ಬಿಜೆಪಿ ನಾಯಕ ಮಣಿಕಂಠ ರಾಥೋಡ್ ಅವರನ್ನು ನೆಲೋಗಿ ಪೊಲೀಸರು ಬಂಧಿಸಿದ್ದಾರೆ. 
ರಾಜ್ಯ

ಕೊಲೆ ಯತ್ನ ಆರೋಪ: BJP ಮುಖಂಡ ಮಣಿಕಂಠ ರಾಠೋಡ್​ ಬಂಧನ..!

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ತಡರಾತ್ರಿ ಮಣಿಕಂಠ ರಾಠೋಡ್​ ಅವರನ್ನು ಬಂಧಿಸಿದ್ದಾರೆ.

ಕಲಬುರಗಿ: ಕೊಲೆ ಯತ್ನ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ಶನಿವಾರ ಬಂಧಕ್ಕೊಳಪಡಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ತಡರಾತ್ರಿ ಮಣಿಕಂಠ ರಾಠೋಡ್​ ಅವರನ್ನು ಬಂಧಿಸಿದ್ದಾರೆ. ಸದ್ಯ ಮಣಿಕಂಠ ರಾಠೋಡ್​ನನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಾಟಿ ಔಷಧಿ ಕೊಡುತ್ತಿದ್ದ ರಶೀದ್ ಮತ್ಯಾ ಎಂಬಾತನ ಬಂಧನಕ್ಕೆ ಆಗ್ರಹಿಸಿ ಮಣಿಕಂಠ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ರಶೀದ್ ಬೆಂಬಲಿಗರೊಂದಿಗೆ ವಾಗ್ವಾದ ನಡೆಸಿ ಹೈಡ್ರಾಮಾ ಕ್ರಿಯೇಟ್ ಮಾಡಿದ್ದ.

ಈ ವೇಳೆ ರಶೀದ್ ಮತ್ಯಾ ಕಾರು ಚಾಲಕನ ತಲೆಗೆ ಕಲ್ಲೇಟು ಬಿದ್ದಿತ್ತು. ಸದ್ಯ ರಶೀದ್ ಮತ್ಯಾ ಚಾಲಕನ ದೂರಿನ ಮೇರೆಗೆ ಕೊಲೆ ಯತ್ನ ಆರೋಪದಲ್ಲಿ ಮಣಿಕಂಠ ರಾಠೋಡ್​​ನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದ್ದ ರಾಮ ಮಂದಿರ ದೇಣಿಗೆ ಹಣ ಷೇರುಗಳಲ್ಲಿ ಹೂಡಿಕೆ: 30 ಬ್ಯಾಂಕ್ ಖಾತೆಗಳ ಸ್ಥಗಿತ, ತನಿಖೆಯಿಂದ ಆಘಾತಕಾರಿ ಮಾಹಿತಿ ಬಹಿರಂಗ !

ಅಮೆರಿಕಾ ಅಧ್ಯಕ್ಷನ ಹತ್ಯೆಗೆ Iran ಭಾರೀ ಸಂಚು? Israel ರಹಸ್ಯ ಮಾಹಿತಿ; ಕೊನೆ ಕ್ಷಣದಲ್ಲಿ ವಿಮಾನ ಬದಲಿಸಿ 'Air Force One'ನಲ್ಲೇ ಪ್ರಯಾಣಿಸಿದ Trump..!

ಸಿದ್ದು ಆಶೀರ್ವಾದದಿಂದ ಸಚಿವರಾಗ್ತಾರಾ ಬಿ.ಕೆ.ಹರಿಪ್ರಸಾದ್? ಸಚಿವ ಸಂಪುಟ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷರ ಹೆಸರು ಮುನ್ನೆಲೆಗೆ..!

ರಾಜ್ಯದ ಅಭಿವೃದ್ಧಿಗೆ ಕೈಜೋಡಿಸೋಣ: ಕರ್ನಾಟಕದ ಹಿತಕ್ಕಾಗಿ ಒಟ್ಟಾಗಿ ಕೆಲಸ ಮಾಡೋಣ; ರಾಜ್ಯ ಸರ್ಕಾರಕ್ಕೆ HDK ಮನವಿ

'ಕೇಂದ್ರ ಸಚಿವರಾಗಿದ್ದು ಸಾಕು, ರಾಜೀನಾಮೆ ಕೊಟ್ಟು ಬನ್ನಿ: ನೀವು ಬಂದರಷ್ಟೇ ರೈತರು- ಬಡವರು- ಜನಸಾಮಾನ್ಯರು ಉಳಿಯೋಕೆ ಸಾಧ್ಯ'