ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಂಗಳೂರು: ಕಟ್ಟಡ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿದು ಇಬ್ಬರು ವಲಸೆ ಕಾರ್ಮಿಕರು ಸಾವು, ಒಬ್ಬರಿಗೆ ಗಾಯ

ಮೃತರನ್ನು ಲಾಲ್ ಮುದ್ದೀನ್ (33) ಮತ್ತು ರಜಾವುದ್ದೀನ್ (32) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಸೈಫುಲ್ಲಾ (28) ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು: ನಗರದ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ಧಾರ್ಥ ಕಾಲೋನಿಯಲ್ಲಿ ಕಟ್ಟಡ ನಿರ್ಮಾಣಕ್ಕಾಗಿ ಅಡಿಪಾಯ ತೆಗೆಯುತ್ತಿದ್ದ ವೇಳೆ ಅಪಾರ ಪ್ರಮಾಣದ ಮಣ್ಣು ಕುಸಿದು ಜಾರ್ಖಂಡ್ ಮೂಲಕ ಇಬ್ಬರು ವಲಸೆ ಕಾರ್ಮಿಕರು ಸಾವಿಗೀಡಾಗಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಂಗಳವಾರ ಸಂಜೆ ಅಡಿಪಾಯಕ್ಕಾಗಿ 20 ಅಡಿ ಆಳದ ಗುಂಡಿ ತೆಗೆಯುತ್ತಿದ್ದಾಗ ಹಠಾತ್ತನೆ ಮಣ್ಣು ಕುಸಿದಿದೆ. ಅವರಲ್ಲಿ ಮೂವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಮಣ್ಣಿನ ಅಡಿ ಸಿಲುಕ್ಕಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಮೃತರನ್ನು ಲಾಲ್ ಮುದ್ದೀನ್ (33) ಮತ್ತು ರಜಾವುದ್ದೀನ್ (32) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಸೈಫುಲ್ಲಾ (28) ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

'ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಮಂಗಳವಾರ ಸಂಜೆ 7.30ರ ಸುಮಾರಿಗೆ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿದಿದೆ ಮತ್ತು ಕೆಲಸ ಮಾಡುತ್ತಿದ್ದ ಕೆಲವು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ನಮಗೆ ದೂರು ಬಂತು. ನಾವು ಬಂದು ಪರಿಶೀಲಿಸಿದಾಗ, ಮೂವರು ಸಿಲುಕಿಕೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು' ಎಂದು ಉಪ ಪೊಲೀಸ್ ಆಯುಕ್ತ (ಆಗ್ನೇಯ) ಸಾರಾ ಫಾತಿಮಾ ಹೇಳಿದರು.

'ಅವರೆಲ್ಲರೂ ಜಾರ್ಖಂಡ್ ಮೂಲದವರಾಗಿದ್ದು, ಈ ನಿರ್ಮಾಣ ಸ್ಥಳದಲ್ಲಿ ಕೆಲಸ ಮಾಡಲು ಸುಮಾರು ಮೂರು ತಿಂಗಳ ಹಿಂದೆ ಇಲ್ಲಿಗೆ ಬಂದಿದ್ದರು. ಪ್ರಕರಣ ದಾಖಲಾಗಿದ್ದು, ಏನಾಯಿತು ಮತ್ತು ಅದು ಹೇಗೆ ಸಂಭವಿಸಿತು ಎಂದು ನಾವು ತನಿಖೆ ಮಾಡುತ್ತೇವೆ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!