ಕೊಲೆ ಆರೋಪಿಗಳ ಬಂಧನ 
ರಾಜ್ಯ

ಬೆಂಗಳೂರು: ಕಾರಿನಲ್ಲಿ ಸಹೋದರನನ್ನು ಕೊಂದು ಕೆರೆಗೆ ಶವ ಬಿಸಾಡಿದ ಅಣ್ಣ; ಮೂವರ ಬಂಧನ

ಕಲಬುರಗಿ ಜಿಲ್ಲೆಯ ಆಳಂದ ಮೂಲದ ಧನರಾಜ್ (24) ಕೊಲೆಯಾದವ. ಹತ್ಯೆ ಮಾಡಿದ ಅಣ್ಣ ಶಿವರಾಜ್(28) ಮತ್ತು ಆತನ ಸ್ನೇಹಿತರಾದ ಸಂದೀಪ್(24), ಪ್ರಶಾಂತ್(26) ಎಂಬುವರನ್ನು ಬನ್ನೇರುಘಟ್ಟ ಪೊಲೀಸ್ ಇನ್‌ಸ್ಪೆಕ್ಟರ್‌ ಕೃಷ್ಣಕುಮಾರ್ ನೇತೃತ್ವದ ತಂಡ ಬಂಧಿಸಿದೆ.

ಬೆಂಗಳೂರು: ಒಡಹುಟ್ಟಿದ ತಮ್ಮನನ್ನು ಅಣ್ಣನೇ ಕೊಲೆ ಮಾಡಿ ಮೃತದೇಹವನ್ನು ರಸ್ತೆ ಬದಿಯ ಪೊದೆಗೆ ಎಸೆದಿರುವ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಆಳಂದ ಮೂಲದ ಧನರಾಜ್ (24) ಕೊಲೆಯಾದವ. ಹತ್ಯೆ ಮಾಡಿದ ಅಣ್ಣ ಶಿವರಾಜ್(28) ಮತ್ತು ಆತನ ಸ್ನೇಹಿತರಾದ ಸಂದೀಪ್(24), ಪ್ರಶಾಂತ್(26) ಎಂಬುವರನ್ನು ಬನ್ನೇರುಘಟ್ಟ ಪೊಲೀಸ್ ಇನ್‌ಸ್ಪೆಕ್ಟರ್‌ ಕೃಷ್ಣಕುಮಾರ್ ನೇತೃತ್ವದ ತಂಡ ಬಂಧಿಸಿದೆ.

ಕುಡಿದು ಬಂದು ಗಲಾಟೆ ಮಾಡುವುದಲ್ಲದೆ, ಕಳ್ಳತನಕ್ಕೂ ಇಳಿದಿದ್ದ ತಮ್ಮನ ಕಾಟ ತಾಳಲಾರದೆ ಒಡ ಹುಟ್ಟಿದವನನ್ನು ಅಣ್ಣನೇ ಮರ್ಡರ್​ ಮಾಡಿರುವುದು ತನಿಖೆ ವೇಳೆ ಗೊತ್ತಾಗಿದೆ. ಕೊಲೆಯಾದ ಧನರಾಜ್ ಕಲಬುರಗಿಯಲ್ಲಿಯೇ ತಂದೆ-ತಾಯಿಯ ಜೊತೆ ವಾಸವಿದ್ದ. ಕೆಲಸಕ್ಕೆ ಹೋಗದೆ ಕಳ್ಳತನ ಮಾಡೋದರ ಜೊತೆಗೆ, ಕುಡಿದು ಬಂದು ಹೆತ್ತವರ ಮೇಲೆ ನಿತ್ಯ ಹಲ್ಲೆ ಮಾಡ್ತಿದ್ದ.

ಪ್ರಶ್ನೆ ಮಾಡಿದ ಸಹೋದರ ಶಿವರಾಜನ ಮೇಲೂ ಹಲವು ಬಾರಿ ಹಲ್ಲೆ ನಡೆಸಿದ್ದು, ಕೊಲೆ ಮಾಡುವುದಾಗಿ ಧಮ್ಕಿ ಹಾಕಿದ್ದ. ಮೊಬೈಲ್, ಕುರಿ ಸೇರಿದಂತೆ ಸಿಕ್ಕ ಸಿಕ್ಕ ಕಡೆ ಈತ ಕಳ್ಳತನ ಮಾಡುತ್ತಿದ್ದ. ಈತನ ಕೆಲಸದಿಂದಾಗಿ ಅದೆಷ್ಟೋ ಬಾರಿ ಮನೆ ಬಳಿ ಬಂದು ಜನರು ಗಲಾಟೆ ಮಾಡಿದ್ದರು. ಹೀಗಾಗಿ ಸಹೋದರ ಧನರಾಜ್​​ನ ಕಾಟ ತಾಳಲಾರದೆ ಆತನ ಕೊಲೆಗೆ ಸ್ನೇಹಿತರ ಜೊತೆ ಸೇರಿ ಶಿವರಾಜ್​ ಪ್ಲ್ಯಾನ್​​ ಮಾಡಿದ್ದ.

ಅದರ ಭಾಗವಾಗಿ ಕೆಲಸ ಕೊಡಿಸೋದಾಗಿ ಹೇಳಿ ಧನರಾಜ್​​ನನ್ನು ಬೆಂಗಳೂರಿಗೆ ಕರೆದಿದ್ದ. ಬೆಂಗಳೂರಿಗೆ ಬಂದ ಧನರಾಜ್​​ ಕಾರಿನಲ್ಲಿ ಕುಳಿತು ಮೊಬೈಲ್ ನೋಡ್ತಿದ್ದ ವೇಳೆ ಆತನ ಕೈಗಳನ್ನು ಹಿಂಬದಿಯಿಂದ ಶಿವರಾಜ್​​ ಸ್ನೇಹಿತರಾದ ಸಂದೀಪ್ ಮತ್ತು ಪ್ರಶಾಂತ್ ಹಿಡಿದುಕೊಂಡಿದ್ದಾರೆ.

ಈ ವೇಳೆ ಮಚ್ಚಿನಿಂದ ಧನರಾಜ್​​ ಕತ್ತಿನ ಭಾಗಕ್ಕೆ ಹೊಡೆದು ಕಾರಿನಲ್ಲಿಯೇ ಶಿವರಾಜ್​​ ಕೊಲೆ ಮಾಡಿದ್ದಾನೆ. ಬಳಿಕ ಕಗ್ಗಲೀಪುರ ರಸ್ತೆ ಬದಿಯ ಪೊದೆಯಲ್ಲಿ ಶವ ಎಸೆದು ಆರೋಪಿಗಳು ಎಸ್ಕೇಪ್​​ ಆಗಿದ್ದರು.

ಪ್ರಕರಣ ಸಂಬಂಧ ತನಿಖೆ ವೇಳೆ ಪೊಲೀಸರು ಸುತ್ತಮುತ್ತಲಿನ ಪ್ರದೇಶದಲ್ಲಿದ್ದ ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಿದಾಗ ಆರೋಪಿಗಳು ಶವ ಎಸೆದು ಹೋಗಿರೋದು ಗೊತ್ತಾಗಿದೆ. ಕಾರಿನ ನಂಬರ್ ಆಧರಿಸಿ ಆರೋಪಿಗಳನ್ನು ಬಂಧನ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

New Labour Codes- ಕೇಂದ್ರ ಸರ್ಕಾರದಿಂದ ಐತಿಹಾಸಿಕ 4 ಕಾರ್ಮಿಕ ಸಂಹಿತೆ ಜಾರಿ, ಯೂನಿಯನ್‌ ಗಳ ವಿರೋಧ, ಎಚ್ಚರಿಕೆ ಹೆಜ್ಜೆಯಿಡಲು ಕಂಪೆನಿಗಳ ನಿರ್ಧಾರ

ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ: ದೆಹಲಿಯಲ್ಲಿ ಡಿಕೆ ಶಿವಕುಮಾರ್ ಬಣದ ಮೇಲಾಟ; ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹೋರಾಟ!

ಇಂದು ಸಿಎಂ ಆಗಿರುವ ಮಹಾನುಭಾವರೇ ಅಂದು ಕುಮಾರಸ್ವಾಮಿ ಸರ್ಕಾರ ಕೆಡವಿದ್ರು: ಎಚ್.ಡಿ ದೇವೇಗೌಡ

ಬಣ ಬಡಿದಾಟ, ಅಧಿಕಾರ ಗುದ್ದಾಟ: ಇಂದು ಸಿದ್ದರಾಮಯ್ಯ- ಡಿಕೆಶಿ ಜೊತೆ ಮಲ್ಲಿಕಾರ್ಜುನ ಖರ್ಗೆ ಮುಖಾಮುಖಿ ಚರ್ಚೆ ಸಾಧ್ಯತೆ, ತೆರೆ ಎಳೆಯುತ್ತಾರೆಯೇ ಗೊಂದಲಕ್ಕೆ?

ನಾನಂತೂ ಬರೋಬ್ಬರಿ 100 ವರ್ಷ ಬದುಕುತ್ತೇನೆ: ಸಿಎಂ ಸಿದ್ದರಾಮಯ್ಯ

SCROLL FOR NEXT