ದಲೈಲಾಮಾ 
ರಾಜ್ಯ

ಉತ್ತರಕನ್ನಡ ಜಿಲ್ಲೆಗೆ ಟಿಬೆಟಿಯನ್ ಧರ್ಮಗುರು ದಲೈಲಾಮಾ: ಭರದ ಸಿದ್ಧತೆ; ಪ್ರವಾಸಿಗರಿಗೆ ನೋ ಎಂಟ್ರಿ..!

ಡಿ.12 ರಂದು ಸುಮಾರು 45 ದಿನಗಳ ಪ್ರವಾಸಕ್ಕಾಗಿ ದಲೈ ಲಾಮಾ ಅವರು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದಾರೆ.

ಹುಬ್ಬಳ್ಳಿ: ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರು ಡಿ. 12ರಂದು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಟಿಬೆಟಿಯನ್ ಕಾಲೋನಿಗೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರ ಸ್ವಾಗತಕ್ಕೆ ಭರದ ಸಿದ್ಧತೆಗಳು ನಡೆದಿವೆ.

ದಲೈಲಾಮಾ ಅವರನ್ನು ಸ್ವಾಗತಿಸಲು ಟಿಬೆಟಿಯನ್ ಕಾಲೋನಿ ಇದೀಗ ಟಿಬೆಟಿಯನ್ ಸಂಸ್ಕೃತಿಯಂತೆ ಶೃಂಗಾರಗೊಳ್ಳುತ್ತಿದೆ.

ಹಲವು ವರ್ಷಗಳಿಂದ ದುರಸ್ತಿ ಕಾಣದ ರಸ್ತೆಗಳು ಡಾಂಬರಿಕರಣಗೊಳ್ಳುತ್ತಿದ್ದು, ಕಾಲೋನಿಯ ಮಠಗಳಿಗೆ ಸುಣ್ಣ ಬಣ್ಣ ಬಳಿಯಲಾಗುತ್ತಿದೆ.

ಕಾಲೋನಿಯ ಪ್ರತಿ ರಸ್ತೆಗಳಲ್ಲಿ ದಲೈಲಾಮಾ ಸ್ವಾಗತದ ಬ್ಯಾನರ್, ಕಟೌಟ್‌ಗಳು ರಾರಾಜಿಸುತ್ತಿವೆ. ವ್ಯಾಪಾರಕ್ಕೆಂದು ಮುಂಬೈ, ಪುಣೆ, ಬೆಂಗಳೂರು, ದೆಹಲಿ, ಚೆನ್ನೈ, ಹಿಮಾಚ್ಚಲ ಪ್ರದೇಶ ಸೇರಿದಂತೆ ವಿವಿಧ ಕಡೆಗೆ ವಲಸೆ ಹೋಗಿದ್ದ ಇಲ್ಲಿಯ ಸಹಸ್ರಾರು ಟಿಬೆಟಿಯನ್ನರು ಇದೀಗ ಧರ್ಮ ಗುರು ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ಗೂಡಿಗೆ ಮರಳುತ್ತಿದ್ದಾರೆ.

ಡಿ.12 ರಂದು ಸುಮಾರು 45 ದಿನಗಳ ಪ್ರವಾಸಕ್ಕಾಗಿ ದಲೈ ಲಾಮಾ ಅವರು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದಾರೆ.

45 ದಿನ ತಂಗಲಿರುವ ಹಿನ್ನೆಲೆಯಲ್ಲಿ ಕಾಲೋನಿಯಲ್ಲಿ ಈಗಾಗಲೇ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ವಿವಿಧ ರಾಜ್ಯದ ಮುಖ್ಯಮಂತ್ರಿಗಳು ರಾಜ್ಯಪಾಲರು ಸೇರಿದಂತೆ ಹಲವು ಗಣ್ಯರು ದಲೈಲಾಮಾ ಅವರೊಂದಿಗೆ ಆಗಮಿಸುವ ನಿರೀಕ್ಷೆ ಇದೆ.

ದಲೈಲಾಮಾ ಅವರು ತಂಗುವುದು ಎಕರೆ ವಿಸ್ತೀರ್ಣದಲ್ಲಿರುವ ಮೊನೆಸ್ಟ್ರಿಯಲ್ಲಿ. ಆದರೆ ಪೊಲೀಸ್‌ ಬಂದೋಬಸ್ತ್ ಮಾತ್ರ ಇಡೀ ಟಿಬೆಟಿಯನ್‌ ಕಾಲೋನಿ ಸುತ್ತ ಮಾಡಲಾಗುತ್ತದೆ. ಸುಮಾರು 1 ಸಾವಿರದಷ್ಟು ಪೊಲೀಸರು ದಲೈ ಲಾಮಾ ಅವರ ಕಾವಲಿಗೆ ಆಗಮಿಸುತ್ತಿದ್ದಾರೆ.

ಈ ವೇಳೆ ಹೊರಗಿನವರು ಯಾರು ಸಹ ಮೊನೆಸ್ಟ್ರಿ ಆವರಣದೊಳಗೆ ಹೋಗುವಂತಿಲ್ಲ. ಸುತ್ತ ಪೊಲೀಸ್‌ ಸರ್ಪಗಾವಲಿನೊಂದಿಗೆ ತೀವ್ರ ಭದ್ರತೆ ವ್ಯವಸ್ಥೆ ಮಾಡಲಾಗುತ್ತಿದೆ. ಪಾಸ್ ಇಲ್ಲದೆ ಯಾರಾದರು ಒಳಪ್ರವೇಶಿಸಲು ಯತ್ನಿಸಿದರೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ.

ಈ ವೇಳೆ ಪೊಲೀಸರು ಕೂಡ ಪಾಸನ್ನು ಇಟ್ಟುಕೊಂಡೆ ಕಾರ್ಯನಿರ್ವಹಿಸಬೇಕು. ಏಕೆಂದರೆ ಕೇಂದ್ರ ಹಾಗೂ ಟಿಬೆಟಿಯನ್ನರ ಸೆಕ್ಯುರಿಟಿ ಕೂಡ ಇರುತ್ತದೆ. ಉತ್ತಮ ಪ್ರವಾಸಿ ತಾಣವಾಗಿಯೂ ಮಾರ್ಪಟ್ಟಿರುವ ಇಲ್ಲಿಯ ಟಿಬೆಟಿಯನ್ ಕಾಲೋನಿಯಲ್ಲಿ ದಲೈಲಾಮಾ ಇರುವವರೆಗೂ ಪ್ರವಾಸಿಗರಿಗೆ ಅವಕಾಶವಿರುವುದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಂದು ವೇಳೆ ಬದುಕಿದ್ದರೆ, ಹುಡುಕಿ ಕೊಲ್ಲುತ್ತೇವೆ': ಬೆಂಜಮಿನ್ ನೆತನ್ಯಾಹು ಸಾವಿನ ವದಂತಿಗಳ ನಡುವೆ ಇರಾನ್ ಎಚ್ಚರಿಕೆ!

ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ; ಬಿಜೆಪಿ ಪಾಳಯಕ್ಕೆ TVK ವಿಜಯ್?: ಡಿಸಿಎಂ ಹುದ್ದೆ ಆಫರ್!

IPL 2026: ಇದಾದ ಬಳಿಕವೇ ಸಂಪೂರ್ಣ ವೇಳಾಪಟ್ಟಿ ಪ್ರಕಟ- BCCI

ಇರಾನ್ ಶರಣಾಗತಿಗೆ ಟ್ರಂಪ್ ಒತ್ತಾಯ: ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಬಗ್ಗೆ ಹೇಳಿದ್ದೇನು?

ಜಮ್ಮು-ಕಾಶ್ಮೀರ: ಉರಿ ಸೆಕ್ಟರ್ ನಲ್ಲಿ ಒಳನುಸುಳುವಿಕೆ ಯತ್ನ, ಪಾಕ್ ಉಗ್ರನ ಹತ್ಯೆ!

SCROLL FOR NEXT