ಉಪಹಾರ ಸಭೆ ನಡೆಯುತ್ತಿರುವ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್. 
ರಾಜ್ಯ

Breakfast ಮೀಟಿಂಗ್: ಫೋಟೋ ಹಂಚಿಕೊಂಡು ಸಿದ್ದರಾಮಯ್ಯ-ಡಿಕೆಶಿ ಒಗ್ಗಟ್ಟು ಪ್ರದರ್ಶನ

ತೀವ್ರ ಗೊಂದಲ ಹುಟ್ಟುಹಾಕಿರುವ ಕುರ್ಚಿ ಗುದ್ದಾಟವನ್ನು ಹೈಕಮಾಂಡೇ ಬಗೆಹರಿಸಲಿದೆ ಎಂದು ಇಡೀ ಕಾಂಗ್ರೆಸ್ ಸಮೂಹ ಕಾದು ಕುಳಿತಿರುವ ಈ ಹಂತದಲ್ಲಿ ಪರಸ್ಪರ ಭೇಟಿ ಮಾಡಿ ಹೊಂದಾಣಿಕೆಗೆ ಪ್ರಯತ್ನಿಸಿ ಎಂಬ ಸ೦ದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ನೀಡಿದೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣದ ನಡುವೆ ಹಗ್ಗಜಗ್ಗಾಟ ನಡೆಯುತ್ತಿದ್ದು, ಈ ನಡುವಲ್ಲೇ ಉಪಹಾರ ಸಭೆ ಸೇರಿರುವ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರು ಈ ಕುರಿತ ಫೋಟೋ ಹಂಚಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಜೊತೆ ಬೆಳಗ್ಗಿನ ಉಪಹಾರ ಸೇವಿಸುತ್ತಾ, ಕೆಲಹೊತ್ತು ಮಾತುಕತೆ ನಡೆಸಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಇಬ್ಬರೂ ಉಪಹಾರ ಸೇವಿಸುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇದರಂತೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರೂ ಪೋಸ್ಟ್ ಮಾಡಿದ್ದು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಇಂದು ಅವರ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಉಪಾಹಾರ ಸಭೆ ನಡೆಸಲಾಯಿತು ಎಂದು ಹೇಳಿ, ಫೋಟೋವನ್ನು ಹಂಚಿಕೊಂಡಿದ್ದಾರೆ.

ತೀವ್ರ ಗೊಂದಲ ಹುಟ್ಟುಹಾಕಿರುವ ಕುರ್ಚಿ ಗುದ್ದಾಟವನ್ನು ಹೈಕಮಾಂಡೇ ಬಗೆಹರಿಸಲಿದೆ ಎಂದು ಇಡೀ ಕಾಂಗ್ರೆಸ್ ಸಮೂಹ ಕಾದು ಕುಳಿತಿರುವ ಈ ಹಂತದಲ್ಲಿ ಪರಸ್ಪರ ಭೇಟಿ ಮಾಡಿ ಹೊಂದಾಣಿಕೆಗೆ ಪ್ರಯತ್ನಿಸಿ ಎಂಬ ಸ೦ದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ನೀಡಿದ್ದು, ಅದರಂತೆ ಸಿಎಂ ನಿವಾಸದಲ್ಲಿ ಬ್ರೇಕ್ ಫಾಸ್ಟ್‌ ಮೀಟಿಂಗ್ ನಡೆಯುತ್ತಿದೆ.

ರಾಜ್ಯ ಬಿಕ್ಕಟ್ಟಿನ ಬಗ್ಗೆ ತನ್ನ ಅಂತಿಮ ನಿಲುವು ಪ್ರಕಟಿಸುವ ಮುನ್ನ ಉಭಯ ನಾಯಕರು ಹೊಂದಾಣಿಕೆಗೆ ಅಂತಿಮ ಯತ್ನ ನಡೆಸಲಿ ಎಂಬ ಉದ್ದೇಶದಿಂದ ಹೈಕಮಾಂಡ್ ಈ ನಿಲುವು ತಳೆದಂತಿದ್ದು, ಹೀಗಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಉಪಾಹಾರ ಸಭೆ ನಡೆಯುತ್ತಿದೆ.

ಹೀಗಾಗಿ ಪಟ್ಟು ಸಡಿಲಿಸಲೊಪ್ಪದ ಉಭಯ ನಾಯಕರ ನಡುವೆ ಕುರ್ಚಿ ವಿಚಾರದಲ್ಲಿ ಹೊಂದಾಣಿಕೆ ಸಾಧ್ಯವಾಗದಿದ್ದರೂ ಪಕ್ಷದಲ್ಲಿ ಒಗ್ಗಟ್ಟು ಇದೆ ಎಂಬ ಸಂದೇಶ ರವಾನೆಯಾಗಲಿದೆ ಎಂಬ ಉದ್ದೇಶದಿಂದ ಈ ಸಭೆ ಆಯೋಜನೆಗೆ ಹೈಕಮಾಂಡ್ ನಿರ್ದೇಶನ ನೀಡಿದೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT