ಮೃತಪಟ್ಟ ಸೋದರರು  
ರಾಜ್ಯ

ಗೋಕಾಕ್: ತಮ್ಮನ ಸಾವಿನ ಸುದ್ದಿ ಕೇಳಿ ಹೃದಯಾಘಾತವಾಗಿ ಅಣ್ಣನೂ ಸಾವು, ಹೆತ್ತವರ ಆಕ್ರಂದನ

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ದುರಂತ ನಡೆದಿದ್ದು, ಸತೀಶ್ ಬಾಗನ್ನವರ್​ (16ವ) ಅನಾರೋಗ್ಯದ ಕಾರಣದಿಂದ ಮೃತನಾದರೆ, ಸುದ್ದಿ ತಿಳಿದ ಅಣ್ಣ ಬಸವರಾಜ್ ಬಾಗನ್ನವರ್​​ (24ವ) ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಬೆಳಗಾವಿ: ಹತ್ತನೇ ತರಗತಿಯಲ್ಲಿ ಓದುತ್ತಿದ್ದ ತಮ್ಮ ಅನಾರೋಗ್ಯದಿಂದ ಮೃತಪಟ್ಟ ವಿಷಯ ತಿಳಿದು ಅಣ್ಣ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ದುರಂತ ನಡೆದಿದ್ದು, ಸತೀಶ್ ಬಾಗನ್ನವರ್​ (16ವ) ಅನಾರೋಗ್ಯದ ಕಾರಣದಿಂದ ಮೃತನಾದರೆ, ಸುದ್ದಿ ತಿಳಿದ ಅಣ್ಣ ಬಸವರಾಜ್ ಬಾಗನ್ನವರ್​​ (24ವ) ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇಬ್ಬರು ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಘಾತ ಹೇಳತೀರದಾಗಿದೆ.

ನಡೆದ ಘಟನೆಯೇನು?

ಎಸ್.ಎಸ್.ಎಲ್.ಸಿ ಓದುತ್ತಿದ್ದ ಸತೀಶ ಬಾಗನ್ನವರ (16ವ) ನಿನ್ನೆ ನಸುಕಿನ ಜಾವ 4 ಗಂಟೆಗೆ ಹೃದಯಾಘಾತವಾಗಿದೆ. ಸತೀಶ ಬದುಕುಳಿಯುವುದು ಕಷ್ಟ ಎಂಬ ಸುದ್ದಿ ಕೇಳಿದ ಅಣ್ಣ ಬಸವರಾಜ ಬಾಗನ್ನವರ (24ವ) ಕುಸಿದು ಬಿದ್ದರು. ಆಸ್ಪತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ತಮ್ಮ ಸತೀಶ ಬಾಗನ್ನವರ ಸಾವಿನ ಸುದ್ದಿ ಬಂತು. ಸುದ್ದಿ ಕೇಳಿದ ತಕ್ಷಣ ಬಸವರಾಜ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಬಸವರಾಜ್ ಪತ್ನಿ ಆರೋಗ್ಯದಲ್ಲೂ ಏರುಪೇರು!

ತನ್ನ ಪತಿ ಹಾಗೂ ಮೈದುನನ ಸಾವಿನ ಸುದ್ದಿ ಕೇಳಿ ಬಸವರಾಜ ಅವರ ಪತ್ನಿ ತುಂಬು ಗರ್ಭಿಣಿ ಸಹ ಕುಸಿದು ಬಿದ್ದಿದ್ದಾರೆ. ಎನ್ನಲಾಗಿದೆ. ಅವರನ್ನು ಗೋಕಾಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇಬ್ಬರು ಗಂಡು ಮಕ್ಕಳು ತಮ್ಮ ಕಣ್ಮುಂದೆಯೇ ಜೀವ ಕಳೆದುಕೊಂಡಿದ್ದನ್ನು ಕಂಡು ತಂದೆ-ತಾಯಿ ಆಘಾತಕ್ಕೊಳಗಾಗಿದ್ದಾರೆ. ಸತೀಶ 10ನೇ ತರಗತಿಯಲ್ಲಿ ಓದುತ್ತಿದ್ದು, ಬಸವರಾಜ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ; ಭೀಕರ ಭೂಕುಸಿತದಲ್ಲಿ 14 ಸಾವು, ಸಿಕ್ಕಿಂ ಸಂಪರ್ಕ ಕಡಿತ

ಡೊನಾಲ್ಡ್ ಟ್ರಂಪ್ ಕರೆಗೂ ನಿಲ್ಲದ ಘರ್ಷಣೆ: ಇಸ್ರೇಲ್ ದಾಳಿಗೆ ಗಾಜಾದಲ್ಲಿ ಕನಿಷ್ಠ 60 ಮಂದಿ ಸಾವು

ಬಿಹಾರ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ: ಶೇ.50ರಷ್ಟು ಸಚಿವರಿಗೆ ಕೊಕ್..?

ಕೆಮ್ಮಿನ ಸಿರಪ್ ಬಗ್ಗೆ ಕೇಂದ್ರ ಸರ್ಕಾರ ಯೂ-ಟರ್ನ್: ಮಧ್ಯ ಪ್ರದೇಶ, ರಾಜಸ್ತಾನ, ತಮಿಳು ನಾಡು ಬ್ಯಾನ್

KRSಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ಮತ್ತೆ ವಿವಾದದ ಕಿಡಿಹೊತ್ತಿಸಿದ ಮಾಜಿ ಸಚಿವ ರಾಜಣ್ಣ

SCROLL FOR NEXT