ಬೆಂಗಳೂರು: ಆಚಾರ್ಯ ಕಾಲೇಜು ಮೈದಾನದಲ್ಲಿ ನಡೆದ ಸ್ಯಾಂಡಲ್ವುಡ್ ಪ್ರೀಮಿಯರ್ ಲೀಗ್ ಪಂದ್ಯ ವೀಕ್ಷಿಸಿ ಸ್ನೇಹಿತನ ಜೊತೆ ಹೋಗುತ್ತಿದ್ದಾಗ ಬೃಹತ್ ಗಾತ್ರದ ಅರಳಿ ಮರ ಉರುಳಿ ಬಿದ್ದು ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣೆ ಬಳಿ ಘಟನೆ ನಡೆದಿದ್ದು ಬೆಂಗಳೂರಿನ ಆರ್.ಟಿ. ನಗರದ 23 ವರ್ಷದ ಕೀರ್ತನಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮರಣೋತ್ತರ ಪರೀಕ್ಷೆಗಾಗಿ ಕೀರ್ತನಾ ಶವವನ್ನು ಸಪ್ತಗಿರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇನ್ನು ಕೀರ್ತನಾ ಸ್ನೇಹಿತೆ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.