ಸಾಂದರ್ಭಿಕ ಚಿತ್ರ  
ರಾಜ್ಯ

ಕೊಪ್ಪಳ: ಸರ್ಕಾರಿ ಹಾಸ್ಟೆಲ್ ನಲ್ಲಿ ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ; ಪೋಷಕರು-ಗ್ರಾಮಸ್ಥರ ಆಕ್ರೋಶ

ಬಾಲಕಿ ಗರ್ಭ ಧರಿಸಿದ್ದು ವಾರ್ಡನ್ ಮತ್ತು ಹಾಸ್ಟೆಲ್‌ನ ಇತರ ಸಿಬ್ಬಂದಿ ಗಮನಕ್ಕೆ ಇಷ್ಟು ಸಮಯಗಳಿಂದ ಏಕೆ ಬಂದಿಲ್ಲ ಎಂದು ಆಕೆಯ ಪೋಷಕರು ಮತ್ತು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಹಾಸ್ಟೆಲ್ ಅಧಿಕಾರಿಗಳಿಗೆ ಪರಿಸ್ಥಿತಿಯ ಬಗ್ಗೆ ತಿಳಿದಿದ್ದರೂ ಅದರ ಬಗ್ಗೆ ಮೌನವಾಗಿದ್ದರು ಎಂದು ಆರೋಪಿಸಲಾಗಿದೆ.

ಕೊಪ್ಪಳ: ಕೊಪ್ಪಳದ ಸರ್ಕಾರಿ ಹಾಸ್ಟೆಲ್‌ನಲ್ಲಿ 10 ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದು, ಸರ್ಕಾರಿ ಹಾಸ್ಟೆಲ್ ಗಳಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕುಕನೂರ್ ಪೊಲೀಸರು ಗರ್ಭಧಾರಣೆಗೆ ಕಾರಣನಾದ ಶಂಕಿತನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದು, ಬಾಲಕಿಯ ಪೋಷಕರು ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಬೆಳಗಿನ ಜಾವ ಆರು ಗಂಟೆ ಸುಮಾರಿಗೆ ವಸತಿ ಗೃಹದಲ್ಲೇ ಗಂಡುಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ತಾಯಿ- ಶಿಶುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬಾಲಕಿ ಗರ್ಭ ಧರಿಸಿದ್ದು ವಾರ್ಡನ್ ಮತ್ತು ಹಾಸ್ಟೆಲ್‌ನ ಇತರ ಸಿಬ್ಬಂದಿ ಗಮನಕ್ಕೆ ಇಷ್ಟು ಸಮಯಗಳಿಂದ ಏಕೆ ಬಂದಿಲ್ಲ ಎಂದು ಆಕೆಯ ಪೋಷಕರು ಮತ್ತು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಹಾಸ್ಟೆಲ್ ಅಧಿಕಾರಿಗಳಿಗೆ ಪರಿಸ್ಥಿತಿಯ ಬಗ್ಗೆ ತಿಳಿದಿದ್ದರೂ ಅದರ ಬಗ್ಗೆ ಮೌನವಾಗಿದ್ದರು ಎಂದು ಆರೋಪಿಸಲಾಗಿದೆ.

ಘಟನೆಯ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದಾಗ, ಜಿಲ್ಲಾಧಿಕಾರಿ ಸುರೇಶ್ ಇಟ್ನಾಲ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ ಆಸ್ಪತ್ರೆಗೆ ಧಾವಿಸಿ ಬಾಲಕಿಯ ಆರೋಗ್ಯದ ಬಗ್ಗೆ ವಿಚಾರಿಸಿದರು. ಕುಕನೂರ್ ಪೊಲೀಸರು ತ್ವರಿತ ವಿಚಾರಣೆ ನಡೆಸಿ, ಬಾಲಕಿಯ ಗರ್ಭಧಾರಣೆಗೆ ಕಾರಣನೆಂದು ಶಂಕಿಸಲಾದ ಯುವಕನನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಕೊಪ್ಪಳ ನಿವಾಸಿ ಸಿದ್ದರಾಜು ಹಳ್ಳಿ, 'ಈ ಘಟನೆ ಹಾಸ್ಟೆಲ್‌ನಲ್ಲಿ ವಾಸಿಸುತ್ತಿರುವ ಮಕ್ಕಳ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಿಳಿದಾಗ ಅವರ ಪೋಷಕರು ಮತ್ತು ಗ್ರಾಮಸ್ಥರು ಆಘಾತಕ್ಕೊಳಗಾಗಿದ್ದಾರೆ. ಹಾಸ್ಟೆಲ್ ಸಿಬ್ಬಂದಿಗೆ ಈ ಬಗ್ಗೆ ತಿಳಿದಿದ್ದರೂ ಅವರು ಸುಮ್ಮನಿದ್ದಾರೆಯೇ ಎಂಬ ಅನುಮಾನಗಳಿವೆ. ಹೆಣ್ಣು ಮಕ್ಕಳ ರಕ್ಷಣೆಗಾಗಿ ಇರುವ ಹಾಸ್ಟೆಲ್‌ನಲ್ಲಿ ಇಂತಹ ಘಟನೆ ನಡೆದರೆ, ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಹೇಗೆ ಕಳುಹಿಸುವುದು ಎಂಬ ಆತಂಕ ಉಂಟಾಗಿದೆ.

ಕೊಪ್ಪಳ ಜಿಲ್ಲಾಡಳಿತದ ಅಧಿಕಾರಿಯೊಬ್ಬರು, ಇದು ಅಚ್ಚರಿಯ ಘಟನೆ. ಹಾಸ್ಟೆಲ್ ಸಿಬ್ಬಂದಿ ಈ ವಿಷಯವನ್ನು ಹೇಗೆ ನಿರ್ಲಕ್ಷಿಸಿದ್ದಾರೆ ಎಂಬುದನ್ನು ನಾವು ಪರಿಶೀಲಿಸುತ್ತೇವೆ. ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿದ್ದಾರೆ ಮತ್ತು ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದರು.

ಆರೋಪಿ ಮತ್ತು ವಾರ್ಡನ್ ಬಂಧನ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಮತ್ತು ಶಾಸಕ ಬಸವರಾಜ ರಾಯರಡ್ಡಿ, ಇದೊಂದು ಪೊಕ್ಸೋ ಪ್ರಕರಣವಾಗಿದ್ದು, ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಾರೆ. ಆರೋಪಿ ಯುವಕನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ ಹಾಗೂ ವಸತಿ ನಿಲಯದ ವಾರ್ಡನ್ ನನ್ನು ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Imran Khan ಸಾವಿನ ಊಹಾಪೋಹ ನಡುವೆ ಜೈಲಿನಲ್ಲಿ ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ!

ದರ್ಶನ್ ಲಾಕಪ್ ಡೆತ್: ಇನ್ಸ್ ಪೆಕ್ಟರ್ ಶಿವಕುಮಾರ್ ಸೇರಿ 4 ಮಂದಿ ಅಮಾನತು!

'ನಮ್ ಜೊತೆ ಯುದ್ಧ ಬೇಕು ಅಂದ್ರೆ.. ನಾವು ಸಿದ್ಧ': ಯೂರೋಪ್ ಗೆ Vladimir Putin ಬಹಿರಂಗ ಎಚ್ಚರಿಕೆ

Video: 'ಅಯೋಧ್ಯೆ ಮಾತ್ರವಲ್ಲ.. ಮುಸ್ಲಿಮರು ಇನ್ನೂ 2 ಐತಿಹಾಸಿಕ ಸ್ಥಳಗಳ ಬಿಟ್ಟುಕೊಡಿ, ಭಾರತ ಜಾತ್ಯಾತೀತವಾಗಿರಲು ಹಿಂದೂಗಳೇ ಕಾರಣ': Muhammad

SCROLL FOR NEXT