ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾದ ಆಕರ್ಷಣೆಯ ಕೇಂದ್ರಬಿಂದುವಾಗಿರುವ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಸಂಜೆ 4.42ರಿಂದ 5.06 ವರೆಗಿನ ಕುಂಭ ಲಗ್ನದ ಶುಭ ಮುಹೂರ್ತದಲ್ಲಿ, ಚಿನ್ನದ ಅಂಬಾರಿಯಲ್ಲಿ ಆಸೀನಳಾಗಿರುವ ಚಾಮುಂಡೇಶ್ವರಿ ತಾಯಿಗೆ ಸಿಎಂ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಆರಂಭಗೊಂಡಿದೆ.
ಜಂಬೂ ಸವಾರಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಂಸದ ಯದುವೀರ್ ಒಡೆಯರ್, ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು.
6ನೇ ಬಾರಿಗೆ ಅಭಿಮನ್ಯು ಆನೆ ಚಿನ್ನದ ಅಂಬಾರಿಯನ್ನು ಹೊತ್ತಿದ್ದು ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಹೆಜ್ಜೆ ಹಾಕಿದೆ. ಅಭಿಮನ್ಯುಗೆ ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ರೂಪಾ ಸಾಥ್ ನೀಡಿವೆ. ಜಂಬೂ ಸವಾರಿ ವೀಕ್ಷಣೆಗಾಗಿ ಅಂಬಾವಿಲಾಸ ಅರಮನೆ ಮುಂಭಾಗದಲ್ಲಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಸುಮಾರು 45 ಸಾವಿರ ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಪಂಜಿನ ಕವಾಯತಿನ ಮೂಲಕ ಮೈಸೂರು ದಸರಾದ ಆಕರ್ಷಣೆ ಜಂಬೂ ಸವಾರಿಗೆ ಅಧಿಕೃತ ತೆರೆ ಬೀಳಲಿದೆ.