ರಾಜ್ಯ

ನನ್ನಿಂದ ತಪ್ಪಾಗಿದೆ... ವಿಷಾದಿಸುತ್ತೇನೆ: ಮಾಜಿ ನ್ಯಾ. ಸಂತೋಷ್ ಹೆಗ್ಡೆ

ಖಾಸಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್​​ ಕೆರೆಹಳ್ಳಿಗೆ ನ್ಯಾ. ಸಂತೋಷ್​ ಹೆಗ್ಡೆ ಅವರು ಸನ್ಮಾನ ಮಾಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದ್ದು ಸಂತೋಷ್​ ಹೆಗ್ಡೆ ನಡೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಖಾಸಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್​​ ಕೆರೆಹಳ್ಳಿಗೆ ನ್ಯಾ. ಸಂತೋಷ್​ ಹೆಗ್ಡೆ ಅವರು ಸನ್ಮಾನ ಮಾಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದ್ದು ಸಂತೋಷ್​ ಹೆಗ್ಡೆ ನಡೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಂತೋಷ್ ಹೆಗ್ಡೆ ಅವರು, ಪುನೀತ್ ಕೆರೆಹಳ್ಳಿಗೆ ಶಾಲು ಪೇಟ ಹೊದಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ್ದರು. ಇದರ ಫೋಟೋಗಳನ್ನು ಪುನೀತ್ ಕೆರೆಹಳ್ಳಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇದನ್ನು ಕಂಡ ನೆಟ್ಟಿಗರು ಸಂತೋಷ್ ಹೆಗ್ಡೆ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕ್ರಿಮಿನಲ್ ಹಿನ್ನಲೆ ಹೊಂದಿರುವ ವ್ಯಕ್ತಿಗೆ ಸನ್ಮಾನ ಮಾಡಿದ್ದೀರೀ. ಆತನ ಹಿನ್ನೆಲೆ ಏನು ಅಂತಾ ಗೊತ್ತಿರಲಿಲ್ವಾ ಎಂದು ಪ್ರಶ್ನಿಸಿದ್ದಾರೆ.

ತಮ್ಮ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ ಸಂತೋಷ್​ ಹೆಗ್ಡೆ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಅರ್ಥಪೂರ್ಣ ಕಾರ್ಯಕ್ರಮ ಎಂದು ತಿಳಿದು ನಾನು ಹೋಗಿದ್ದೆ, ಅಲ್ಲಿ ಯಾರಿಗೆ ಪ್ರಶಸ್ತಿ ಕೊಡುತ್ತಿದ್ದೇನೆ ಎಂದು ನನಗೆ ಗೊತ್ತಿರಲಿಲ್ಲ. ಅಲ್ಲದೆ ವೇದಿಕೆ ಮೇಲೆ ನಾನೊಬ್ಬನೇ ಪ್ರಶಸ್ತಿಯನ್ನ ಕೊಟ್ಟಿಲ್ಲ, ಕಾರ್ಯಕ್ರಮದಲ್ಲಿ ಮತ್ತೊಬ್ಬ ಮುಖ್ಯ ನ್ಯಾಯಾಮೂರ್ತಿಯೂ ಇದ್ದರು. ನಾನು ಆ ಕಾರ್ಯಕ್ರಮಕ್ಕೆ ಹೋಗಿದ್ದು ತಪ್ಪು, ಇದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!