ಭಾರತೀಯ ನೌಕಾಪಡೆಯ ನೌಕಾ ಶಸ್ತ್ರಾಸ್ತ್ರ ಮಹಾನಿರ್ದೇಶಕ ಪ್ರಕಾಶ ಉಪಾಧ್ಯಾಯ 
ರಾಜ್ಯ

'ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದ ಜತೆಗೆ ಶಿಕ್ಷಣಿಕ ಒಪ್ಪಂದಕ್ಕೆ ಸಹಕಾರ ನೀಡಲು ಸಿದ್ಧ': ನೌಕಾ ಶಸ್ತ್ರಾಸ್ತ್ರ ಮಹಾನಿರ್ದೇಶಕ

ವಿಟಿಯು ಮುದ್ದೇನಹಳ್ಳಿ ಕ್ಯಾಂಪಸ್‌ನಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಅತ್ಯುನ್ನತ ಕೇಂದ್ರ ಸ್ಥಾಪನೆಗೆ ಮುಂದಾಗಿದೆ. ಇದಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ" ಭರವಸೆ ನೀಡಿದರು.

ಬೆಂಗಳೂರು: ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದ ಜತೆಗೆ ಶಿಕ್ಷಣಿಕ ಒಪ್ಪಂದಕ್ಕೆ ಸಹಕಾರ ನೀಡಲು ನಾವು ಸಿದ್ಧರಿರುವುದಾಗಿ ಭಾರತೀಯ ನೌಕಾಪಡೆಯ ನೌಕಾ ಶಸ್ತ್ರಾಸ್ತ್ರ ಮಹಾನಿರ್ದೇಶಕ ಪ್ರಕಾಶ ಉಪಾಧ್ಯಾಯ ಹೇಳಿದ್ದಾರೆ.

ಬೆಂಗಳೂರಿನ ನಾಗರಭಾವಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ(ವಿಟಿಯು) ಬೆಂಗಳೂರು ಪ್ರಾದೇಶಿಕ ಕಚೇರಿಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, "ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಶೈಕ್ಷಣಿಕ ಒಪ್ಪಂದಗಳ ಅವಶ್ಯಕತೆ ಇದೆ.

ವಿಟಿಯು ಕುಲಪತಿ ಡಾ. ಎಸ್. ವಿದ್ಯಾಶಂಕರ್ ಅವರ ದೃಷ್ಟಿಪೂರ್ಣ ನಾಯಕತ್ವದಲ್ಲಿ, ವಿಟಿಯು ಮುದ್ದೇನಹಳ್ಳಿ ಕ್ಯಾಂಪಸ್‌ನಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಅತ್ಯುನ್ನತ ಕೇಂದ್ರ ಸ್ಥಾಪನೆಗೆ ಮುಂದಾಗಿದೆ. ಇದಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ" ಭರವಸೆ ನೀಡಿದರು.

ವಿಟಿಯು ಸಂಶೋಧನೆ ಮತ್ತು ಅಭಿವೃದ್ಧಿ, ಏರೋಸ್ಪೇಸ್ ಮತ್ತು ರಕ್ಷಣಾ ನಿರ್ದೇಶಕ ಡಾ. ಕಮಾಂಡರ್ ದೇವೇಂದ್ರ ಸಿಂಗ್ ಮಾತನಾಡಿ, "ಶೈಕ್ಷಣಿಕ ಮತ್ತು ರಕ್ಷಣಾ ಇಲಾಖೆಯ ಅಗತ್ಯವನ್ನು ಹೆಚ್ಚಿದ್ದು, ಇದಕ್ಕೆ ರಕ್ಷಣಾ ಇಲಾಖೆಯ ಸಹಕಾರ ಅತ್ಯಗತ್ಯವಾಗಿದೆ. ಇದಕ್ಕಾಗಿ ವಿಟಿಯು ಮತ್ತು ಭಾರತೀಯ ನೌಕಾಪಡೆಯ ನಡುವೆ ಅಧಿಕೃತ ಶೈಕ್ಷಣಿಕ ಒಪ್ಪಂದ ಅಗತ್ಯವಿದೆ" ಎಂದರು.

ಭೇಟಿಯ ಭಾಗವಾಗಿ ಪ್ರಕಾಶ ಉಪಾಧ್ಯಾಯ ಅವರು ಸಂಶೋಧನಾ ಕೇಂದ್ರದಲ್ಲಿ ಅಭಿವೃದ್ಧಿಪಡಿಸಿದ ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್ ಆವಿಷ್ಕಾರಗಳ ಪ್ರದರ್ಶನವನ್ನು ವೀಕ್ಷಿಸಿದರು. ಸ್ಟಾರ್ಟ್‌ಅಪ್ ಪ್ರತಿನಿಧಿಗಳೊಂದಿಗೆ ನೇರ ಸಂವಾದ ನಡೆಸಿದರು.ವಿಟಿಯು ಬೆಂಗಳೂರು ಪ್ರಾದೇಶಿಕ ಕಚೇರಿಯ ವಿಶೇಷಾಧಿಕಾರಿ .ಡಾ. ಅಜಿತ್ ಪದ್ಯಾಣ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!