ಸುದ್ದಿ ಮುಖ್ಯಾಂಶಗಳು (ಸಂಗ್ರಹ ಚಿತ್ರ) online desk
ರಾಜ್ಯ

News headlines 03-10-2025 | ಗ್ಯಾರೆಂಟಿಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಕ್ಷೀಣ- HDD; ಬಳ್ಳಾರಿ: ಜಾತ್ರೆಯಲ್ಲಿ ಘರ್ಷಣೆ, 2 ಸಾವು! MM Hills ನಲ್ಲಿ ಮತ್ತೆ ಹುಲಿ ಬೇಟೆ: ಅರ್ಧ ಮೃತದೇಹ ಪತ್ತೆ

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 'ಐದು ಗ್ಯಾರಂಟಿ' ಯೋಜನೆಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಆರೋಪಿಸಿದ್ದಾರೆ.

5 ಗ್ಯಾರೆಂಟಿಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಕ್ಷೀಣ- HD Devegowda

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 'ಐದು ಗ್ಯಾರಂಟಿ' ಯೋಜನೆಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಉಂಟಾಗಿರುವ ತೀವ್ರ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರದ ಬಳಿ ಹಣವಿಲ್ಲ ಮುಂದಿನ ಒಂದು ವಾರದೊಳಗೆ ಕಲಬುರಗಿ ಮತ್ತು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸುತ್ತೇನೆ, ಸರ್ಕಾರ ಏನು ಮಾಡಿದೆ ಎಂಬುದರ ಕುರಿತು ನನ್ನ ಅಭಿಪ್ರಾಯವನ್ನು ನೀಡುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಪ್ರವಾಹ ಪೀಡಿತ ಜನರಿಗೆ ಪರಿಹಾರ ನೀಡುವಂತೆ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಆರ್ ಅಶೋಕ, ರಾಜ್ಯ ಸರ್ಕಾರ ಈಗ ಕುಂಭಕರ್ಣ ನಿದ್ರೆಯಲ್ಲಿದೆ. ಇದಕ್ಕೆ ಮಳೆ ಬರುವುದು ಗೊತ್ತಾಗುವುದಿಲ್ಲ. ಬರ ಪರಿಸ್ಥಿತಿಯ ಅರಿವೂ ಇಲ್ಲ. ಜನರ ಕಷ್ಟ ಅರಿಯದ ದುಷ್ಟ ಸರ್ಕಾರ ಇದು ಎಂದು ಹೇಳಿದ್ದಾರೆ. ನೆರೆ ಮತ್ತು ಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರು ದಸರಾ ಆಚರಿಸಲಾಗದೆ ಬೀದಿಗೆ ಬಂದಿದ್ದಾರೆ. ಆದರೆ, ಸರ್ಕಾರಕ್ಕೆ ಸಂತ್ರಸ್ತರ ಸಂಕಷ್ಟಕ್ಕಿಂತ, ‌ಜಾತಿ ಒಂದೇ ಬೇಕಾಗಿದೆ' ರಾಜ್ಯ ಸರ್ಕಾರ ಈಗ ಜಾತಿಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಜಂಬೂ ಸವಾರಿ ವೇಳೆ ರಾಜಕೀಯ ಗಣ್ಯರೊಂದಿಗೆ ಕಾಣಿಸಿಕೊಂಡ ಸಚಿವ ಹೆಚ್ ಸಿ ಮಹದೇವಪ್ಪ ಮೊಮ್ಮಗ, ಕಾಂಗ್ರೆಸ್ ನಾಯಕರಿಗೆ ಮುಜುಗರ!

ಗುರುವಾರ ಮೈಸೂರು ದಸರಾ ಜಂಬೂ ಸವಾರಿಯ ಸಂದರ್ಭದಲ್ಲಿ ಉನ್ನತ ರಾಜಕೀಯ ನಾಯಕರ ಜೊತೆಗೆ ಒಬ್ಬ ಹುಡುಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಸರ್ಕಾರದಿಂದ ವರದಿ ಕೇಳಿದೆ ಎಂದು ಹೇಳಲಾಗಿದೆ. ಮೆರವಣಿಗೆಯಲ್ಲಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಹಲವಾರು ಸಚಿವರು ಭಾಗವಹಿಸಿದ್ದರು. ಅವರ ನಡುವೆ ಕಪ್ಪು ಸನ್ ಗ್ಲಾಸ್ ಧರಿಸಿದ ಹುಡುಗನೊಬ್ಬ ಕಾಣಿಸಿಕೊಂಡಿದ್ದು ಕುತೂಹಲ ಕೆರಳಿಸಿತು. ಆ ಹುಡುಗ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರ ಮೊಮ್ಮಗ. ಯಾವುದೇ ಸಾಂವಿಧಾನಿಕ ಹುದ್ದೆಯನ್ನು ಹೊಂದಿಲ್ಲದಿದ್ದರೂ, ಅಧಿಕೃತ ರಾಜ್ಯ ಸಮಾರಂಭದಲ್ಲಿ ಅವರ ಉಪಸ್ಥಿತಿಯು ವಿರೋಧ ಪಕ್ಷದ ನಾಯಕರಿಗೆ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷದ ನಾಯಕತ್ವಕ್ಕೂ ಇರುಸುಮುರುಸು ತಂದಿದೆ.

MM Hills ನಲ್ಲಿ ಮತ್ತೆ ಹುಲಿ ಬೇಟೆ: ಅರ್ಧ ಮೃತದೇಹ ಪತ್ತೆ!

ಮಲೈ ಮಹದೇಶ್ವರ ಬೆಟ್ಟದ ವನ್ಯಜೀವಿ ಅಭಯಾರಣ್ಯದಲ್ಲಿ ಮತ್ತೆ ಹುಲಿ ಬೇಟೆ ನಡೆದಿದ್ದು, ಅರಣ್ಯ ಗಸ್ತು ಸಿಬ್ಬಂದಿಗೆ ಸತ್ತ ಹುಲಿಯ ಅರ್ಧ ದೇಹ ಪತ್ತೆಯಾಗಿದೆ. ಹನೂರು ವಿಭಾಗದಲ್ಲಿ ಪತ್ತೆಯಾದ ಮೃತದೇಹ ತಲೆ, ಭುಜ ಮತ್ತು ಮುಂಭಾಗವನ್ನು ಮಾತ್ರ ಹೊಂದಿದೆ. ಅರಣ್ಯ, ಪರಿಸರ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಬಿ ಖಂಡ್ರೆ, ಘಟನೆ ಸಂಬಂಧ ತನಿಖೆಗೆ ಆದೇಶಿಸಿದ್ದಾರೆ. ಎಂಟು ದಿನಗಳಲ್ಲಿ ವಿವರವಾದ ವರದಿಯನ್ನು ಸಲ್ಲಿಸಲು ಮತ್ತು ಕರ್ತವ್ಯ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಅರಣ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜುಲೈ 3, 2025 ರಂದು ಹುಲಿ ಮತ್ತು ಮರಿಗಳನ್ನು ವಿಷ ಹಾಕಿ ಸಾಯಿಸಲಾಗಿತ್ತು. ಈ ಘಟನೆಯ ಬಳಿಕ ವರದಿಯಾಗುತ್ತಿರುವ ಮತ್ತೊಂದು ಹುಲಿ ಬೇಟೆ ಪ್ರಕರಣ ಇದಾಗಿದೆ.

ಬಳ್ಳಾರಿ: ದೇವರಘಟ್ಟ ಜಾತ್ರೆಯಲ್ಲಿ ಗ್ರಾಮಸ್ಥರ ನಡುವೆ ಘರ್ಷಣೆ 2 ಸಾವು, 100 ಮಂದಿಗೆ ಗಾಯ!

ಬಳ್ಳಾರಿಯ ಗಡಿ ಭಾಗದ ದೇವರಘಟ್ಟ ಜಾತ್ರೆಯಲ್ಲಿ ಗ್ರಾಮಸ್ಥರ ನಡುವೆ ಘರ್ಷಣೆ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ನೂರು ಜನರಿಗೆ ಗಾಯಗಳಾಗಿವೆ. ಗುರುವಾರ ಮಧ್ಯರಾತ್ರಿ ಮಲ್ಲೇಶ್ವರ ಸ್ವಾಮಿ ಮತ್ತು ಮಾಳಮ್ಮ ದೇವಿಯ ಕಲ್ಯಾಣೋತ್ಸವ ನಂತರ ರಾಜಬೀದಿಯಲ್ಲಿ ಯಾತ್ರೆ ನಡೆಸಲಾಯಿತು. ಈ ವೇಳೆ ದೇವರ ವಿಗ್ರಹಗಳನ್ನು ತೆಗೆದುಕೊಂಡು ಹೋಗಲು ಎರಡು ಗುಂಪುಗಳು ಪೈಪೋಟಿ ನಡೆಸಿದವು. ಈ ಪ್ರಕ್ರಿಯೆಯಲ್ಲಿ ಕೋಲುಗಳಿಂದ ಹೊಡೆದಾಟ ನಡೆಯಿತು. ಇದರ ಪರಿಣಾಮವಾಗಿ ಇಬ್ಬರು ಭಕ್ತರು ಮೃತಪಟ್ಟರು. 100 ಜನರು ಗಾಯಗೊಂಡರು. ಈ ಪೈಕಿ ಐವರು ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆದವನಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕರ್ನೂಲ್ ಜಿಲ್ಲೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ಟೋಬರ್ 9ರವರೆಗೂ ರಾಜ್ಯಾದ್ಯಂತ ಮಳೆ:

ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು. 20ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಅಕ್ಟೋಬರ್ 9ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'Gaza deal ಒಪ್ಕೊಳ್ಳಿ.. ಇಲ್ಲ ನರಕ ತೋರಿಸ್ತೀವಿ': Hamas ಗೆ ಡೊನಾಲ್ಡ್ ಟ್ರಂಪ್ ಅಂತಿಮ ಎಚ್ಚರಿಕೆ!

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: 11 ಮಕ್ಕಳ ಸಾವಿನ ನಂತರ ಕೇಂದ್ರ ಎಚ್ಚರಿಕೆ

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

ಕರೂರ್ ಕಾಲ್ತುಳಿತ ತನಿಖೆಗೆ SIT ರಚನೆ: ಸ್ಥಳದಿಂದ ಓಡಿ ಹೋದ ವಿಜಯ್​​ಗೆ ಮದ್ರಾಸ್ ಹೈಕೋರ್ಟ್ ತರಾಟೆ

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ದ್ವಿವೇದಿ ಎಚ್ಚರಿಕೆ! Video

SCROLL FOR NEXT