ಬೆಂಗಳೂರು ಎಟಿಎಂ ದರೋಡೆ ಪ್ರಕರಣ 
ರಾಜ್ಯ

ಬೆಂಗಳೂರು ಎಟಿಎಂ ವ್ಯಾನ್ ದರೋಡೆ: ಮತ್ತೋರ್ವ ಪ್ರಮುಖ ಆರೋಪಿ Xavier ತಮಿಳುನಾಡಿನಲ್ಲಿ ಬಂಧನ!

ಸೌತ್ ಎಂಡ್ ಸರ್ಕಲ್ ನಿಂದ ಸಿಎಂಎಸ್ ಏಜೆನ್ಸಿ ವಾಹನವನ್ನು ತಡೆದು 7 ಕೋಟಿ 11 ಲಕ್ಷ ದರೋಡೆ ಪ್ರಕರಣದ ಆರೇಳು ಮಂದಿ ಆರೋಪಿಗಳ ಪೈಕಿ ಈಗಾಗಲೇ 4 ಮಂದಿಯನ್ನು ಬಂಧಿಸಲಾಗಿದೆ.

ಚೆನ್ಮೈ: ಬೆಂಗಳೂರಿನಲ್ಲಿ ನಡೆದ ಎಟಿಎಂ ವ್ಯಾನ್ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ದುಷ್ಕರ್ಮಿಗಳು ಅಡ್ಡಗಟ್ಟಿ ಅದರಲ್ಲಿದ್ದ ಸುಮಾರು 7.11 ಕೋಟಿ ದರೋಡೆ ಮಾಡಿದ್ದರು.

ಈ ದರೋಡೆ ಪ್ರಕರಣದ ಸಂಬಂಧ ಇದೀಗ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೌತ್ ಎಂಡ್ ಸರ್ಕಲ್ ನಿಂದ ಸಿಎಂಎಸ್ ಏಜೆನ್ಸಿ ವಾಹನವನ್ನು ತಡೆದು 7 ಕೋಟಿ 11 ಲಕ್ಷ ದರೋಡೆ ಪ್ರಕರಣದ ಆರೇಳು ಮಂದಿ ಆರೋಪಿಗಳ ಪೈಕಿ ಈಗಾಗಲೇ 4 ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ ಆಂಧ್ರ ಪ್ರದೇಶದ ತಿರುಪತಿಯಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು.

ಅಲ್ಲದೆ ಪ್ರಮುಖ ಆರೋಪಿಗಳಾದ ರವಿ ಮತ್ತು ಕಾನ್ಸ್ ಟೇಬಲ್ ಅಣ್ಣಪ್ಪನನ್ನು ಕೂಡ ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು.

ಇದೀಗ ಈ ಪಟ್ಟಿಗೆ ಮತ್ತೋರ್ವ ಪ್ರಮುಖ ಆರೋಪಿ ಸೇರ್ಪಡೆಯಾಗಿದ್ದು ಕ್ಸೇವಿಯರ್ ಎಂಬಾತನನ್ನು ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬನಶಂಕರಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನೇತೃತ್ವ

ಬನಶಂಕರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೊಟ್ರೇಶಿ ನೇತೃತ್ವದ ವಿಶೇಷ ತಂಡ ತಮಿಳುನಾಡಿನಲ್ಲಿ ದಾಳಿ ನಡೆಸಿ ಆರೋಪಿಯನ್ನು ಹಿಡಿದು ತಂದಿದೆ. ಬೆಂಗಳೂರಿನ ಕಾಡುಗೊಂಡನಹಳ್ಳಿ ನಿವಾಸಿಯಾಗಿರುವ ಜೆ.ಕ್ಸೇ​ವಿಯರ್ ದರೋಡೆಯ ನಂತರ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ.

ಆರೋಪಿಯು ಕುಪ್ಪಂ ಪ್ರದೇಶದಲ್ಲಿ ಹಣದ ಬಾಕ್ಸ್‌ನ್ನು ತೆಗೆದು ನಗದನ್ನು ಚೀಲದಲ್ಲಿ ತುಂಬಿಕೊಂಡಿದ್ದಲ್ಲದೇ ದರೋಡೆಗೆ ಬಳಸಿದ್ದ ಇನ್ನೋವಾ ಕಾರನ್ನೂ ಅಲ್ಲಿಯೇ ಬಿಟ್ಟು, ಮತ್ತೊಂದು ವ್ಯಾಗನಾರ್ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದ ಎಂದು ತಿಳಿದುಬಂದಿದೆ.

ಚಿತ್ತೂರಿನ ಕುಪ್ಪಂ ಬಳಿ ಹಣದ ಪೆಟ್ಟಿಗೆಗಳು ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬನಶಂಕರಿ ಠಾಣೆಯ ಇನ್ಸ್ಪೆಕ್ಟರ್ ಕೊಟ್ರೇಶಿ ನೇತೃತ್ವದ ವಿಶೇಷ ಪೊಲೀಸರ ತಂಡ ಸೆರೆಹಿಡಿದಿದೆ. ಆರೋಪಿಯನ್ನು ಸಿದ್ದಾಪುರ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.

ಬನಶಂಕರಿ ಪೊಲೀಸರ ವಿಶೇಷ ತಂಡ ಆರೋಪಿಯನ್ನು ಪತ್ತೆ ಹಚ್ಚಿದ್ದು, ಸದ್ಯ ಸಿದ್ದಾಪುರ ಠಾಣೆಯಲ್ಲಿ ವಿಚಾರಣೆ ಮುಂದುವರಿದಿದೆ. ಈ ಹಿಂದೆ 5.30 ಕೋಟಿ ರೂ. ವಶಪಡಿಸಿಕೊಳ್ಳಲಾಗಿದ್ದು, ಎಟಿಎಂ ವಾಹನದಿಂದ ದರೋಡೆ ನಡೆಸಿದ್ದ ಆರೋಪಿಗಳ ತೀವ್ರ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು, ಮೆಟ್ರೋ ಸಂಚಾರ ವ್ಯತ್ಯಯ!

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

SCROLL FOR NEXT