ಸಿಎಂ ಸಿದ್ದರಾಮಯ್ಯ  online desk
ರಾಜ್ಯ

"ಹೊಸ ಮನೆ ಗೃಹಪ್ರವೇಶಕ್ಕೆ ಯಾರಿಗೂ ಆಹ್ವಾನವಿಲ್ಲ; ನನ್ನ ಅದೃಷ್ಟದ ಮನೆ ಬೇರೆಯದ್ದೇ ಇದೆ.., 2 ಬಾರಿ ಸಿಎಂ ಆಗಲು ಅದೇ ಕಾರಣ": Siddaramaiah

ಸಿಎಂ ಸಿದ್ದರಾಮಯ್ಯ ಹೊಸ ಮನೆ ನಿರ್ಮಿಸಿದರೂ ಈಗ ವಾಸವಿರುವ ಮರಿಸ್ವಾಮಿ ಮನೆಯನ್ನು ಹಾಗೆಯೇ ಉಳಿಸಿಕೊಳ್ಳುವ ಆಸಕ್ತಿ ತೋರಿದ್ದಾರೆ.

ಮೈಸೂರು: ಮೈಸೂರಿನಲ್ಲಿ ತಮ್ಮ ನೂತನ ಮನೆಯ ಗೃಹ ಪ್ರವೇಶದ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಗೃಹಪ್ರವೇಶ ಕಾರ್ಯಕ್ರಮಕ್ಕೆ ಯಾರಿಗೂ ಆಹ್ವಾನವಿಲ್ಲ. ಇದು ಕೇವಲ ಕೌಟುಂಬಿಕ ಸಮಾರಂಭವಾಗಿರಲಿದೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಹೊಸ ಮನೆ ನಿರ್ಮಿಸಿದರೂ ಈಗ ವಾಸವಿರುವ ಮರಿಸ್ವಾಮಿ ಮನೆಯನ್ನು ಹಾಗೆಯೇ ಉಳಿಸಿಕೊಳ್ಳುವ ಆಸಕ್ತಿ ತೋರಿದ್ದಾರೆ. 'ನಾನು ಈಗ ಇರುವ ಮನೆ ನನ್ನದಲ್ಲ, ಮರಿಸ್ವಾಮಿ ಅವರದ್ದು. ಮರಿಸ್ವಾಮಿಯೇ ನನಗೆ ಹಾಗೂ ನನ್ನ ಮಗನಿಗೆ ಅನ್ನದಾತ. ಹೊಸ ಮನೆಗೆ ಸ್ಥಳಾಂತರಗೊಂಡ ನಂತರವೂ, ಮರಿಸ್ವಾಮಿ ಅವರು ಈ ಮನೆಯನ್ನು ಖಾಲಿ ಇಟ್ಟರೆ, ಅದನ್ನು ಸಾರ್ವಜನಿಕರ ಭೇಟಿಗಾಗಿ ಬಳಸಿಕೊಳ್ಳುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಡಿಸೆಂಬರ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೂತನ ಮನೆಯ ಗೃಹಪ್ರವೇಶ ನಡೆಯುವ ಸಾಧ್ಯತೆ ಇದೆ. ಮೈಸೂರಿಗೆ ಬಂದರೆ ತಾವು ಮರಿಸ್ವಾಮಿ ಎಂಬುವವರ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದೆ. ಇದು ನನ್ನ ಅದೃಷ್ಟದ ಮನೆ. ಎರಡು ಬಾರಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸುವ ಅದೃಷ್ಟ ಒದಗಿ ಬಂದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೆದುಳು ತಿನ್ನುವ ಅಮೀಬಾ: ಶಬರಿಮಲೆ ಭಕ್ತರಿಗೆ ರಾಜ್ಯ ಆರೋಗ್ಯ ಇಲಾಖೆಯ ಮಾರ್ಗಸೂಚಿ, ಮುನ್ನೆಚ್ಚರಿಕೆ ಕ್ರಮಗಳೇನು?

POCSO case: ಯಡಿಯೂರಪ್ಪಗೆ ಸಂಕಷ್ಟ, ಡಿ. 2 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್!

'ಆಪರೇಷನ್ ಕಾಡಾನೆ' ಸಕ್ಸಸ್: ನಾಲೆಗೆ ಬಿದ್ದು ಒದ್ದಾಡುತ್ತಿದ್ದ ಗಜರಾಜನ ರಕ್ಷಣೆ, ಅರಣ್ಯ ಇಲಾಖೆ ಸಾಹಸಕ್ಕೆ ಶ್ಲಾಘನೆ! Video

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

ಬಲವಂತವಾಗಿ ಚುಂಬಿಸಿದ ಮಾಜಿ ಪ್ರಿಯಕರ, ನಾಲಿಗೆಯನ್ನೇ ಕಚ್ಚಿ ಕಿತ್ತೆಸೆದ ಮಹಿಳೆ!

SCROLL FOR NEXT