ಮಂತ್ರಿ ಮಾಲ್ 
ರಾಜ್ಯ

ಬೆಂಗಳೂರು: ಮಂತ್ರಿಮಾಲ್ ನಿಂದ 5 ಕೋಟಿ ರೂ ತೆರಿಗೆ ಪಾವತಿ

ನ್ಯಾಯಾಲಯದ ಆದೇಶದಂತೆ ಮಂತ್ರಿ ಮಾಲ್, ಬೆಂಗಳೂರು ಕೇಂದ್ರ ನಗರಪಾಲಿಕೆಗೆ ಕಟ್ಟಬೇಕಾಗಿರುವ ಬಾಕಿ ಮೊತ್ತದಲ್ಲಿ 5 ಕೋಟಿ ರೂ. ಚೆಕ್‌ನ್ನು ಆಯುಕ್ತರಾದ ರಾಜೇಂದ್ರ ಚೋಳನ್ ರವರಿಗೆ ನೀಡಿತು.

ಬೆಂಗಳೂರು: ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿ ಅಭಿಯಾನ ನಡೆಯುತ್ತಿದ್ದು, ಅಭಿಯಾನದ ಭಾಗವಾಗಿ ಮಂತ್ರಿ ಮಾಲ್ ನಿಂದ 5 ಕೋಟಿ ರೂ.ಗಳನ್ನು ವಸೂಲಿ ಮಾಡಿದೆ.

ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ರವರು ಶುಕ್ರವಾರ ಬೆಳಿಗ್ಗೆಯಿಂದ ಚಿಕ್ಕಪೇಟೆಯಲ್ಲಿ ನಡೆಯುತ್ತಿರುವ ಆಸ್ತಿ ತೆರಿಗೆ ಪಾವತಿ ಪರಿಶೀಲನೆ ಕಾರ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನ್ಯಾಯಾಲಯದ ಆದೇಶದಂತೆ ಮಂತ್ರಿ ಮಾಲ್, ಬೆಂಗಳೂರು ಕೇಂದ್ರ ನಗರಪಾಲಿಕೆಗೆ ಕಟ್ಟಬೇಕಾಗಿರುವ ಬಾಕಿ ಮೊತ್ತದಲ್ಲಿ 5 ಕೋಟಿ ರೂ. ಚೆಕ್‌ನ್ನು ಆಯುಕ್ತರಾದ ರಾಜೇಂದ್ರ ಚೋಳನ್ ರವರಿಗೆ ನೀಡಿದರು.

ಈ ಸಂದರ್ಭದಲ್ಲಿ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್, ಜಂಟಿ ಆಯುಕ್ತರುಗಳಾದ ಹೇಮಂತ್ ಶರಣ್, ರಂಗನಾಥ್, ಉಪ ಆಯುಕ್ತರಾದ ರಾಜು, ಕಂದಾಯ ಅಧಿಕಾರಿ ಶ್ರೀನಿವಾಸ್, ಸಹ ಕಂದಾಯ ಅಧಿಕಾರಿಗಳು ಹಾಗೂ ಕಂದಾಯ ವಿಭಾಗದ ೧೦೦ ಕ್ಕೂ ಅಧಿಕ ಸಿಬ್ಬಂದಿಗಳು ಪರಿಶೀಲನೆ ಕಾರ್ಯದಲ್ಲಿ ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ