ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ ದರೋಡೆ ಪ್ರಕರಣ: ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಬಂಧನ

ಸಿಎಂಎಸ್ ಸೆಕ್ಯೂರಿಟಿ ಎಜೆನ್ಸಿಯ ಮಾಜಿ ಉದ್ಯೋಗಿಗಳು ದರೋಡೆಯಲ್ಲಿ ಭಾಗಿಯಾಗಿದ್ದು, ಕದ್ದ ಹಣವನ್ನು ಬೆಂಗಳೂರಲ್ಲಿಯೇ ಬಚ್ಚಿಟ್ಟು ಪರಾರಿಯಾಗಿದ್ದಾರೆ ಎಂಬ ವಿಷಯ ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.

Sumana Upadhyaya
Updated On : 21 Nov 2025, 8:20 am

ಬೆಂಗಳೂರು: ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಹಾಡುಹಗಲೇ ನಡೆದ 7 ಕೋಟಿ ರೂಪಾಯಿ ದರೋಡೆ ಪ್ರಕರಣ ಹಿಂದೆ ಪೊಲೀಸ್ ಕಾನ್ಸ್‌ಟೇಬಲ್ ಇದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ದರೋಡೆ ಪ್ರಕರಣ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಎಂಬವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್‌ಮೈಂಡ್ ಎನ್ನಲಾಗುತ್ತಿದೆ. ಇವರೇ ಆರೋಪಿ ಗ್ಯಾಂಗ್ ನ್ನು ದರೋಡೆ ಹೇಗೆ ಮಾಡಬೇಕೆಂದು ಸಂಚು ರೂಪಿಸಿದ್ದರು ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.

ಕಾನ್ಸ್ಟೇಬಲ್ ನಿಂದ ದರೋಡೆಗೆ ಪ್ಲಾನ್

Advertisement

Advertisement

ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್ ರೆಡಿ ಮಾಡಿದ್ದ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್, ದರೋಡೆ ಹೇಗೆ ಮಾಡಬೇಕೆಂದು ಹೇಳಿಕೊಟ್ಟಿದ್ದರು. ದರೋಡೆ ನಂತರ ಹೇಗೆ ತಪ್ಪಿಸಿಕೊಳ್ಳಬೇಕೆಂದು ಕೂಡ ತರಬೇತಿ ಕೊಟ್ಟಿದ್ದರು. ಪೊಲೀಸರು ಹೇಗೆ ಕೆಲಸ ಮಾಡುತ್ತಾರೆಂದು ಸಹ ತಿಳಿಸಿದ್ದರು ಎನ್ನಲಾಗಿದೆ. ಅದರಂತೆ ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ತಂಡವೇ 7.11 ಕೋಟಿ ರೂಪಾಯಿ ದರೋಡೆ ಮಾಡಿದೆ. ಸಿಎಂಎಸ್ ಸೆಕ್ಯೂರಿಟಿ ಎಜೆನ್ಸಿಯ ಮಾಜಿ ಉದ್ಯೋಗಿಗಳು ದರೋಡೆಯಲ್ಲಿ ಭಾಗಿಯಾಗಿದ್ದು, ಕದ್ದ ಹಣವನ್ನು ಬೆಂಗಳೂರಲ್ಲಿಯೇ ಬಚ್ಚಿಟ್ಟು ಪರಾರಿಯಾಗಿದ್ದಾರೆ ಎಂಬ ವಿಷಯ ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.

Also Read

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ ಹಣ ದರೋಡೆ; ಗ್ಯಾಂಗ್ ಪರಾರಿ! Video

ದರೋಡೆ ಪ್ರಕರಣದಲ್ಲಿ ಆರೋಪಿಗಳನ್ನು 24 ಗಂಟೆಯೊಳಗೆ ಪತ್ತೆಹಚ್ಚಬೇಕೆಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಪೊಲೀಸರಿಗೆ ಸೂಚನೆ ನೀಡಿದ್ದರು. ಈವರೆಗೆ ದರೋಡೆಕೋರರ ಸುಳಿವು ಸಿಕ್ಕಿ ಆರೋಪಿಗಳ ಫೋಟೋ ಬಿಡುಗಡೆ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments