ಸಾಂಕೇತಿಕ ಚಿತ್ರ online desk
ರಾಜ್ಯ

ಬೆಂಗಳೂರು: HAL ಸಿಬ್ಬಂದಿ ಕ್ವಾರ್ಟರ್ಸ್ ಒಳಗೆ ವ್ಯಕ್ತಿ ಆತ್ಮಹತ್ಯೆ..!

ಬಿಡದಿ ಮೂಲದ ಬಿ ಮಂಜುನಾಥ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾರೆ. ವ್ಯಕ್ತಿ ಅವಿವಾಹಿತರಾಗಿದ್ದು, ಎಫ್‌ಎ 244 ಸಂಖ್ಯೆಯ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದರು.

ಬೆಂಗಳೂರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಸಿಬ್ಬಂದಿ ಕ್ವಾರ್ಟರ್ಸ್ ಒಳಗೆ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ನಡೆದಿದೆ.

ಬಿಡದಿ ಮೂಲದ ಬಿ ಮಂಜುನಾಥ್ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾರೆ. ವ್ಯಕ್ತಿ ಅವಿವಾಹಿತರಾಗಿದ್ದು, ಎಫ್‌ಎ 244 ಸಂಖ್ಯೆಯ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದರು.

ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು. ಸಾವಿಗೂ ಮುನ್ನ ಡೆತ್ ನೋಟ್‌ ಬರೆದಿದ್ದು, ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿದ್ದಾರೆ. ಅಲ್ಲದೆ, ಕುಟುಂಬ ಸದಸ್ಯರಿಗೆ ಕ್ಷಮೆಯಾಚಿಸಿದ್ದಾರೆ.

ಮಂಜುನಾಥ್ ಅವರ ಸಹೋದರಿ ಮತ್ತು ಸೋದರ ಮಾವನಿಗೆ ಸಾವಿನ ಬಗ್ಗೆ ತಿಳಿಸಲಾಗಿದೆ. ಸಾವಿನ ಹಿಂದಿನ ನಿಖರವಾದ ಕಾರಣಗಳನ್ನು ಪರಿಶೀಲಿಸಲಾಗುತ್ತಿದೆ. ಕೆಲಸದ ವಿಚಾರಕ್ಕೆ ಸಂಬಂಧಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆಯೇ ಎಂಬುದರ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!