ಡಿಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಭೂ ಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪ, ತನಿಖೆಗೆ ಎಸ್ ಐಟಿ ರಚನೆ- ಡಿಕೆ ಶಿವಕುಮಾರ್

ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಕೃಷ್ಣ ಭಾಗ್ಯ ಜಲ ನಿಗಮದಲ್ಲಿ ಒಪ್ಪಿತ ಭೂಸ್ವಾಧೀನಕ್ಕೆ ಪರಿಹಾರದ ಮೊತ್ತ ಹೆಚ್ಚಿಸುವ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

ಬೆಂಗಳೂರು: ನೀರಾವರಿ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪಗಳ ಬಗ್ಗೆ ತನಿಖೆಗೆ ಎಸ್ಐಟಿ ರಚಿಸಲಾಗುವುದು. ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸಿ, ವಕೀಲರನ್ನು ವಜಾಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ನೀರಾವರಿ ಇಲಾಖೆಗೆ ಸಂಬಂಧಿಸಿದ 61, 843 ಪ್ರಕರಣಗಳು ಬಾಕಿ

ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಜಲ ಸಂಪನ್ಮೂಲ, ಬಿಡಿಎ ಭೂಸ್ವಾಧೀನ ಪ್ರಕರಣಗಳ ಕುರಿತು ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ, ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಕೃಷ್ಣ ಭಾಗ್ಯ ಜಲ ನಿಗಮದಲ್ಲಿ ಒಪ್ಪಿತ ಭೂಸ್ವಾಧೀನಕ್ಕೆ ಪರಿಹಾರದ ಮೊತ್ತ ಹೆಚ್ಚಿಸುವ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದೇವೆ. ಇದಕ್ಕೆ ಸುಮಾರು 75 ಸಾವಿರ ಕೋಟಿ ರೂ. ಮೀಸಲಿರಿಸಲಾಗುವುದು. ವಿವಿಧ ನೀರಾವರಿ ನಿಗಮಗಳ ವ್ಯಾಪ್ತಿಯಲ್ಲಿ 61, 843 ಪ್ರಕರಣಗಳಿವೆ ಎಂದರು.

ಕಂದಾಯ ಇಲಾಖೆಯವರು ಬೆಂಗಳೂರು ವ್ಯಾಪ್ತಿಯಲ್ಲಿ ತನಿಖೆ ಮಾಡಲು ಆದೇಶ ಮಾಡಿದ್ದು, ಅಧಿಕಾರಿಗಳು, ಕಾನೂನು ತಂಡದವರು ಸೇರಿ ಸರಿಯಾದ ಸಮಯದಲ್ಲಿ ಅರ್ಜಿ ಹಾಕದೇ ಕಾಲಹರಣ ಮಾಡಿರುವುದು ಕಂಡುಬಂದಿದೆ. ಈ ವಿಚಾರವಾಗಿ ವರದಿ ಸಲ್ಲಿಸುವಂತೆ ಸೂಚಿಸಿದ್ದೇವೆ. ಕೆಲವು ಪ್ರಮುಖ ಪ್ರಕರಣಗಳು ನ.10ರಂದು ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ನಡೆಯಲಿದ್ದು, ಅಷ್ಟರೊಳಗೆ ನಮ್ಮಲ್ಲಿ ಆಗಿರುವ ನ್ಯೂನ್ಯತೆ ಗಮನಕ್ಕೆ ತರಬೇಕಾಗಿದೆ. ಇದರ ಜೊತೆಗೆ ಎಸ್ಐಟಿ ರಚಿಸಿ ಎಲ್ಲೆಲ್ಲಿ ಯಾವ ರೀತಿ ಪಿತೂರಿ ನಡೆದಿದೆ ಎಂದು ವಿಚಾರಣೆ ನಡೆಸಲಾಗುವುದು. ಕರ್ತವ್ಯ ಲೋಪ ಮಾಡಿರುವ ಅಧಿಕಾರಿಗಳ ವಿರುದ್ಧ ಇಲಾಖೆವಾರು ತನಿಖೆಗೆ ಆದೇಶಿಸಿ ಎಲ್ಲರನ್ನು ಅಮಾನತುಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ನ್ಯಾಯಾಲಯದ ಹೊರಗೆ ಪ್ರಕರಣ ಇತ್ಯರ್ಥಕ್ಕೆ ಪ್ರಾಧಿಕಾರ ರಚನೆ: ನೂತನ ಕಾಯ್ದೆ ಪ್ರಕಾರ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಪ್ರಾಧಿಕಾರ ರಚನೆಗೆ ಅವಕಾಶವಿದೆ. ಆಮೂಲಕ ನ್ಯಾಯಾಲಯದ ಮೆಟ್ಟಿಲೇರದೆ ಇಲ್ಲೇ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲಾಗುವುದು. ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಹಾಗೂ ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ ಈ ಪ್ರಾಧಿಕಾರವನ್ನು ಯಾವ ರೀತಿ ರಚಿಸಬೇಕು ಎಂದು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು. ನಮ್ಮ ಸರ್ಕಾರ ಈ ಪ್ರಾಧಿಕಾರ ರಚಿಸಲಿದೆ ಎಂದು ತಿಳಿಸಿದರು.

ರೂ. 9 ಲಕ್ಷ ಪರಿಹಾರ ನಿಗದಿಯಾಗಿದ್ದರೆ 9 ಕೋಟಿ ಪರಿಹಾರಕ್ಕೆ ಕೋರ್ಟ್ ತೀರ್ಪು

“ಕೆಲವು ಸಂದರ್ಭದಲ್ಲಿ ಕಂದಾಯ ಇಲಾಖೆ ಭೂಸ್ವಾಧೀನ ಪ್ರಕ್ರಿಯೆ ಮಾಡಿದರೂ ಪರಿಹಾರ ಹಣ ನೀಡಬೇಕಾಗಿರುವುದು ನೀರಾವರಿ ಇಲಾಖೆಯ ವಿವಿಧ ನಿಗಮಗಳಾಗಿರುತ್ತವೆ. ಇಂತಹ ಪ್ರಕರಣಗಳಲ್ಲಿ ಈ ನಿಗಮಗಳನ್ನೇ ಪಾರ್ಟಿಯನ್ನಾಗಿ ಮಾಡದೇ ಪ್ರಕರಣ ನಡೆಸಲಾಗುತ್ತಿದೆ. ಇಂತಹ ಪ್ರಕರಣಗಳಲ್ಲಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸುತ್ತೇವೆ. ಸುಪ್ರೀಂ ಕೋರ್ಟ್ ನಲ್ಲಿ ಎಸ್ಎಲ್ ಪಿ ಅರ್ಜಿ ಹಾಕುತ್ತಿದ್ದು, ಕೆಲವು ಪ್ರಕರಣವನ್ನು ವಾಪಸ್ ತರಲು ಮುಂದಾಗಿದ್ದೇವೆ. ನೀರಾವರಿ ಇಲಾಖೆಯಲ್ಲಿ 9 ಲಕ್ಷ ರೂಪಾಯಿ ಪರಿಹಾರ ನಿಧಿ ಘೋಷಿಸಿದ್ದರೆ, ನ್ಯಾಯಾಲಯದಲ್ಲಿ ಅರ್ಜಿ ಹಾಕಿ 9, 10, 15, 20 ಕೋಟಿ ರೂಪಾಯಿ ಪರಿಹಾರ ನೀಡಲು ಆದೇಶ ನೀಡಲಾಗಿದೆ. ಹೀಗಾಗಿ ನಮ್ಮ ಸರ್ಕಾರ ಈ ತೀರ್ಮಾನಕ್ಕೆ ಬರಲಾಗಿದೆ ಎಂದರು.

ಇನ್ನು ಬೆಂಗಳೂರು ಬಿಸಿನೆಸ್ ಕಾರಿಡಾರ್ ರಸ್ತೆ 1 ಹಾಗೂ 2 ರಸ್ತೆಯ ಭೂಸ್ವಾಧೀನಕ್ಕೆ ಪರಿಹಾರ ನೀಡಲು ಐದು ಅವಕಾಶ ನೀಡಲಾಗಿದೆ. ಈ ಯೋಜನೆ ವಿಚಾರದಲ್ಲಿ ನಾವು ಹಿಂದೆ ಸರಿಯುವುದಿಲ್ಲ. ಆರು ತಿಂಗಳಲ್ಲಿ ನಾವು ಕೆಲಸ ಪ್ರಾರಂಭಿಸಬೇಕು. ಒಂದು ತಿಂಗಳ ಒಳಗಾಗಿ ಪರಿಹಾರ ವಿತರಣೆ ಆರಂಭಿಸಬೇಕು, ವಿಳಂಬ ಮಾಡಿದರೆ ಹಳೇ ಅಧಿಕಾರಿಗಳನ್ನು ತೆಗೆದುಹಾಕಿ ಹೊಸ ಅಧಿಕಾರಿಗಳ ನಿಯೋಜಿಸಿ ಕೆಲಸ ಮುಂದುವರಿಸುತ್ತೇವೆ ಎಂದು ತಿಳಿಸಿದರು..

ಮೇಕೆದಾಟು ಯೋಜನೆ ಹಂತ ಹಂತವಾಗಿ ಜಾರಿ

ಮೇಕೆದಾಟು ಯೋಜನೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಇಂದು ತೀರ್ಪಿನ ಪ್ರತಿ ಬಂದಿದೆ. ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು. ಈ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ, ನಿಯೋಗವನ್ನು ಕರೆದುಕೊಂಡು ಹೋಗುವ ಬಗ್ಗೆ ಸಂಸದರಿಗೆ ಮಾಹಿತಿ ನೀಡಬೇಕು, ಸರ್ವಪಕ್ಷ ಸಭೆ ಕರೆಯಬೇಕು. ಈ ಸಭೆಯನ್ನು ದೆಹಲಿಯಲ್ಲಿ ಮಾಡಬೇಕೇ ಅಥವಾ ಬೆಂಗಳೂರಿನಲ್ಲಿ ಮಾಡಬೇಕೇ ಎಂದು ಸಿಎಂ ಜತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಸಿಡಬ್ಲ್ಯೂಎಂಎ, ಸಿಡಬ್ಲ್ಯೂಸಿ ಮುಂದೆಯೇ ಈ ಪ್ರಕರಣ ಇತ್ಯರ್ಥವಾಗಬೇಕು. ನ್ಯಾಯಾಲಯದ ಮೆಟ್ಟಿಲೇರುವ ಪ್ರಮೇಯ ಇರುವುದಿಲ್ಲ. ನಮ್ಮ ನೀರು ನಮ್ಮ ಹಕ್ಕು ಹೆಜ್ಜೆ ಹಾಕಿದ್ದಕ್ಕೆ, ನಮ್ಮ ಪ್ರಾರ್ಥನೆಗೆ ಫಲ ಸಿಕ್ಕಿದೆ. ಇದಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಡಿಪಿಆರ್ ಸಲ್ಲಿಸಲಾಗುವುದು” ಎಂದು ತಿಳಿಸಿದರು.

ವಿಧಾನ ಪರಿಷತ್ ಸಭಾಧ್ಯಕ್ಷರ ಸ್ಥಾನವನ್ನು ಪಡೆಯಲು ಪ್ರಯತ್ನಿಸುತ್ತಿರುವ ಬಗ್ಗೆ ಕೇಳಿದಾಗ, “ನಮ್ಮ ಬಳಿ ಬಹುಮತವಿದೆ. ಎಲ್ಲಾ ಪರಿಷತ್ ಸದಸ್ಯರು ನನ್ನನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಮಾಡಿದ್ದಾರೆ. ಮುಂದಿನ ಅಧಿವೇಶನದಲ್ಲಿ ನಾವು ಈ ಬಗ್ಗೆ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಜನತೆ ದಿನಬೆಳಗಾದರೆ ನೋಡಿ ಬೇಸತ್ತು ಹೋಗಿದ್ದಾರೆ, ಕಾಂಗ್ರೆಸ್ ಹೈಕಮಾಂಡ್ ಸಿಎಂ ಯಾರು ಎಂದು ಸ್ಪಷ್ಟಪಡಿಸಲಿ: ಆರ್ ಅಶೋಕ್

ಬೆಂಗಳೂರು ಎಟಿಎಂ ವ್ಯಾನ್ ದರೋಡೆ: ದರೋಡೆ ಹಿಂದಿನ ಅಸಲಿ ಕಾರಣ ಬಹಿರಂಗ! ಇಡೀ ಪ್ರಕರಣದ ಸೂತ್ರದಾರ ಯಾರು ಗೊತ್ತಾ?

ಕೆ ಎನ್ ರಾಜಣ್ಣ ಪುತ್ರ ಅಮಿತ್ ಶಾರನ್ನು ಭೇಟಿಯಾಗಿದ್ದರೇ MLC ರಾಜೇಂದ್ರ ಏನೆಂದರು?

ನ.28ರಂದು ಉಡುಪಿಗೆ ಪ್ರಧಾನಿ ಮೋದಿ ಆಗಮನ: ರೋಡ್ ಶೋ ರದ್ದು, ಕಾರ್ಯಕ್ರಮ ವೇಳಾಪಟ್ಟಿ ಹೀಗಿದೆ...

ಹರಿಯಾಣ ಬಳಿಕ ಇದೀಗ ಉತ್ತರಾಖಂಡದಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ! ಶಾಲೆ ಬಳಿ ನೂರಾರು ಜಿಲೆಟಿನ್ ಕಡ್ಡಿಗಳು!

SCROLL FOR NEXT