ಕೊಲೆಯಾದ ಯುವಕ 
ರಾಜ್ಯ

ಮೈಸೂರು: ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ; ಹೆಚ್ಚಿದ ಆತಂಕ

ಯುವಕ ತಪ್ಪಿಸಿಕೊಳ್ಳಲು ಯತ್ನಿಸಿದರೂ ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಕೊಲೆ ಮಾಡಿದ್ದಾರೆ. ಯುವಕನ ಎದೆ ಮತ್ತು ಬೆನ್ನಿನ ಭಾಗಕ್ಕೆ ಇರಿದು ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಕೊಲೆ ನಡೆಯುವ ಸ್ಥಳದಲ್ಲಿ ಸಾರ್ವಜನಿಕರು ಓಡಾಡುತ್ತಿದ್ದರೂ ಯಾರೊಬ್ಬರೂ ಈತನ ಸಹಾಯಕ್ಕೆ ಬರಲಿಲ್ಲ.

ಮೈಸೂರು: ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿರುವ ಘಟನೆ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.

ಕೊಲೆಯಾದ ಯುವಕನನ್ನು ಸಯ್ಯದ್ ಸುಫಿಯಾನ್ (19) ಎಂದು ಗುರುತಿಸಲಾಗಿದೆ. ಬುಧವಾರ ಬೆಳಿಗ್ಗೆ 5.40 ಗಂಟೆ ಸಮಯದಲ್ಲಿ ಸ್ನೇಹಿತನ‌ ಜೊತೆ ಟೀ ಕುಡಿಯಲು ಹೋಗಿದ್ದ ವೇಳೆ ಅಲ್ಲೇ ಇದ್ದ ಇತರ ಸ್ನೇಹಿತರೊಂದಿಗೆ ಜಗಳವಾಗಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಮದ್ಯವಸನಿಗಳಾದ ಇಬ್ಬರು ಯುವಕರು ಚಾಕುವಿನಿಂದ ಇರಿದಿದ್ದಾರೆ.

ಯುವಕ ತಪ್ಪಿಸಿಕೊಳ್ಳಲು ಯತ್ನಿಸಿದರೂ ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಕೊಲೆ ಮಾಡಿದ್ದಾರೆ. ಯುವಕನ ಎದೆ ಮತ್ತು ಬೆನ್ನಿನ ಭಾಗಕ್ಕೆ ಇರಿದು ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಕೊಲೆ ನಡೆಯುವ ಸ್ಥಳದಲ್ಲಿ ಸಾರ್ವಜನಿಕರು ಓಡಾಡುತ್ತಿದ್ದರೂ ಯಾರೊಬ್ಬರೂ ಈತನ ಸಹಾಯಕ್ಕೆ ಬರಲಿಲ್ಲ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕ ಸಹಾಯಕ್ಕಾಗಿ ಅಂಗಲಾಚಿದರೂ ಯಾವೊಬ್ಬ ನಾಗರೀಕರೂ ಸಹಾಯ ಮಾಡಲಿಲ್ಲ. ರಸ್ತೆಯಲ್ಲೆ ನರಳಾಡಿ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಈ ಎಲ್ಲಾ ಸನ್ನಿವೇಶಗಳ ದೃಶ್ಯ ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಉದಯಗಿರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪತಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಘಟನೆ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಈ ಪ್ರದೇಶದಲ್ಲಿ ಯುವಕರಿಗೆ ಗಾಂಜಾ, ದ್ರಾವಣ ಮತ್ತು ಇತರ ಮಾದಕ ವಸ್ತುಗಳು ಸುಲಭವಾಗಿ ಸಿಗುತ್ತಿದೆ, ಇದರಿಂದಾಗಿ ಯುವಕರು ಇಂತಹ ಅಪರಾಧಗಳಲ್ಲಿ ಭಾಗಿಯಾಗುತ್ತಿದ್ದಾರೆ. ಕೊಲೆಯ ಹಿಂದೆ ಅಂತಹ ಯುವಕರ ಕೈವಾಡವಿದೆ ಎಂದು ಸಂತ್ರಸ್ತನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತು ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ; Video

ದುಬಾರಿಯಾಗುತ್ತಾ LPG ದರ?: ಭಾರತ-ಅಮೆರಿಕ ಒಪ್ಪಂದದಿಂದ ಗ್ರಾಹಕರ ಮೇಲೆ ಪರಿಣಾಮ, ತೈಲ ಸಂಸ್ಥೆಗಳಿಗೆ ದುಬಾರಿ.. ತಜ್ಞರು ಹೇಳಿದ್ದೇನು?

Cricket: ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು, ಪಾಕಿಸ್ತಾನಕ್ಕೆ ಲಾಭ, WTC ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ!

ನಗ್ನ ದೃಶ್ಯಗಳಲ್ಲಿ ನಟನೆ ಆರೋಪ: ಆ ಒಬ್ಬ ನಿರ್ದೇಶಕ ಕೇಳಿದರೆ ಬೆತ್ತಲೆಯಾಗಿ ನಟಿಸುತ್ತೇನೆ: ನಟಿ ಆಂಡ್ರೆಯಾ

SCROLL FOR NEXT