ಪ್ರಲ್ಹಾದ್ ಜೋಶಿ, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

ಮುಸ್ಲಿಂ ಭವನಗಳಿಗೆ 67 ಕೋಟಿ ರೂ ಅನುದಾನ ಮಂಜೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ!

ರಾಜ್ಯ ಸರ್ಕಾರದ ಖಜಾನೆಯನ್ನು ಕೇವಲ ಒಂದೇ ಸಮುದಾಯಕ್ಕೆ ವಿನಿಯೋಗಿಸುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಕಿಡಿಕಾರಿದ್ದಾರೆ.

ನವದೆಹಲಿ: ಮುಸ್ಲಿಂ ಸಮುದಾಯ ಭವನಗಳಿಗಾಗಿ ರಾಜ್ಯ ಸರ್ಕಾರ ರೂ. 67 ಕೋಟಿ ಮಂಜೂರು ಮಾಡಿರುವ ಬಗ್ಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಓಲೈಕೆ ರಾಜಕಾರಣ ಮತ್ತು ತುಷ್ಟೀಕರಣಕ್ಕೆ ಸ್ವಲ್ಪ ಮಿತಿಯಿರಬೇಕು ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರದ ಖಜಾನೆಯನ್ನು ಕೇವಲ ಒಂದೇ ಸಮುದಾಯಕ್ಕೆ ವಿನಿಯೋಗಿಸುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಕಿಡಿಕಾರಿದ್ದಾರೆ.

ಮುಸ್ಲಿಂರಿಗೆ ಉದಾರಿ ಈ ಸಿಎಂ: ರಾಜ್ಯದ ಸಮಗ್ರ ಅಭಿವೃದ್ಧಿಗೆ ಅನುದಾನ ಒದಗಿಸದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಲ್ಪಸಂಖ್ಯಾತರ ವಿಷಯದಲ್ಲಿ ಮಾತ್ರ ಅತೀ ಉದಾರಿಯಾಗಿದ್ದಾರೆ. ರೈತರಿಗೆ ಪರಿಹಾರ ನೀಡಲು ಹಿಂದೆಮುಂದೆ ನೋಡುತ್ತಾರೆ. ನೌಕರರ ಸರಿಯಾಗಿ ಸಕಾಲಕ್ಕೆ ಸಂಬಳ ಕೊಡಲು ಹಣವಿಲ್ಲ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖರೀದಿಗೆ ಹಣವಿಲ್ಲ, ಹದಗೆಟ್ಟ ರಸ್ತೆಗಳಲ್ಲಿ ಗುಂಡಿ ಮುಚ್ಚಲು ಸಹ ಹಣವಿಲ್ಲ ಎನ್ನುವ ಸರ್ಕಾರ ಮುಸ್ಲಿಂ ಅಂದರೆ ಸಾಕು ಧಾರಾಕಾರವಾಗಿ ಅನುದಾನ ಮಂಜೂರು ಮಾಡ್ತದೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಒಂದೇ ಸಮುದಾಯದ ಸಂತೃಪ್ತಿ ಖಂಡನೀಯ:

ರಾಜ್ಯದಲ್ಲಿ ಶಾಲಾ ಮಕ್ಕಳ ಬಿಸಿಯೂಟಕ್ಕೂ ಹಣವಿಲ್ಲ ಎಂಬ ನೆಪ ಹೇಳುವ ಕಾಂಗ್ರೆಸ್ ಸರ್ಕಾರ ಕೇವಲ ಮತಬ್ಯಾಂಕ್‌ ಅನ್ನೇ ಗುರಿಯಾಗಿಸಿಕೊಂಡು ಒಂದು ಸಮುದಾಯಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡುತ್ತಿದೆ. ಇದು ಸಂವಿಧಾನದ ಸಮಾನತೆಯ ತತ್ತ್ವಗಳಿಗೆ ಸ್ಪಷ್ಟ ವಿರೋಧವಾಗಿದೆ.ರಾಜ್ಯದ ಒಟ್ಟಾರೆ ಹಿತಾಸಕ್ತಿ ಗಮನದಲ್ಲಿ ಇರಿಸಿಕೊಂಡು ಅನುದಾನ ಒದಗಿಸಬೇಕಾದ ಈ ಸರ್ಕಾರ, ಸಾರ್ವಜನಿಕ ಹಣವನ್ನು ಒಂದು ಸಮುದಾಯದ ಸಂತೃಪ್ತಿಗೆ ಬಳಸುತ್ತಿರುವುದು ಅತ್ಯಂತ ಖಂಡನೀಯ ಎಂದಿದ್ದಾರೆ

ಜನರೇ ಬುದ್ಧಿ ಕಲಿಸುತ್ತಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಕ್ರಮ ಸಂವಿಧಾನ ಮತ್ತು ಆಡಳಿತದ ಮೂಲ ಸಿದ್ಧಾಂತಕ್ಕೆ ಧಕ್ಕೆಯಾಗಿದೆ. ಸರ್ವರಿಗೂ ಸಮಾನ ಅವಕಾಶ ಒದಗಿಸುವುದು ಸಂವಿಧಾನಬದ್ಧ ಹೊಣೆಗಾರಿಕೆ ಆಗಿದೆ. ಅದು ಬಿಟ್ಟು ಮತಬ್ಯಾಂಕ್ ಗಾಗಿ ಹೀಗೆ ಓಲೈಕೆ ರಾಜಕಾರಣ ಮತ್ತು ತೀರಾ ತೀರಾ ತುಷ್ಟೀಕರಣಕ್ಕೆ ಇಳಿದರೆ ಮುಂದಿನ ದಿನಗಳಲ್ಲಿ ಜನರೇ ಬುದ್ಧಿ ಕಳಿಸುತ್ತಾರೆ ಎಂದು ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ