ಶಿವಕುಮಾರ್ ಮತ್ತು ರಮ್ಯಾ 
ರಾಜ್ಯ

ನಕಲಿ ನಂದಿನಿ ತುಪ್ಪ ರಾಕೆಟ್ ಬೇಧಿಸಿದ CCB ಪೊಲೀಸರು: ಕಿಂಗ್‌ಪಿನ್ ದಂಪತಿ ಬಂಧನ

ಬಂಧಿತ ಆರೋಪಿಗಳನ್ನು ಶಿವಕುಮಾರ್ ಮತ್ತು ಆತನ ಪತ್ನಿ ರಮ್ಯಾ ಎಂದು ಗುರುತಿಸಲಾಗಿದೆ. ಸಿಸಿಬಿ ಪೊಲೀಸರ ತನಿಖೆ ವೇಳೆ ಈ ದಂಪತಿಯೇ ನಕಲಿ ನಂದಿನಿ ಉತ್ಪನ್ನಗಳ ತಯಾರಿಕೆ ಘಟಕದ ಕಿಂಗ್‌ಪಿನ್‌ಗಳು ಎಂಬುದು ದೃಢಪಟ್ಟಿದೆ.

ಬೆಂಗಳೂರು: ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕಾ ಘಟಕವನ್ನು ಸ್ಥಾಪಿಸಿ ರಾಜ್ಯಾದ್ಯಂತ ನಕಲಿ ಉತ್ಪನ್ನಗಳನ್ನು ವಿತರಿಸುತ್ತಿದ್ದ ಪ್ರಮುಖ ಸೂತ್ರಧಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಶಿವಕುಮಾರ್ ಮತ್ತು ಆತನ ಪತ್ನಿ ರಮ್ಯಾ ಎಂದು ಗುರುತಿಸಲಾಗಿದೆ. ಸಿಸಿಬಿ ಪೊಲೀಸರ ತನಿಖೆ ವೇಳೆ ಈ ದಂಪತಿಯೇ ನಕಲಿ ನಂದಿನಿ ಉತ್ಪನ್ನಗಳ ತಯಾರಿಕೆ ಘಟಕದ ಕಿಂಗ್‌ಪಿನ್‌ಗಳು ಎಂಬುದು ದೃಢಪಟ್ಟಿದೆ.

ಸಿಸಿಬಿ ಡಿಸಿಪಿ ಶ್ರೀಹರಿಬಾಬು ಅವರು ನೀಡಿರುವ ಮಾಹಿತಿ ಪ್ರಕಾರ, ಆರೋಪಿ ದಂಪತಿಗಳು ನೆರೆಯ ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕೆ ಘಟಕವನ್ನು ಸ್ಥಾಪಿಸಿದ್ದರು. ಈ ಘಟಕದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ, ನಕಲಿ ತುಪ್ಪ ತಯಾರಿಸಲು ಬಳಸುತ್ತಿದ್ದ ದೊಡ್ಡ ದೊಡ್ಡ ಹೈಟೆಕ್ ಮೆಷಿನರಿಗಳು ಮತ್ತು ಅತ್ಯಾಧುನಿಕ ಯಂತ್ರಗಳು ಪತ್ತೆಯಾಗಿವೆ.

ಈ ಯಂತ್ರಗಳನ್ನು ಬಳಸಿಕೊಂಡು ದಂಪತಿಗಳು ನಂದಿನಿ ಲೇಬಲ್‌ನ ನಕಲಿ ತುಪ್ಪಗಳನ್ನು ತಯಾರಿಸಿ, ರೀ-ಪ್ಯಾಕಿಂಗ್ ಮಾಡಿ ಮಾರಾಟ ಮಾಡುತ್ತಿದ್ದರು. ದಾಳಿ ವೇಳೆ ಪೊಲೀಸರು ಮೆಷಿನರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಕಳೆದ ನವೆಂಬರ್ 14 ರಂದು ಚಾಮರಾಜಪೇಟೆಯಲ್ಲಿರುವ ಗೋದಾಮಿನ ಮೇಲೆ ದಾಳಿ ನಡೆಸಿ ನಂದಿನಿ ತುಪ್ಪವನ್ನು ವಶಪಡಿಸಿಕೊಂಡಿದ್ದರು. ಈ ನಕಲಿ ಉತ್ಪನ್ನಗಳನ್ನು ಕೆಲ ನಂದಿನಿ ಪಾರ್ಲರ್‌ಗಳು ಮತ್ತು ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿತ್ತು. ಆ ಸಮಯದಲ್ಲಿ ಪ್ರಕರಣ ದಾಖಲಿಸಿ, ವಿತರಣಾ ಜಾಲದಲ್ಲಿದ್ದ ಡಿಸ್ಟ್ರಿಬ್ಯೂಟರ್ ಮಹೇಂದ್ರ, ಆತನ ಮಗ ದೀಪಕ್, ಮತ್ತು ಮುನಿರಾಜು ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಲಾಗಿತ್ತು.

ಬಂಧಿತರಾಗಿರುವ ಶಿವಕುಮಾರ್ ಮತ್ತು ರಮ್ಯಾ ದಂಪತಿಗಳು ತಯಾರಿಸಿದ ನಕಲಿ ಉತ್ಪನ್ನಗಳನ್ನೇ ಈ ಮಹೇಂದ್ರ ಅಂಡ್ ಗ್ಯಾಂಗ್ ರಾಜ್ಯಾದ್ಯಂತ ವಿತರಿಸುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಪ್ರಕರಣದ ಗಂಭೀರತೆ ಅರಿತು ತನಿಖೆ ಮುಂದುವರಿಸಿರುವ ಸಿಸಿಬಿ ಪೊಲೀಸರು, ಆರೋಪಿ ದಂಪತಿಗಳ ಬ್ಯಾಂಕ್ ಖಾತೆಯಲ್ಲಿದ್ದ ಸುಮಾರು 60 ಲಕ್ಷ ರೂಪಾಯಿ ಹಣವನ್ನು ಫ್ರೀಜ್ ಮಾಡಿದ್ದಾರೆ. ಅಲ್ಲದೆ, ನಕಲಿ ತುಪ್ಪದಲ್ಲಿ ಏನೆಲ್ಲಾ ಕಳಪೆ ವಸ್ತುಗಳನ್ನು ಮಿಶ್ರಣ ಮಾಡಲಾಗಿದೆ ಎಂಬುದನ್ನು ಪತ್ತೆ ಹಚ್ಚಲು, ವಶಪಡಿಸಿಕೊಂಡ ಮಾದರಿಗಳನ್ನು ಎಫ್‌ಎಸ್‌ಎಲ್ (FSL) ವಿಶ್ಲೇಷಣೆಗಾಗಿ ಕಳುಹಿಸಲಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Please wait...': ಡಿ.ಕೆ ಶಿವಕುಮಾರ್ ಗೆ ರಾಹುಲ್ ಗಾಂಧಿ ವಾಟ್ಸ್​ಆ್ಯಪ್​​ ಸಂದೇಶ; ಹೇಳಿದ್ದೇನು?

ರಾಹುಲ್ ಗಾಂಧಿ ವಾಟ್ಸ್​ಆ್ಯಪ್​​ ಸಂದೇಶದ ಬಗ್ಗೆ ಮಾಧ್ಯಮಗಳ ಮುಂದೆ ಚರ್ಚಿಸಲ್ಲ: ಡಿಕೆ ಶಿವಕುಮಾರ್

'ನನ್ನ ಕೋಚಿಂಗ್ ನಲ್ಲೇ ತಂಡ ಚಾಂಪಿಯನ್ಸ್ ಟ್ರೋಫಿ, ಏಷ್ಯಾಕಪ್ ಗೆದ್ದಿದೆ.. ಮರೆಯಬೇಡಿ': ಕೋಚ್ ಗೌತಮ್ ಗಂಭೀರ್

ಚಿತ್ರದುರ್ಗದ ಮುರುಘಾ ಶ್ರೀಗೆ ಬಿಗ್ ರಿಲೀಫ್; ಪೋಕ್ಸೋ ಪ್ರಕರಣದಲ್ಲಿ ಖುಲಾಸೆಗೊಳಿಸಿ ಕೋರ್ಟ್ ತೀರ್ಪು

'HR88 B8888' ಭಾರತದ ಅತ್ಯಂತ ದುಬಾರಿ ಕಾರು ನೋಂದಣಿ ಸಂಖ್ಯೆ, ಬೆಲೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ?

SCROLL FOR NEXT