ಖುಲಾಸೆಗೊಂಡ ನಂತರ ಮುರುಘಾ ಶ್ರೀ 
ರಾಜ್ಯ

ಚಿತ್ರದುರ್ಗದ ಮುರುಘಾ ಶ್ರೀಗೆ ಬಿಗ್ ರಿಲೀಫ್; ಪೋಕ್ಸೋ ಪ್ರಕರಣದಲ್ಲಿ ಖುಲಾಸೆಗೊಳಿಸಿ ಕೋರ್ಟ್ ತೀರ್ಪು

2022 ಆಗಸ್ಟ್‌ 31 ರಂದು ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಬುಧವಾರ ಬಿಗ್ ರಿಲೀಫ್ ನೀಡಿದ್ದು, ಪೋಕ್ಸೋ ಪ್ರಕರಣದಲ್ಲಿ ಶ್ರೀಗಳು ಹಾಗೂ ಇತರ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.

2022 ಆಗಸ್ಟ್‌ 31 ರಂದು ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್‌ 1ರಂದು ಶ್ರೀಗಳ ಬಂಧನವಾಗಿತ್ತು. ಸುಮಾರು 14 ತಿಂಗಳ ಕಾಲ ಜೈಲಿನಲ್ಲಿದ್ದ, ಶ್ರೀಗಳು 2023 ನವೆಂಬರ್ 16ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗೆ ಬಂದಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್, ಮೊದಲ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ.

ಪ್ರಕರಣದ ಎರಡನೇ ಆರೋಪಿ ರಶ್ಮಿ ಹಾಗೂ ನಾಲ್ಕನೇ ಆರೋಪಿ ಪರಮಶಿವಯ್ಯ ಅವರನ್ನು ಕೂಡ ನಿರ್ದೋಷಿ ಎಂದು ಕೋರ್ಟ್​​ ತೀರ್ಪು ನೀಡಿದ್ದು, ಮುರುಘಾಶ್ರೀ ಪರವಾಗಿ ವಕೀಲ ಸಿ.ವಿ.ನಾಗೇಶ್​ ವಾದ ಮಂಡಿಸಿದ್ದರು.

ಮಹತ್ವದ ತೀರ್ಪಿನ ಹಿನ್ನೆಲೆಯಲ್ಲಿ, ಆರೋಪಿ ಸ್ಥಾನದಲ್ಲಿರುವ ಮುರುಘಾ ಶರಣರು ಇಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅವರೊಂದಿಗೆ ಪ್ರಕರಣದ ಎರಡನೇ ಆರೋಪಿ (ಎ-2) ರಶ್ಮಿ ಹಾಗೂ ನಾಲ್ಕನೇ ಆರೋಪಿ (ಎ-4) ಹಾಗೂ ಮಠದ ಮ್ಯಾನೇಜರ್ ಆಗಿರುವ ಪರಮಶಿವಯ್ಯ ಕೂಡ ಕೋರ್ಟ್‌ಗೆ ಆಗಮಿಸಿದ್ದರು.

ಮಠದ ಹಾಸ್ಟೆಲ್​​ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮುರುಘಾಶ್ರೀ, ಲೇಡಿ ವಾರ್ಡನ್ ರಶ್ಮಿ, ಬಸವಾದಿತ್ಯ, ಮ್ಯಾನೇಜರ್ ಪರಮಶಿವಯ್ಯ ಹಾಗೂ ವಕೀಲ ಗಂಗಾಧರಯ್ಯ ವಿರುದ್ಧ ದೂರು ನೀಡಿದ್ದರು.

ಈ ಸಂಬಂಧ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾ ಶ್ರೀ ವಿರುದ್ಧ ಮೊದಲ ಪೋಕ್ಸೋ ಕೇಸ್​ ದಾಖಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT