ಬೀದರ್: ಜಿಲ್ಲೆಯ ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯ ಚಂಬೋಲ್-ಬೆನಕನಹಳ್ಳಿ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐದು ವರ್ಷದ ಮಗು ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಮೃತರನ್ನು ಮಲ್ಲಿಕಾರ್ಜುನ (35), ಅವರ ಮಗಳು ಮಹಾಲಕ್ಷ್ಮಿ (5) ಮತ್ತು ಪವನ್ (28) ಎಂದು ಗುರುತಿಸಲಾಗಿದೆ.
'ಬೀದರ್ ಜಿಲ್ಲೆಯ ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯ ಚಂಬೋಲ್-ಬೆನಕನಹಳ್ಳಿ ರಸ್ತೆಯಲ್ಲಿ ಶನಿವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐದು ವರ್ಷದ ಮಗು ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ. ಮೃತರನ್ನು ಮಲ್ಲಿಕಾರ್ಜುನ, ಅವರ ಮಗಳು ಮಹಾಲಕ್ಷ್ಮಿ ಮತ್ತು ಪವನ್ ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ಬೀದರ್‌ನಿಂದ ಔರಾದ್ ತಾಲ್ಲೂಕಿನ ಖಾನಾಪುರ ಗ್ರಾಮಕ್ಕೆ ಪತ್ನಿ, ಅತ್ತೆ ಮತ್ತು ಮಗುವಿನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು' ಎಂದು ಬೀದರ್ ಎಸ್‌ಪಿ ತಿಳಿಸಿದ್ದಾರೆ.
ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ ಮತ್ತು ಗಾಯಾಳುಗಳನ್ನು ಬ್ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
'ಪವನ್ ಔರಾದ್‌ನಿಂದ ಬೀದರ್‌ಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮಲ್ಲಿಕಾರ್ಜುನ ಮತ್ತು ಪವನ್ ಸ್ಥಳದಲ್ಲೇ ಸಾವಿಗೀಡಾದರೆ, ಮಹಾಲಕ್ಷ್ಮಿ ಬ್ರಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಮಲ್ಲಿಕಾರ್ಜುನ ಅವರ ಪತ್ನಿ ಮತ್ತು ಅತ್ತೆ ಗಾಯಗೊಂಡಿದ್ದು, ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾುಗತ್ತಿದೆ.
ಈ ಸಂಬಂಧ ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.