ಮೋದಿ ರೋಡ್ ಶೋ (ಸಂಗ್ರಹ ಚಿತ್ರ) 
ರಾಜ್ಯ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಉಡುಪಿ ಜಿಲ್ಲಾ ಬಿಜೆಪಿಯಿಂದ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ.

ಉಡುಪಿ: ನವೆಂಬರ್ 28 (ಶುಕ್ರವಾರ) ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೃಷ್ಣನಗರಿ ಉಡುಪಿಗೆ ಭೇಟಿ ನೀಡುತ್ತಿದ್ದು, ಭೇಟಿ ವೇಳೆ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಈ ಕುರಿತು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರ್ ನವೀನ್ ಶೆಟ್ಟಿ ಅವರು ಮಾಹಿತಿ ನೀಡಿದ್ದು, ಬೆಳಿಗ್ಗೆ ಗಂಟೆ 11:40ಕ್ಕೆ ಪ್ರಧಾನಿ ಮೋದಿ ಅವರ ರೋಡ್ ಶೋ ಉಡುಪಿ-ಬನ್ನಂಜೆಯ ಡಾ.ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್‌ನಿಂದ ಪ್ರಾರಂಭಗೊಂಡು ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಲ್ಸಂಕ ಜಂಕ್ಷನ್ ವರೆಗೆ ಸಾಗಲಿದೆ ಎಂದು ಹೇಳಿದ್ದಾರೆ.

ಕಲ್ಸಂಕ ರಸ್ತೆಯಿಂದ ನೇರವಾಗಿ ಪಾರ್ಕಿಂಗ್ ಏರಿಯಾ-ರಥಬೀದಿ ಮೂಲಕ ಮಧ್ಯಾಹ್ನ ಗಂಟೆ 12ಕ್ಕೆ ಶ್ರೀ ಕೃಷ್ಣ ಮಠವನ್ನು ತಲುಪಿ, ಶ್ರೀ ಕೃಷ್ಣ ದರ್ಶನ ಪಡೆಯಲಿದ್ದಾರೆ. ನಂತರ ಲಕ್ಷ ಕಾಂತ ಗೀತಾ ಪಾರಾಯಣ"ದಲ್ಲಿ ಭಾಗವಹಿಸಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಉಡುಪಿ ಜಿಲ್ಲಾ ಬಿಜೆಪಿಯಿಂದ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ರೋಡ್ ಶೋ ಮಾರ್ಗದಲ್ಲಿ, ಸಾಂಸ್ಕೃತಿಕ ತಂಡಗಳು ಯಕ್ಷಗಾನ, ಹುಲಿ ನೃತ್ಯ ತಂಡಗಳು ಮತ್ತು ಶ್ರೀಕೃಷ್ಣನ ವೇಷ ಧರಿಸಿದ ಕಲಾವಿದರು ಸೇರಿದಂತೆ ಕರಾವಳಿ ಕರ್ನಾಟಕದ ಕಲಾ ಪ್ರಕಾರಗಳನ್ನು ಪ್ರದರ್ಶನಗೊಳ್ಳಲಿವೆ.

ರಸ್ತೆಯ ಒಂದು ಬದಿಯಲ್ಲಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಲಾಗಿದ್ದು, ಪ್ರಧಾನಿಯನ್ನು ಸ್ವಾಗತಿಸಲು 30,000 ಕ್ಕೂ ಹೆಚ್ಚು ಜನರು ಸಾಲುಗಟ್ಟಿ ನಿಲ್ಲುವ ನಿರೀಕ್ಷೆಯಿದೆ. ರೋಡ್ ಶೋ ವೀಕ್ಷಣೆ ಮಾಡುವ ಸಮಸ್ತ ನಾಗರಿಕರು ನ.28 ಶುಕ್ರವಾರ ಬೆಳಿಗ್ಗೆ ಗಂಟೆ 10:30ರೊಳಗೆ ಬನ್ನಂಜೆ-ಕಲ್ಸಂಕ ರಸ್ತೆಯ ಇಕ್ಕೆಲಗಳಲ್ಲಿ ಉಪಸ್ಥಿತರಿರುವಂತೆ ಕೋರಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲೆಯ 1,112 ಮತಗಟ್ಟೆಗಳ ಪ್ರತೀ ಬೂತ್‌ಗಳಿಂದ ತಲಾ 12 ಮಂದಿಯ ತಂಡ ಕಡ್ಡಾಯವಾಗಿ ಪಾಲ್ಗೊಳ್ಳಬೇಕೆಂದು ಜಿಲ್ಲಾ ಬಿಜೆಪಿಯಿಂದ ಆದೇಶಿಸಲಾಗಿದೆ. ಉಡುಪಿ ನಗರ ಭಾಗದಿಂದ ಗರಿಷ್ಠ ಸಂಖ್ಯೆಯ ಜನತೆ ಭಾಗವಹಿಸಲಿದ್ದಾರೆ.

2018ರ ಬಳಿಕ ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ತಿರದಿಂದ ನೋಡುವ ಸದವಕಾಶ ಜಿಲ್ಲೆಯ ಜನತೆಗೆ ಲಭಿಸುತ್ತಿದೆ. ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ವೈ. ರಾಘವೇಂದ್ರ, ಕ್ಯಾ. ಬ್ರಿಜೇಶ್ ಚೌಟ ಸಹಿತ ಜಿಲ್ಲೆಯ ಶಾಸಕರು, ರಾಜ್ಯದ ಪ್ರಮುಖ ನಾಯಕರು ಈ ಭಾವನಾತ್ಮಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು, ಮೋದಿ ಅಭಿಮಾನಿಗಳ ಸಹಿತ ಜಿಲ್ಲೆಯ ಮಹಾ ಜನತೆ ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶ್ವ ನಾಯಕ, ಹೆಮ್ಮೆಯ ಪ್ರಧಾನಿ ಮೋದಿ ಅವರನ್ನು ಸಂಭ್ರಮದಿಂದ ಸ್ವಾಗತಿಸಬೇಕು ಎಂದು ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Please wait...': ಡಿ.ಕೆ ಶಿವಕುಮಾರ್ ಗೆ ರಾಹುಲ್ ಗಾಂಧಿ ವಾಟ್ಸ್​ಆ್ಯಪ್​​ ಸಂದೇಶ; ಹೇಳಿದ್ದೇನು?

ಭಾರತದ ಸಿಇಸಿ ಜ್ಞಾನೇಶ್ ಕುಮಾರ್ ಗೆ ವಿಶ್ವ ಚುನಾವಣಾ ಸಂಸ್ಥೆಯ ಅಧ್ಯಕ್ಷ ಹುದ್ದೆ!

ಹಾಂಗ್ ಕಾಂಗ್ ನಲ್ಲಿ ಭೀಕರ ಅಗ್ನಿ ಅವಘಡ: 32 ಅಂತಸ್ತಿನ ಅಪಾರ್ಟ್ ಮೆಂಟ್ ಗೆ ಬೆಂಕಿ, 13 ಮಂದಿ ಸಾವು, 700 ಮಂದಿ ಸ್ಥಳಾಂತರ! Video

ಐಎಎಸ್​ ಅಧಿಕಾರಿ ಮಹಾಂತೇಶ ಬೀಳಗಿ ಪಂಚಭೂತಗಳಲ್ಲಿ ಲೀನ: ಏಕಕಾಲಕ್ಕೆ ನಾಲ್ವರ ಅಂತ್ಯಕ್ರಿಯೆ

'ಉಪದೇಶ ನೀಡಲು ನೈತಿಕ ಆಧಾರವೇ ಇಲ್ಲ': ರಾಮ ಮಂದಿರ ಧ್ವಜಾರೋಹಣ ಸಮಾರಂಭ ಟೀಕಿಸಿದ್ದ ಪಾಕಿಸ್ತಾನಕ್ಕೆ ತಿವಿದ ಭಾರತ

SCROLL FOR NEXT