ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಇದು ಜೈಲಲ್ಲ, ಲಿಕರ್ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

ಆ್ಯಪಲ್, ದ್ರಾಕ್ಷಿಮತ್ತು ಪೈನ್ ಆ್ಯಪಲ್‌ಗಳನ್ನು ಬಳಸಿ ಜೈಲಿನಲ್ಲಿ ಕೈದಿಗಳು ವೈನ್ ತಯಾರಿಸಿದ್ದಾರೆ ಎನ್ನಲಾದ ವಿಡಿಯೋ ಜಾಲತಾಣದಲ್ಲಿ ಹರಿಬಿಡಲಾಗಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪರಪ್ಪನ ಅಗ್ರಹಾರ ಕಾರಾಗೃಹ
Manjula VN
Updated On : 27 Nov 2025, 9:46 am

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಕೈದಿಗಳ ಮೋಜು ಮಸ್ತಿಯ ತಾಣವಾಗಿ ಮಾರ್ಪಟ್ಟಿದೆ. ಜೈಲಲ್ಲೇ ರೌಡಿಗಳ ಹುಟ್ಟುಹಬ್ಬ ಆಚರಣೆ, ಗುಂಡು-ತುಂಡಿನ ಪಾರ್ಟಿಯ ಜೊತೆಗೆ ಉಗ್ರರ ಕೈನಲ್ಲೂ ಮೊಬೈಲ್​ ಇರುವ ಸಾಕಷ್ಟು ವಿಡಿಯೋಗಳು ಈಗಾಗಲೇ ಹೊರ ಬಂದಿವೆ. ಈ ನಡುವಲ್ಲೇ ಮತ್ತೊಂದು ಕರ್ಮಕಾಂಡದ ವಿಡಿಯೋ ವೈರಲ್ ಆಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮದ್ಯ ತಯಾರಿ ಮಾಡಿದ್ದಾರೆ ಎನ್ನಲಾದ ವಿಡಿಯೋ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆ್ಯಪಲ್, ದ್ರಾಕ್ಷಿಮತ್ತು ಪೈನ್ ಆ್ಯಪಲ್‌ಗಳನ್ನು ಬಳಸಿ ಜೈಲಿನಲ್ಲಿ ಕೈದಿಗಳು ವೈನ್ ತಯಾರಿಸಿದ್ದಾರೆ ಎನ್ನಲಾದ ವಿಡಿಯೋ ಜಾಲತಾಣದಲ್ಲಿ ಹರಿಬಿಡಲಾಗಿದೆ.

Advertisement

Advertisement

ಇದನ್ನು ಜೆಡಿಎಸ್ ಪೋಸ್ಟ್ ಮಾಡಿದ್ದು, 'ಪರಪ್ಪನ ಅಗ್ರಹಾರ ಜೈಲಿನಲ್ಲಿ ಮದ್ಯದ ಫ್ಯಾಕ್ಟರಿ ಮಾಡಿಕೊಟ್ಟ ಕಾಂಗ್ರೆಸ್ ಸರ್ಕಾರ' ಎಂದು ಬರಹ ಬರೆದು, ವಿಡಿಯೋವನ್ನು ಹಂಚಿಕೊಂಡಿದೆ.

ಒಟ್ಟು 33 ಸೆಕೆಂಡಿನ ವಿಡಿಯೋ ಅದಾಗಿದ್ದು, ಅದರಲ್ಲಿ ಮೂವರು ಕೈದಿಗಳು ಮತ್ತು 4 ಮದ್ಯದ ಬಾಟಲಿಗಳು ಕಾಣಿಸಿಕೊಂಡಿವೆ.

ಪೊಲೀಸ್ ಸಮವಸ್ತ್ರದಲ್ಲಿರುವ ವ್ಯಕ್ತಿಯೊಬ್ಬನಿಗೆ ಇಬ್ಬರು ಕೈದಿಗಳು ಹಣ ನೀಡಿ ಮದ್ಯದ ಬಾಟಲ್ ಪಡೆದು ಕೊಳ್ಳುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಜೊತೆಗೆ ಒಂದು ತಟ್ಟೆಯಲ್ಲಿ ಮದ್ಯವಿರುವ ಗ್ಲಾಸ್, ಆ್ಯಪಲ್ ಬಾಳೇಹಣ್ಣು ಇರುವ ಸಲಾಡ್ ಮತ್ತು ಕಡ್ಲೆಬೀಜ ಇಟ್ಟುಕೊಂಡು ಪಾರ್ಟಿ ಮಾಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

Also Read

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ: FIR, 3 NCR ದಾಖಲು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement