ಅಶ್ವಿನಿ ಹಳಕಟ್ಟಿ 
ರಾಜ್ಯ

ಬೆಳಗಾವಿ: 4ನೇ ಮಗು ಕೂಡ ಹೆಣ್ಣಾಗಿದ್ದಕ್ಕೆ 3 ದಿನದ ಹಸುಗೂಸನ್ನು ಕತ್ತು ಹಿಸುಕಿ ಕೊಂದ ಪಾಪಿ ತಾಯಿ!

ಹಿರೇಮುಲಂಗಿ ಗ್ರಾಮದ ಪಾಪಿ ತಾಯಿ ಅಶ್ವಿನಿ ಹಳಕಟ್ಟಿಗೆ ಈಗಾಗಲೇ ಮೂವರು ಹೆಣ್ಣುಮಕ್ಕಳಿದ್ದು, ಗಂಡು ಮಗುವಿನ ನಿರೀಕ್ಷೆಯಲ್ಲಿದ್ದರು.

ಬೆಳಗಾವಿ: ಮತ್ತೆ ಹೆಣ್ಣುಮಗು ಜನಿಸಿದ್ದಕ್ಕೆ ಆಕ್ರೋಶಗೊಂಡ ಹೆತ್ತ ತಾಯಿ, ತನ್ನ ಮೂರು ದಿನದ ಹಸುಗೂಸನ್ನು ಕತ್ತು ಹಿಸುಕಿ ಕೊಲೆ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ನಡೆದಿದೆ.

ಹಿರೇಮುಲಂಗಿ ಗ್ರಾಮದ ಪಾಪಿ ತಾಯಿ ಅಶ್ವಿನಿ ಹಳಕಟ್ಟಿಗೆ ಈಗಾಗಲೇ ಮೂವರು ಹೆಣ್ಣುಮಕ್ಕಳಿದ್ದು, ಗಂಡು ಮಗುವಿನ ನಿರೀಕ್ಷೆಯಲ್ಲಿದ್ದರು. ಆದರೆ ನವೆಂಬರ್ 23ರಂದು ಮುದಕವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮತ್ತೆ ಹೆಣ್ಣು ಮಗುವಿಗೆ ಜನ್ಮನೀಡಿದ್ದಾರೆ.

ಅಶ್ವಿನಿ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ ಮಾರನೇ ದಿನವೇ ತವರುಮನೆ ಹಿರೇಮುಲಂಗಿಗೆ ಬಂದಿದ್ದಾರೆ. ಇಂದು ಬೆಳಗ್ಗೆ ತನ್ನ ತಾಯಿ ಹೊರ ಹೋದಾಗ ಅಶ್ವಿನಿ ಹಸುಗೂಸಿನ ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮಗು ಉಸಿರಾಡುತ್ತಿಲ್ಲ ಅಂತಾ ಡ್ರಾಮಾ ಮಾಡಿದ್ದಾರೆ.

ತಕ್ಷಣ ರಾಮದುರ್ಗ ತಾಲೂಕಾಸ್ಪತ್ರೆಗೆ ಮಗು ಕರೆತರಲಾಗಿದ್ದು, ಪರಿಶೀಲಿಸಿದ ವೈದ್ಯರು ಕತ್ತು ಹಿಸುಕಿದ್ದರಿಂದ ಮಗು ಉಸಿರುಗಟ್ಟಿ ಸಾವನ್ನಪ್ಪಿದೆ ಎಂದು ಹೇಳಿದ್ದಾರೆ. ಅಲ್ಲದೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಆಗಮಿಸಿದ ರಾಮದುರ್ಗ ಡಿವೈಎಸ್​ಪಿ ಚಿದಂಬರ ಮಡಿವಾಳರ್ ಅವರು ಮಗುವಿನ ತಾಯಿಯನ್ನು ವಶಕ್ಕೆ ಪಡೆದಿದ್ದಾರೆ. ಅಶ್ವಿನಿ ಕೂಡ ಬಾಣಂತಿ ಹಿನ್ನೆಲೆಯಲ್ಲಿ ಪೊಲೀಸ್ ಕಾವಲಿನಲ್ಲಿ ಅಶ್ವಿನಿಗೆ ರಾಮದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಆರೈಕೆ ಮಾಡುತ್ತಿದ್ದಾರೆ.

ಈ ಸಂಬಂಧ ಸುರೇಬಾನ ಪೊಲೀಸ್ ಠಾಣೆಯಲ್ಲಿ ತಾಯಿ ವಿರುದ್ಧ ಕೊಲೆ ಕೇಸ್ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು