್ಲೇಖಿಸಲಾಗಿದೆ. ತಿಮರೋಡಿ ಚಿನ್ನಯ್ಯನ ಸಂಪರ್ಕದ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇನ್ನು ತನಿಖೆಗೆ ಕರೆದಾಗ ಆರೋಪಿಗಳು ತಡೆ ತಂದ ಬಗ್ಗೆಯೂ ಎಸ್‌ಐಟಿ ಅಧಿಕಾರಿಗಳು ತಮ್ಮ ತನಿಖಾ ವರದಿಯಲ್ಲಿ ಪ್ರಸ್ತಾಪಿಸಿದ್ದಾರೆ.

ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಜುಲೈ 20 ರಂದು ಎಸ್‌ಐಟಿ ತಂಡವನ್ನು ರಚಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT