ಸಿಎಂ ಸಿದ್ದರಾಮಯ್ಯ 
ರಾಜ್ಯ

ಕೇಂದ್ರದಿಂದ ಬರ ಪರಿಹಾರ: ಕುಮಾರಸ್ವಾಮಿ ಹೇಳಿಕೆ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ, ಹೇಳಿದ್ದೇನು?

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ಹೇಳಿರುವುದನ್ನು ಸ್ವಾಗತಿಸುತ್ತೇನೆ ಎಂದರು.

ಬೆಂಗಳೂರು: ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ಅವರ ಹೇಳಿಕೆಯನ್ನು ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95 ರಷ್ಟು ಪ್ರವಾಹ ಉಂಟಾಗಿದೆ. ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ, ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95 ರಷ್ಟು ಪ್ರವಾಹ ಸಂಭವಿಸಿದೆ. ಬೆಳಗಾವಿ, ವಿಜಯಪುರ, ಕಲಬುರಗಿ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು, ಹುಬ್ಬಳ್ಳಿ - ಧಾರವಾಡ, ಗದಗ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿದೆ ಎಂದರು.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ಹೇಳಿರುವುದನ್ನು ಸ್ವಾಗತಿಸುತ್ತೇನೆ ಎಂದರು.

ಆದರೆ 2023ರಲ್ಲಿ ರಾಜ್ಯಕ್ಕೆ ಬರಗಾಲ ಬಂದಿದ್ದಾಗ, ಕೇಂದ್ರ ಸರ್ಕಾರದವರು ಬರಪರಿಹಾರ ನೀಡದೇ ಸುಪ್ರೀಂಕೋರ್ಟ್ ನ ಬಳಿ ಧಾವಿಸಿ, ಬಳಿಕ ಕಾನೂನಾತ್ಮಕ ಹೋರಾಟದಿಂದ ಪರಿಹಾರ ತೆಗೆದುಕೊಳ್ಳುವಂತಾಯಿತು. ಪ್ರಸ್ತುತ ಕುಮಾರಸ್ವಾಮಿಯವರು ಪರಿಹಾರ ಕೊಡಿಸುವುದಾದರೆ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಸಲ್ಲಿಸಲಿದೆ ಎಂದು ತಿಳಿಸಿದರು.

"ಬಿಜೆಪಿಯವರು ಯಥಾಸ್ಥಿತಿ ವಾದಿಗಳು: ನಾವು ಮಾಡುತ್ತಿರುವ ಸಮೀಕ್ಷೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ತಿಳಿಸಿದಂತೆ ಅಸಮಾನತೆ ಹೋಗಲಾಡಿಸಲು ದುರ್ಬಲರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದರು.

ಸಮಾಜದಲ್ಲಿ ಅಸಮಾನತೆ ನಿರಂತರವಾಗಿರಬೇಕು ಎಂಬುದು ಬಿಜೆಪಿಯವರ ಬಯಕೆ. ನಿರ್ದಿಷ್ಠವಾದ ಜಾತಿಯೊಂದು ಉತ್ತುಂಗದಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಾಗೂ ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ, ಕೇಂದ್ರ ಸರ್ಕಾರವೂ ಜಾತಿಗಣಿತಿ ನಡೆಸಲು ಮುಂದಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ

RSS centenary: ಪ್ರಪ್ರಥಮ ಬಾರಿಗೆ 'ಭಾರತ ಮಾತೆ'ಯ ಚಿತ್ರವುಳ್ಳ ರೂ.100 ನಾಣ್ಯ! ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ನಾನೇ ದಸರಾದಲ್ಲಿ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ಹೆಚ್ಚುವರಿ ತುಟ್ಟಿ ಭತ್ಯೆ, ಕೇಂದ್ರ ಸಂಪುಟ ಅನುಮೋದನೆ

Pakistan Army ವಿರುದ್ಧ ತಿರುಗಿ ಬಿದ್ದ POK ಜನತೆ, ಸೇನಾಧಿಕಾರಿಗಳ Kidnap, ಸೇನಾ ಟ್ರಕ್ ನದಿಗೆ! Video

SCROLL FOR NEXT