ನಾಗಾ ಸಾಧುಗಳ ಆಶೀರ್ವಾದ ಪಡೆದ ಡಿಕೆ ಶಿವಕುಮಾರ್ 
ರಾಜ್ಯ

ನಾಗಾ ಸಾಧುಗಳ ಆಶೀರ್ವಾದ, ಹುಲಿಗೆಮ್ಮೆ ದೇವಿ ಜೋಗತಿ ಭವಿಷ್ಯ! ಅಯ್ಯಪ್ಪ ಮಾಲಾಧಾರಿಗಳಿಂದ ವಿಶೇಷ ಪ್ರಾರ್ಥನೆ: ಸಿಎಂ ಆಗೇಬಿಡ್ತಾರಾ ಡಿಕೆಶಿ?

ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ಬಂದ ನಾಗ ಸಾಧುಗಳು ಡಿಕೆಶಿ ತಲೆ ಮೇಲೆ ಕೈ ಇಟ್ಟು ಆಶೀರ್ವಾದ ಮಾಡಿದ್ದಾರೆ.

ಗದಗ: ರಾಜ್ಯದಲ್ಲಿ ಸಿಎಂ ಕುರ್ಚಿ ಕದನ ಜೋರಾಗಿ ನಡೆಯುತ್ತಿರುವಂತೆಯೇ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರ ಪಟ್ಟು ಮುಂದುವರೆದಿದೆ. ಈ ಮಧ್ಯೆ ಕಾಶಿಯಿಂದ ಬಂದ ನಾಗ ಸಾಧುಗಳ ಆಶೀರ್ವಾದ ಡಿಸಿಎಂ ಡಿಕೆಶಿ ಅವರಿಗೆ ದೊರೆತಿದೆ.

ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ಬಂದ ನಾಗ ಸಾಧುಗಳು ಡಿಕೆಶಿ ತಲೆ ಮೇಲೆ ಕೈ ಇಟ್ಟು ಆಶೀರ್ವಾದ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಾಧುಗಳು, ಶಿವಕುಮಾರ್‌ ಸಿಎಂ ಆಗಲೆಂದು ಆಶೀರ್ವಾದ ಮಾಡಿದ್ದೇನೆ. ಅವರು ಮುಂದಿನ ಸಿಎಂ ಆಗ್ತಾರೆ ಎಂದು ಹೇಳಿ ತೆರಳಿದ್ದಾರೆ.

ಮತ್ತೊಂದೆಡೆ ಡಿಕೆ ಶಿವಕುಮಾರ್ ಅವರೇ ಮುಂದಿನ ಸಿಎಂ ಆಗಲಿದ್ದಾರೆ ಎಂದು ಗದಗದ ರಾಚೋಟೇಶ್ವರ ನಗರದ ನಿವಾಸಿ, ಹುಲಿಗೆಮ್ಮ ದೇವಿಯ ಜೋಗತಿ ಭೈಲಮ್ಮ ಬಾಳಮಣ್ಣ ಭವಿಷ್ಯ ನುಡಿದಿದ್ದಾರೆ. ಈ ಭವಿಷ್ಯ ಈಗ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಗದ್ದುಗೆ ಹಾಕಿ ದೇವಿ ಕೊಡ ಎತ್ತುವ ಮೂಲಕ ಜೋಗತಿ ಅಮ್ಮ ಭವಿಷ್ಯ ನುಡಿದಿದ್ದಾರೆ. ಹುಲಿಗೆಮ್ಮ ದೇವಿ ನೀಡಿರುವ ಭವಿಷ್ಯ ಸುಳ್ಳು ಆಗುವುದಿಲ್ಲ ಎಂದು ಜೋಗತಿ ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರೇ ನೀವು ಚಿಂತೆ ಮಾಡಬೇಡಿ ಸಿಎಂ ಆಗುತ್ತೀರಿ. ಎರಡೂವರೆ ತಿಂಗಳ ಒಳಗಾಗಿ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ. ಆದರೆ, ಹುಲಿಗೆಮ್ಮ ದೇವಿ ನೆನೆಪಿಸಿಕೊಂಡು ಮುಂದಿನ ಹೆಜ್ಜೆ ಇಡಬೇಕು. ಖುಷಿ ಖುಷಿಯಿಂದ ಡಿಕೆಶಿಗೆ ಸಿದ್ದರಾಮಯ್ಯ ಸ್ಥಾನ ಬಿಟ್ಟುಕೊಡುತ್ತಾರೆ ಎಂದು ಜೋಗತಿ ಭವಿಷ್ಯ ಹೇಳಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಅಯ್ಯಪ್ಪ ಮಾಲಾಧಾರಿಗಳು ಡಿಕೆ ಶಿವಕುಮಾರ್ ಮುಂದಿನ ಸಿಎಂ ಆಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!