ನಿರ್ಮಾಣ ಹಂತದ ಕಟ್ಟಡದಲ್ಲಿ ವ್ಯಕ್ತಿಯ ಶವ ಪತ್ತೆ 
ರಾಜ್ಯ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ!

ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿರುವ ಕಟ್ಟಡಕ್ಕೆ ಭೇಟಿ ನೀಡಿದ ಕಾರ್ಮಿಕರೊಬ್ಬರು ಶವವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ.

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಯಾವುದೇ ಗುರುತು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿರುವ ಕಟ್ಟಡಕ್ಕೆ ಭೇಟಿ ನೀಡಿದ ಕಾರ್ಮಿಕರೊಬ್ಬರು ಶವವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದರು.

ಕಟ್ಟಡದಲ್ಲಿ ಸುಮಾರು ಒಂದು ವರ್ಷದಿಂದ ಯಾವುದೇ ನಿರ್ಮಾಣ ಕಾರ್ಯ ನಡೆಯುತ್ತಿಲ್ಲ ಎಂದು ಪ್ರಾಥಮಿಕ ತನಿಖೆ ನಡೆಸಿದ ನಂತರ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮದ್ಯದ ಅಮಲಿನಲ್ಲಿ ಬಂದ ವ್ಯಕ್ತಿಯು ಕಟ್ಟಡದಲ್ಲಿ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸುಮಾರು 6-8 ತಿಂಗಳ ಹಿಂದೆ ಮೃತಪಟ್ಟಿರಬಹುದು ಎನ್ನಲಾಗಿದ್ದು, ಪ್ಯಾಂಟ್ ಹಾಗೂ ಶರ್ಟ್ ಧರಿಸಿ ಮಲಗಿದ್ದ ಸ್ಥಿತಿಯಲ್ಲಿದೆ. ಹೀಗಾಗಿ ಮೇಲ್ನೋಟಕ್ಕೆ 35 ರಿಂದ 40 ವರ್ಷದ ಗಂಡಸಿನ ಅಸ್ಥಿಪಂಜರವಿರಬಹುದು ಎಂದು ಅಂದಾಜಿಸಲಾಗಿದೆ.

ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ: ವಿಜಯ್ ಜೊತೆ ಬಿಜೆಪಿ ಮಾತುಕತೆ? ಕಾಲ್ತುಳಿತ ಘಟನೆಯ ನಂತರ TVKಗೆ ಪ್ರಮುಖ ಭರವಸೆ?

ತಕ್ಷಣ ದಾಳಿ ನಿಲ್ಲಿಸುವಂತೆ ಟ್ರಂಪ್ ಆದೇಶಕ್ಕೆ ಡೋಂಟ್ ಕೇರ್: ಇಸ್ರೇಲ್ ದಾಳಿಗೆ ಇಬ್ಬರು ಮಕ್ಕಳು ಸೇರಿ ಏಳು ಮಂದಿ ಪ್ಯಾಲೆಸ್ತೀನಿಯರು ಬಲಿ

ನ. 15 ರಿಂದ ಹೊಸ ಟೋಲ್ ನಿಯಮ: ಫಾಸ್ಟ್‌ಟ್ಯಾಗ್ ಇಲ್ಲದವರಿಗೆ ಕೇಂದ್ರದಿಂದ ಗುಡ್ ನ್ಯೂಸ್

'India my Matrubhumi', ಜೈ ಶ್ರೀರಾಮ್: ಸಂಚಲನ ಸೃಷ್ಟಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಹೇಳಿಕೆ!

ಉತ್ತರ ಪ್ರದೇಶದಲ್ಲಿ ಧ್ವನಿವರ್ಧಕದಲ್ಲಿ 'ಹನುಮಾನ್ ಚಾಲೀಸಾ' ಹಾಕಿದ್ದ ಅರ್ಚಕರಿಗೆ ಬೆದರಿಕೆ!

SCROLL FOR NEXT