ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ತುಂಗಭದ್ರಾ ಡ್ಯಾಂ ದುರಸ್ತಿ ನೆಪ: 2ನೇ ಬೆಳೆಗೆ ನೀರು ಬಿಡದೆ ರೈತರಿಗೆ ಅನ್ಯಾಯ, ಸರ್ಕಾರದ ವಿರುದ್ಧ BJP ಕಿಡಿ

33 ಕ್ರೆಸ್ಟ್ ಗೇಟ್‌ಗಳನ್ನು ವಿವಿಧ ಕಂಪನಿಗಳಿಗೆ ಹಂಚಿಕೆ ಮಾಡಿವೆ. ಆದರೆ, ಸಿಎಂ ಕುರ್ಚಿ ಕಿತ್ತಾಟದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಇಲ್ಲಿಯವರೆಗೆ ಕೇವಲ 16 ಗೇಟ್ ಗಳನ್ನಷ್ಟೇ ಅಳವಡಿಸಿದೆ.

ತುಂಗಭದ್ರಾ ಜಲಾಶಯ
Manjula VN
Updated On : 27 Nov 2025, 10:36 am

ಬೆಂಗಳೂರು: ಸಿಎಂ ಕುರ್ಚಿ ಕಿತ್ತಾಟದಲ್ಲಿ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮುಳುಗಿದ್ದು, ತುಂಗಭದ್ರಾ ಅಣೆಕಟ್ಟು ಕ್ರೆಸ್ಟ್-ಗೇಟ್ ಅಳವಡಿಕೆ ಯೋಜನೆಗೆ ಅನುಮೋದನೆ ವಿಳಂಬ ಮಾಡುವ ಮೂಲಕ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.

ಹೊಸಪೇಟೆಯ ಟಿಬಿ ಅಣೆಕಟ್ಟು ಬಳಿ ನಿರ್ಮಾಣ ಹಂತದಲ್ಲಿರುವ ಕ್ರೆಸ್ಟ್ ಗೇಟ್‌ಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

33 ಕ್ರೆಸ್ಟ್ ಗೇಟ್‌ಗಳನ್ನು ವಿವಿಧ ಕಂಪನಿಗಳಿಗೆ ಹಂಚಿಕೆ ಮಾಡಿವೆ. ಆದರೆ, ಸಿಎಂ ಕುರ್ಚಿ ಕಿತ್ತಾಟದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಇಲ್ಲಿಯವರೆಗೆ ಕೇವಲ 16 ಗೇಟ್ ಗಳನ್ನಷ್ಟೇ ಅಳವಡಿಸಿದೆ. ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಮುಂದಿನ ಮಳೆಗಾಲದ ಮೊದಲು ಗೇಟ್‌ಗಳನ್ನು ಅಳವಡಿಸುವ ಸಾಧ್ಯತೆಗಳಿಲ್ಲ ಎಂಬಂತೆ ತೋರುತ್ತಿದೆ ಎಂದು ಹೇಳಿದ್ದಾರೆ.

Advertisement

Advertisement

ಸರ್ಕಾರಕ್ಕೆ ಯೋಜನೆಗೆ ಹಣದ ಕೊರತೆಯಿದೆ ಮತ್ತು ಅನುಮೋದನೆಗಾಗಿ ಕಳುಹಿಸಲಾದ ಪ್ರಸ್ತಾವನೆಯು "ಇನ್ನೂ ಕೈಗೆತ್ತಿಕೊಂಡಿಲ್ಲ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೇಲಿನ ಸಿಎಂ ಸಿದ್ದರಾಮಯ್ಯ ಅವರ ಕೋಪ" ಜಲಸಂಪನ್ಮೂಲ ಇಲಾಖೆಗೆ ಹಣವನ್ನು ತಡೆಹಿಡಿಯುವಲ್ಲಿ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಸಿದ್ದರಾಮಯ್ಯ ಅವರು ಅಣೆಕಟ್ಟು ಸ್ಥಳಕ್ಕೆ ಭೇಟಿ ನೀಡಿ, ಕ್ರೆಸ್ಟ್ ಗೇಟ್ ಅಳವಡಿಕೆ ಕಾಮಗಾರಿಗಳನ್ನು ತಕ್ಷಣ ಆರಂಭಿಸಬೇಕೆಂದು ಒತ್ತಾಯಿಸಿದ್ದಾರೆ.

Also Read

ತುಂಗಭದ್ರಾ ಅಣೆಕಟ್ಟು ನೂತನ ಕ್ರೆಸ್ಟ್ ಗೇಟ್ ತಯಾರಿಕೆ ಪ್ರಗತಿಯಲ್ಲಿ; ರೈತರ ಎರಡನೇ ಬೆಳೆಗೆ ನೀರು ಬಿಡುವುದಿಲ್ಲ: ಡಿ.ಕೆ ಶಿವಕುಮಾರ್

ಇದಕ್ಕೂ ಮೊದಲು, ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಶೋಕ, ಎರಡನೇ ಬೆಳೆಗೆ ನೀರು ಬಿಡದ ಕಾರಣ ರೈತರಿಗೆ ಪರಿಹಾರವಾಗಿ ಎಕರೆಗೆ 25,000 ರೂ.ಗಳನ್ನು ಸರ್ಕಾರ ನೀಡಬೇಕು ಎಂದು ಒತ್ತಾಯಿಸಿದರು.

ಬಳಿಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಿದ್ದರಾಮಯ್ಯ ಹೆಸರಿಗೆ ಮಾತ್ರ ಮುಖ್ಯಮಂತ್ರಿಯಾಗಿದ್ದು, ಅವರ ನೇತೃತ್ವದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಬಿಜೆಪಿಯ ನಿರಂತರ ಒತ್ತಡದಿಂದಾಗಿ ಕಳಂಕಿತ ಸಚಿವರೊಬ್ಬರನ್ನು ರಾಜೀನಾಮೆ ನೀಡುವಂತೆ ಮಾಡಲಾಯಿತು. ನಂತರ ಹಿಂದೆ ಹಂಚಿಕೆ ಮಾಡಲಾದ 14 ನಿವೇಶನಗಳನ್ನು ಹಿಂಪಡೆಯಲಾಗಿದೆ. ಮುಂಬರುವ ದಿನಗಳಲ್ಲಿ ಬಿಜೆಪಿ ಪ್ರತಿಭಟನೆಯನ್ನು ತೀವ್ರಗೊಳಿಸಲಿದೆ ಎಂದು ಹೇಳಿದರು.

ಕಾಂಗ್ರೆಸ್ ರಾಜಕೀಯ ನಾಟಕಕ್ಕಾಗಿ ಸಂವಿಧಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಜವಾಹರಲಾಲ್ ನೆಹರು ಸಂವಿಧಾನ ರಚನೆಯ ಜವಾಬ್ದಾರಿಯನ್ನು ಬ್ರಿಟಿಷ್ ಅಧಿಕಾರಿಯೊಬ್ಬರಿಗೆ ವಹಿಸಿದ್ದರು, ಇದು ಗೊಂದಲಕ್ಕೆ ಕಾರಣವಾಯಿತು. ನಂತರ ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು ಬೆಂಬಲಿಸಿ ಗಾಂಧೀಜಿ ಮಧ್ಯಪ್ರವೇಶಿಸಿದರು. ಮಹಾರಾಷ್ಟ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ನೆಹರೂ ಅಂಬೇಡ್ಕರ್ ವಿರುದ್ಧ ಪ್ರಚಾರ ಮಾಡಿದ್ದರು. ಅಂಬೇಡ್ಕರ್ ಮರಣದ ನಂತರ ಸ್ಮಾರಕಕ್ಕಾಗಿ ಒಂದು ಸಣ್ಣ ಜಾಗವನ್ನು ಸಹ ಕಾಂಗ್ರೆಸ್ ನೀಡಲಿಲ್ಲ. ಅಂತಹ ಜನರಿಗೆ ಅಂಬೇಡ್ಕರ್ ಹೆಸರನ್ನು ತೆಗೆದುಕೊಳ್ಳುವ ನೈತಿಕ ಹಕ್ಕಿಲ್ಲ ಎಂದು ಕಿಡಿಕಾರಿದರು.

ಪ್ರಧಾನಿ ಮೋದಿ ಅವರು ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಐದು ತಾಣಗಳ ಅಭಿವೃದ್ಧಿಯನ್ನು ಪ್ರಾರಂಭಿಸಿದ್ದು, ಸಂವಿಧಾನ ದಿನವನ್ನು ಮೋದಿ ಆರಂಭಿಸಿರುವುದರಿಂದ ಕಾಂಗ್ರೆಸ್ ಆತಂಕಗೊಂಡಿದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments