ರಾಜ್ಯ

ಬೆಂಗಳೂರು: 7 ಕೋಟಿ ರೂ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಪೇದೆ ಅಮಾನತು!

ಬೆಂಗಳೂರಿನಲ್ಲಿ ಹಾಡುಹಗಲೇ ನಡೆದ 7 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ನನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಹಾಡುಹಗಲೇ ನಡೆದ 7 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ನನ್ನು ಅಮಾನತು ಮಾಡಲಾಗಿದೆ. ದರೋಡೆ ಪ್ರಕರಣದಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಅವರು ಪೇದೆ ಅಣ್ಣಪ್ಪ ನಾಯ್ಕ್ ನನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು, ಬೆಂಗಳೂರಿನ ಎಲ್ಲಾ ಪೊಲೀಸ್ ಠಾಣೆಯ ಪಿಎಸ್ಐ, ಎಎಸ್ಐ, ಹೆಡ್ ಕಾನ್ಸ್ಟೇಬಲ್, ಪೇದೆಗಳ ಮಾನಿಟರಿಂಗ್ ಮಾಡುವಂತೆ ಸೂಚಿಸಿದ್ದಾರೆ.

ಸಭೆ ನಡೆಸಿ ರಿಪೋರ್ಟ್ ನೀಡುವಂತೆ ಆಯಾ ವಿಭಾಗದ ಎಸಿಪಿ, ಡಿಸಿಪಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ CMS ಸಂಸ್ಥೆ ಮಾಜಿ ನೌಕರ ಕ್ಸೇವಿಯರ್, ಗೋವಿಂದಪುರ ಪೊಲೀಸ್ ಠಾಣಾ ಪೇದೆ ಅಣ್ಣಪ್ಪ ನಾಯ್ಕ್, ಹಾಲಿ CMS ಸಂಸ್ಥೆ ಸಿಬ್ಬಂದಿ ಗೋಪಿ, ರವಿ, ಜಿತೇಶ್‌ ಸೇರಿ ಒಟ್ಟು ಏಳು ದರೋಡೆಕೋರರನ್ನ ಬಂಧಿಸಲಾಗಿದ್ದು ಆರೋಪಿಗಳಿಂದ ರೂ.5.7 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ?: ಅಲ್ಲಿನ ವಿದೇಶಾಂಗ ಸಚಿವ ಹೇಳಿದ್ದಿಷ್ಟು...

ಬುರ್ಜ್ ಖಲೀಫಾಗೂ ತಟ್ಟಿದ ಇರಾನ್-ಅಮೆರಿಕ ಯುದ್ಧದ ಬಿಸಿ; ಕ್ಷಿಪಣಿ ದಾಳಿ ಏಷ್ಯಾದ ವ್ಯಕ್ತಿಯೋರ್ವ ಸಾವು!

ಪಾಕಿಸ್ತಾನ ವಿರುದ್ಧ ಶ್ರೀಲಂಕಾಗೆ 5 ರನ್ ವಿರೋಚಿತ ಸೋಲು; ಪಂದ್ಯ ಗೆದ್ದರೂ Pak ಸೆಮಿಸ್‌ನಿಂದ ಹೊರಕ್ಕೆ!

US-Israel attack on Iran: ಅಮೆರಿಕ-ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಇರಾನ್ ನ 85 ಶಾಲಾ ವಿದ್ಯಾರ್ಥಿನಿಯರ ಸಾವು!

T20 World Cup: ಪಾಕಿಸ್ತಾನದ ಸೆಮಿಸ್ ಆಸೆ ಕಸಿದುಕೊಂಡ ಶ್ರೀಲಂಕಾ; ಸೆಮಿಸ್‌ಗೆ ನ್ಯೂಜಿಲ್ಯಾಂಡ್ ಲಗ್ಗೆ!

SCROLL FOR NEXT