ವಿಶ್ವ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ 
ರಾಜ್ಯ

ಉಡುಪಿ: ಪ್ರಧಾನಿ ಮೋದಿಗೆ "ಭಾರತ ಭಾಗ್ಯ ವಿಧಾತ" ಬಿರುದು ನೀಡಿ ಸನ್ಮಾನ; Video

ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ, ಸನ್ಮಾನಿಸಿದರು.

ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನಿಸಲಾಯಿತು.

ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು, ಬಿರುದು ನೀಡಿ ಸನ್ಮಾನಿಸಿದರು. ಬಳಿಕ ಕಾಶಿ ಕಾರಿಡಾರ್‌ ರೀತಿಯಲ್ಲಿ ಉಡುಪಿ ಕಾರಿಡಾರ್‌ ಅಭಿವೃದ್ಧಿ ಪಡಿಸುವಂತೆ ಅವರು ಮನವಿ ಮಾಡಿದರು.

ಲಕ್ಷ ಕಂಠ ಗೀತಾ ಕಾರ್ಯಕ್ರಮದ ಅಂಗವಾಗಿ ಭಗವದ್ಗೀತೆಯ 15ನೇ ಅಧ್ಯಾಯದ ಕೊನೆಯ ಕೆಲವು ಶ್ಲೋಕಗಳನ್ನು ಸಾಮೂಹಿಕವಾಗಿ ಪಠಣ ಮಾಡಲಾಯಿತು.

ಬಳಿಕ ಮೋದಿ ಅವರು, ’ಎಲ್ಲರಿಗೂ ನಮಸ್ಕಾರ..‘ ಎಂದು ಕನ್ನಡದಲ್ಲಿ ಮಾತು ಆರಂಭಿಸಿ, ಕನಕದಾಸರಿಗೆ ನಮಿಸುವ ಪುಣ್ಯ ನನಗೆ ಸಿಕ್ಕಿದೆ. ನನ್ನಂತ ಎಲ್ಲಾ ಭಕ್ತರಿಗೂ ಕಿಂಡಿಯ ಮೂಲಕ ಕೃಷ್ಣ ದರ್ಶನ ಆಗುವಂತೆ ಮಾಡಿದ್ದು ಕನಕದಾಸರು. ಭಗವಾನ್ ಕೃಷ್ಣನ ಪ್ರೇರಣೆಯಿಂದಲೇ ಕೆಲವೊಂದು ಯೋಜನೆಗಳನ್ನ ಮಾಡಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಹಂಪಿಯಲ್ಲಿ ಉದ್ವಿಗ್ನ ಪರಿಸ್ಥಿತಿ: ಲಕ್ಷ್ಮಿ ಆನೆ ಸ್ಥಳಾಂತರಕ್ಕೆ ಸ್ಥಳೀಯರಿಂದ ಭಾರೀ ವಿರೋಧ; ಭಾವನಾತ್ಮಕ ಪ್ರತಿಭಟನೆ

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

SCROLL FOR NEXT