ಹೆಚ್ ಡಿ ರೇವಣ್ಣ  
ರಾಜ್ಯ

ಹೆಚ್ ಡಿ ರೇವಣ್ಣ ವಿರುದ್ಧ ಮನೆಕೆಲಸದಾಕೆಯಿಂದ FIR: ರದ್ದುಗೊಳಿಸಿ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ

ಹೊಳೆನರಸೀಪುರದಲ್ಲಿ ರೇವಣ್ಣ ಅವರ ಮನೆಯಲ್ಲಿ ಕೆಲಸಕ್ಕಿದ್ದ 47 ವರ್ಷದ ಮಹಿಳೆ ಸಲ್ಲಿಸಿದ ದೂರಿನ ಆಧಾರದ ಮೇಲೆ ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ನ್ನು ಪ್ರಶ್ನಿಸಿ ಶಾಸಕ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಈ ಆದೇಶವನ್ನು ನ್ಯಾಯಮೂರ್ತಿ ಎಂಐ ಅರುಣ್ ಅವರು ಹೊರಡಿಸಿದ್ದಾರೆ.

ಬೆಂಗಳೂರು: ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮನೆಕೆಲಸದಾಕೆ ನೀಡಿದ ದೂರಿಗೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ವಿರುದ್ಧ ಮ್ಯಾಜಿಸ್ಟ್ರೇಟ್ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣವನ್ನು ಸೆಕ್ಷನ್ 354 (ಮಹಿಳೆಯ ಘನತೆಗೆ ಧಕ್ಕೆ) ಅಡಿಯಲ್ಲಿ ದಾಖಲಿಸಿ ನಂತರ ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಲಾಗಿತ್ತು.

"ದೂರು ದಾಖಲಿಸುವಲ್ಲಿನ ವಿಳಂಬವನ್ನು ಕ್ಷಮಿಸಲು ಮತ್ತು ಅರ್ಜಿದಾರ ಹೆಚ್ ಡಿ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354 ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ದಾಖಲಿಸಿದ ಅಪರಾಧಕ್ಕೆ ಸಂಬಂಧಿಸಿದಂತೆ ಸೂಕ್ತ ಆದೇಶ ನೀಡಲು ಇದು ಸೂಕ್ತವಾದ ಪ್ರಕರಣವೇ ಎಂದು ಪರಿಗಣಿಸಲು ಈ ವಿಷಯವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂತಿರುಗಿಸಲಾಗಿದೆ ಎಂದು ಹೈಕೋರ್ಟ್ ಹೇಳಿದೆ.

ಹೊಳೆನರಸೀಪುರದಲ್ಲಿ ರೇವಣ್ಣ ಅವರ ಮನೆಯಲ್ಲಿ ಕೆಲಸಕ್ಕಿದ್ದ 47 ವರ್ಷದ ಮಹಿಳೆ ಸಲ್ಲಿಸಿದ ದೂರಿನ ಆಧಾರದ ಮೇಲೆ ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ನ್ನು ಪ್ರಶ್ನಿಸಿ ಶಾಸಕ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಈ ಆದೇಶವನ್ನು ನ್ಯಾಯಮೂರ್ತಿ ಎಂಐ ಅರುಣ್ ಅವರು ಹೊರಡಿಸಿದ್ದಾರೆ.

ಅರ್ಜಿದಾರರ ವಿರುದ್ಧ ಸೆಕ್ಷನ್ 354 ಮತ್ತು 354A ಅಡಿಯಲ್ಲಿ ಅಪರಾಧಗಳನ್ನು ಹೊರಿಸಲಾಗಿದೆ ಎಂದು ನ್ಯಾಯಾಲಯ ಗಮನಿಸಿತು. ಸೆಕ್ಷನ್ 354 ರ ಅಡಿಯಲ್ಲಿನ ಅಪರಾಧವು ಐದು ವರ್ಷಗಳವರೆಗೆ ಶಿಕ್ಷೆಯನ್ನು ನೀಡಬಹುದಾದ್ದರಿಂದ, ನಾಲ್ಕು ವರ್ಷಗಳ ನಂತರ ದೂರು ದಾಖಲಾಗಿದೆ ಎಂಬ ಅಂಶವನ್ನು ಪರಿಶೀಲಿಸದೆ ವಿಚಾರಣಾ ನ್ಯಾಯಾಲಯವು ಅದನ್ನು ಗಮನಕ್ಕೆ ತೆಗೆದುಕೊಂಡು ಶಿಕ್ಷೆ ಪ್ರಕಟಿಸಿತ್ತು, ಅದನ್ನು ಪ್ರಶ್ನಿಸಿ ರೇವಣ್ಣ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಒಟ್ಟಾರೆಯಾಗಿ ದೂರನ್ನು ಓದಿದಾಗ, ಆರೋಪಗಳು ನಿಜವೆಂದು ಪರಿಗಣಿಸಲ್ಪಟ್ಟಿದ್ದರೂ ಸಹ, ಪೊಲೀಸ್ ವರದಿಯಲ್ಲಿ ಆರೋಪಿಸಲಾಗಿರುವಂತೆ ಸೆಕ್ಷನ್ 354 ಅಲ್ಲ, ಸೆಕ್ಷನ್ 354A ಅಡಿಯಲ್ಲಿ ಅರ್ಜಿದಾರರು ಮಾಡಿರುವ ಅಪರಾಧವಾಗಿದೆ ಎಂದು ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ: ದೆಹಲಿಯಲ್ಲಿ ಡಿಕೆ ಶಿವಕುಮಾರ್ ಬಣದ ಮೇಲಾಟ; ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹೋರಾಟ!

ಇಂದು ಸಿಎಂ ಆಗಿರುವ ಮಹಾನುಭಾವರೇ ಅಂದು ಕುಮಾರಸ್ವಾಮಿ ಸರ್ಕಾರ ಕೆಡವಿದ್ರು: ಎಚ್.ಡಿ ದೇವೇಗೌಡ

ಬಣ ಬಡಿದಾಟ, ಅಧಿಕಾರ ಗುದ್ದಾಟ: ಇಂದು ಸಿದ್ದರಾಮಯ್ಯ- ಡಿಕೆಶಿ ಜೊತೆ ಮಲ್ಲಿಕಾರ್ಜುನ ಖರ್ಗೆ ಮುಖಾಮುಖಿ ಚರ್ಚೆ ಸಾಧ್ಯತೆ, ತೆರೆ ಎಳೆಯುತ್ತಾರೆಯೇ ಗೊಂದಲಕ್ಕೆ?

ನಾನಂತೂ ಬರೋಬ್ಬರಿ 100 ವರ್ಷ ಬದುಕುತ್ತೇನೆ: ಸಿಎಂ ಸಿದ್ದರಾಮಯ್ಯ

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ಹಡಗುಗಳ ಗೌಪ್ಯ ಮಾಹಿತಿ ಸೋರಿಕೆ: ಉಡುಪಿಯಲ್ಲಿ ಮಧ್ಯಪ್ರದೇಶ ಮೂಲದ ಇಬ್ಬರ ಬಂಧನ

SCROLL FOR NEXT