ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ 
ರಾಜ್ಯ

ಅಧಿಕಾರ ಹಂಚಿಕೆ ವಿಚಾರ: 'ಕೊಟ್ಟ ಮಾತು' ಕುರಿತ ಪ್ರಶ್ನೆಗೆ ಮಾಧ್ಯಮಗಳ ಮೇಲೆ ಸಿಎಂ ಸಿಡಿಮಿಡಿ; Video

ಈ ಪ್ರಶ್ನೆ ಕೇಳುತ್ತಿದ್ದಂತೆ ಮಾಧ್ಯಮಗಳ ಮೇಲೆ ತೀವ್ರವಾಗಿ ಕೆಂಡಾಮಂಡಲಗೊಂಡ ಸಿದ್ದರಾಮಯ್ಯ ಅವರು, ಏನ್ ಕೊಟ್ಟ..? ಹೈಕಮಾಂಡ್ ಹೇಳಿದ್ದಂತೆ ಅಂತ ಹೇಳಿಲ್ವಾ? ಮತ್ತೇನು ಸಿಟ್ಟಿನಲ್ಲಿ ಹೇಳಿದರು.

ಬೆಂಗಳೂರು: ‘ಕೊಟ್ಟ ಮಾತು’ ಹಾಗೂ ಎರಡೂವರೆ ವರ್ಷದ ಅಧಿಕಾರ ಹಂಚಿಕೆ ಒಪ್ಪಂದ ಕುರಿತ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮಗಳ ಮೇಲೆ ಕೆಂಡಾಮಂಡಲಗೊಂಡ ಪ್ರಸಂಗ ಶನಿವಾರ ನಡೆಯಿತು.

ಡಿಸಿಎಂ ಡಿ ಕೆ ಶಿವಕುಮಾರ್ ಜೊತೆಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.

ಈ ವೇಳೆ ಸುದ್ದಿಗಾರರು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ ಬಳಿ ಕೊಟ್ಟ ಮಾತಿನ ಕುರಿತು ಪ್ರಶ್ನೆ ಕೇಳಿದರು.

ಈ ಪ್ರಶ್ನೆ ಕೇಳುತ್ತಿದ್ದಂತೆ ಮಾಧ್ಯಮಗಳ ಮೇಲೆ ತೀವ್ರವಾಗಿ ಕೆಂಡಾಮಂಡಲಗೊಂಡ ಸಿದ್ದರಾಮಯ್ಯ ಅವರು, ಏನ್ ಕೊಟ್ಟ..? ಹೈಕಮಾಂಡ್ ಹೇಳಿದ್ದಂತೆ ಅಂತ ಹೇಳಿಲ್ವಾ? ಮತ್ತೇನು ಸಿಟ್ಟಿನಲ್ಲಿ ಹೇಳಿದರು.

ಹೈಕಮಾಂಡ್ ಹೇಳಿದ್ದನ್ನು ಮಾಡುತ್ತೇವೆ ಎಂದು ಹೇಳಿದ ಮೇಲೆ ಕೊಟ್ಟ ಮಾತಿನಂತೆ ಎಂಬ ಪ್ರಶ್ನೆ ಎಲ್ಲಿ ಬರುತ್ತದೆ. ಈ ವೇಳೆ ಡಿಕೆ.ಶಿವಕುಮಾರ್ ಅವರು ಕೂಡ ನಗುತ್ತಿರುವುದು ಕಂಡು ಬಂದಿತು. ಬಳಿಕ ಮಾಧ್ಯಮಗಳು ಸರಣಿ ಪ್ರಶ್ನೆ ಕೇಳಿದ್ದು, ಈ ವೇಳೆ ಗದ್ದಲ ಶುರುವಾಗಿತ್ತು.

ನಂತರ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ಮೊದಲು ನಾವು ಹೇಳಿದ್ದು ಕೇಳಿ ನಾವು ನಿಮ್ಮನ್ನ ಕರೆಸಿದ್ದೇವೆ. ಮೊದಲು ನೀವು ನಾವ್ ಹೇಳೋದು ಕೇಳಿ ಎಂದ ಗರಂ ಆಗಿಯೇ ಹೇಳಿದರು.

ನಮ್ಮ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ. ಅಧಿವೇಶನದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿದ್ದೇನೆ. ನಮ್ಮಲ್ಲಿ ಇರೋದು ಒಂದೇ ಗುಂಪು, ಕಾಂಗ್ರೆಸ್​ ಹೈಕಮಾಂಡ್ ಗುಂಪು ಎಂದು ಹೇಳಿದರು.

ನಾನು, ಸಿಎಂ ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ನಾನು ಹೈಕಮಾಂಡ್ ಹಾಗೂ ಸಿದ್ದರಾಮಯ್ಯ ಮಾತಿಗೆ ಎದುರಾಡಿಲ್ಲ. 2028ಕ್ಕೆ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೆ. ಇದಕ್ಕೆ ಕಾರ್ಯಕ್ರಮ ರೂಪಿಸಿದ್ದೇವೆ. ಅದಕ್ಕಾಗಿ ಒಮ್ಮತದಿಂದ ಆಡಳಿತ ಮಾಡಿಕೊಂಡು ಹೋಗುತ್ತೇವೆಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್