ಸಿಎಂ ಸಿದ್ದರಾಮಯ್ಯ 
ರಾಜ್ಯ

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ: ಸಿಎಂ ಸಿದ್ದರಾಮಯ್ಯ

ತುಳು, ಕೊಂಕಣಿ ಜೊತೆಗೆ ಕನ್ನಡ ಸೇರಿ ಅರೆಭಾಷೆಯಾಗಿದೆ. ಹೋಗುತ್ತೇನೆ ಎನ್ನುವುದು ವೋನೆ, ಬರುತ್ತೇನೆ ಎನ್ನುವುದು ಬನೇ ಎಂದು ಹೇಳುತ್ತಾರೆ.

ಬೆಂಗಳೂರು: ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಹೇಳಿದರು.

ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ ಎಂದರು.

1882ನೇ ಗೆಜೆಟ್ ಬಂದಾಗ ಇವರು ಸಕಲೇಶಪುರದಲ್ಲಿದ್ದು, ಬರಗಾಲದ ಸಂದರ್ಭದಲ್ಲಿ ಹೇಮಾವತಿ ನದಿ ಬತ್ತಿದಾಗ ಪಕ್ಕದ ಜಿಲ್ಲೆ ಸುಳ್ಯಕ್ಕೆ ಬಂದು ನೆಲೆಯೂರುತ್ತಾರೆ. ತುಳು, ಕೊಂಕಣಿ ಜೊತೆಗೆ ಕನ್ನಡ ಸೇರಿ ಅರೆಭಾಷೆಯಾಗಿದೆ. ಹೋಗುತ್ತೇನೆ ಎನ್ನುವುದು ವೋನೆ, ಬರುತ್ತೇನೆ ಎನ್ನುವುದು ಬನೇ ಎಂದು ಹೇಳುತ್ತಾರೆ. ಹೀಗೆ ಕೆಲವು ಅಕ್ಷರಗಳು ಬಿಟ್ಟುಹೋಗಿ ಅರೆಭಾಷೆಯಾಗಿದೆ. ಮೂಲತ: ಗೌಡ ಸಮುದಾಯಕ್ಕೆ ಸೇರಿರುವ ಇವರನ್ನು ಅರೆಭಾಷೆ ಗೌಡರು ಎನ್ನುತ್ತಾರೆ. ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿಯಾಗಿದೆ ಎಂದು ತಿಳಿಸಿದರು.

ಅರೆಭಾಷಿಕರಾಗಿದ್ದ ಕುರುಂಜಿ ವೆಂಕಟರಮಣ ಗೌಡರು ನನಗೆ ಪರಿಚಿತರು. ಕರ್ನಾಟಕದಲ್ಲಿ ಸುಮಾರು 230 ಸಣ್ಣ ಭಾಷೆಗಳಿವೆ. ಇವೆಲ್ಲವೂ ಕನ್ನಡದಿಂದಲೇ ಹುಟ್ಟಿದ್ದು, ಅರೆಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಅಕಾಡೆಮಿ ಮಾಡಲಿ ಎಂದು ಆಶಿಸುತ್ತೇನೆ. ಭಾಗಮಂಡಲದಲ್ಲಿ ನಾಡಗೌಡ ಸಮುದಾಯಕ್ಕೆ ಒಂದು ಕೋಟಿ ರೂ.ಗಳನ್ನು ಹಿಂದೆ ಒದಗಿಸಲಾಗಿತ್ತು. ಪ್ರಸ್ತುತ ಇರುವ 50 ಲಕ್ಷ ರೂ.ಬೇಡಿಕೆಯನ್ನು ಸಹ ಈಡೇರಿಸಲಾಗುವುದು. ಇತರೆ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಲಾಗುವುದು ಎಂದು ಸಿಎಂ ಹೇಳಿದರು.

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆ ಇದ್ದು, ಇದನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ; ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚನೆ

'ಗಿಲ್ಲಿ 'ಬಡವ' ಅಂತ ಅನ್ನೋದಾದ್ರೆ, BiggBoss ವ್ಯಕ್ತಿತ್ವದ ಆಟ ಹೇಗಾಯ್ತು? ಅಶ್ವಿನಿ ಗೌಡ ಬೇಸರ

25 ಲಕ್ಷ ರೂ. ಲಂಚ ಪ್ರಕರಣ: ಅಬಕಾರಿ ಸಚಿವ ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು

GBA ಚುನಾವಣೆ: EVM ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆಗೆ ಚುನಾವಣಾ ಆಯೋಗದ ನಿರ್ಧಾರ

SCROLL FOR NEXT