ಗಗನಯಾತ್ರಿ ಶುಭಾಂಶು ಶುಕ್ಲಾ 
ರಾಜ್ಯ

ನವೆಂಬರ್ 25 ರಂದು ನೆಹರು ತಾರಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಶುಭಾಂಶು ಶುಕ್ಲಾ ಸಂವಾದ..!

ಕರ್ನಾಟಕವು ಸದಾ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಪ್ರಗತಿಯಲ್ಲಿ ಮುಂಚೂಣಿಯಲ್ಲಿದ್ದು, ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಕುತೂಹಲ ಮತ್ತು ಹೊಸ ಆಲೋಚನೆಯನ್ನು ಬೆಳೆಸಲು ನೆರವಾಗುತ್ತವೆ.

ಬೆಂಗಳೂರು: ನವೆಂಬರ್‌ 25ರಂದು ಅಂತರಿಕ್ಷ ಗಗನಯಾನಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ನಡೆಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜೆಎನ್‌ಪಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವರಾದ ಎನ್‌.ಎಸ್‌ ಭೋಸರಾಜು ಅವರು ಸಭೆ ನಡೆಸಿ ಮಾತನಾಡಿದರು.

ಬಳಿಕ ಮಾತನಾಡಿದ ಅವರು, ಜೆಎನ್‌ಪಿ ಸಹಯೋಗದಲ್ಲಿ ಜವಾಹರಲಾಲ್ ನೆಹರು ಪ್ಲಾನೆಟೇರಿಯಂನ ಯು.ಆರ್.ರಾವ್ ಭವನದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಗಗನಯಾನಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಅಗತ್ಯವಿರುವ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಎಲ್ಲಾ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಹೇಳಿದರು.

ಈ ಕಾರ್ಯಕ್ರಮವು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗಗನಯಾತ್ರಿಯೊಂದಿಗೆ ನೇರವಾಗಿ ಸಂವಹನ ನಡೆಸಲು ಅಪರೂಪದ ಅವಕಾಶವನ್ನು ಒದಗಿಸುತ್ತದೆ.ರಾಜ್ಯದ ಇನ್ನಿತರೆ ಭಾಗಗಳ ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಾದೇಶಿಕ ವಿಜ್ಞಾನ ಕೇಂದ್ರಗಳಲ್ಲಿ ಲೈವ್ ಸ್ಟ್ರೀಮಿಂಗ್ ಮೂಲಕ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ವಿಜ್ಞಾನ, ಸಂಶೋಧನೆ ಹಾಗೂ ಬಾಹ್ಯಾಕಾಶ ಅನ್ವೇಷಣೆಯತ್ತ ಪ್ರೇರೇಪಿಸುತ್ತವೆ. ಕರ್ನಾಟಕವು ಸದಾ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಪ್ರಗತಿಯಲ್ಲಿ ಮುಂಚೂಣಿಯಲ್ಲಿದ್ದು, ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಕುತೂಹಲ ಮತ್ತು ಹೊಸ ಆಲೋಚನೆಯನ್ನು ಬೆಳೆಸಲು ನೆರವಾಗುತ್ತವೆ. ರಾಜ್ಯದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಬದ್ಧವಾಗಿದೆ.

ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಅಂತರಿಕ್ಷ ಯಾತ್ರಿಕರೊಂದಿಗೆ ಸಂವಾದಿಸಲು ಅಪರೂಪದ ಅವಕಾಶ ಒದಗಿಸುತ್ತದೆ. ಇದು ಅವರಲ್ಲಿ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದುವರಿಯುವ ಉತ್ಸಾಹವನ್ನು ಇನ್ನಷ್ಟು ಪೋಷಿಸಲಿದೆ. ನಮ್ಮ ಸರ್ಕಾರ ರಾಜ್ಯದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಬದ್ಧವಾಗಿದೆ. ಪ್ರಸಿದ್ಧ ಗಗನಯಾತ್ರಿಯೊಂದಿಗಿನ ಈ ಸಂವಾದವು ವಿದ್ಯಾರ್ಥಿಗಳಿಗೆ ಅಮೂಲ್ಯ ಅವಕಾಶವಾಗಿದೆ ಮತ್ತು ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭವಿಷ್ಯದ ವೃತ್ತಿಜೀವನವನ್ನು ಮುಂದುವರಿಸಲು ಅನೇಕರನ್ನು ಪ್ರೇರೇಪಿಸುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ