ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಆಚೇಪಲ್ಲಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮೃತ ಬಾಲಕರನ್ನು ವಿಷ್ಣು(14), ನಿಹಾಲ್ ರಾಜ್(12) ಮತ್ತು ಹರ್ಷವರ್ಧನ್(16) ಎಂದು ಗುರುತಿಸಲಾಗಿದ್ದು, ದಸರಾ ರಜೆ ಹಿನ್ನೆಲೆಯಲ್ಲಿ ಈ ಮಕ್ಕಳು ಕೆರೆಗೆ ಈಜಲು ಹೋಗಿದ್ದರು.
ಈ ಮೂವರ ಪೈಕಿ ಇಬ್ಬರು ಈಜು ಬಾರದ್ದರಿಂದ ಮುಳುಗಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರನ್ನು ರಕ್ಷಿಸಲು ಹೋದ ಹರ್ಷವರ್ಧನ್ ಕೂಡ ಮೃತಪಟ್ಟಿದ್ದಾನೆ.
ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.