ಮಹಾಂತೇಶ್ ಬೀಳಗಿ 
ರಾಜ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕಲಬುರಗಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ.

ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್‌ ಬೀಳಗಿ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಇಂದು ಜೇವರ್ಗಿ ಬೈಪಾಸ್ ಬಳಿ ಅಪಘಾತಕ್ಕೀಡಾಗಿದೆ. ಭೀಕರ ಅಪಘಾತದಲ್ಲಿ ಮಹಾಂತೇಶ್ ಬಿಳಗಿ ಅವರ ಸಹೋದರ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಈ ಅಪಘಾತ ಸಂಭವಿಸಿದೆ. ಕಾರಿಗೆ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಆಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel