ಚಾಮರಾಜನಗರ: ಮುಸ್ಲಿಂ (Muslim) ಯುವತಿಯೊಬ್ಬಳು ಯುವಕನೊಂದಿಗೆ ಓಡಿಹೋಗಿದ್ದಾಳೆ ಎಂದು ಆರೋಪಿಸಿ ಯುವತಿಯ ಸಂಬಂಧಿಕರು ಯುವನೋರ್ವನಿಗೆ ಚೂರಿ ಇರಿದಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ. ಮಹೇಶ್ ಎಂಬಾತ ನಾಪತ್ತೆಯಾಗಿದ್ದಾನೆ ಎಂದು ಆರ್ಮುಗಮ್ ಎಂಬಾತ ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಬಂದಿದ್ದಾಗ ಜಾಕೀರ್ ಹಾಗೂ ಆತನ ಸ್ನೇಹಿತ ಪೊಲೀಸರು ಠಾಣೆ ಬಳಿಯೇ ಚಾಕು ಇರಿದಿರುವ ಘಟನೆ ನಡೆದಿದ್ದು ಈ ಸಂಬಂಧ ಗುಂಡ್ಲುಪೇಟೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಅಕ್ಟೋಬರ್ 1 ರಿಂದ ಮುಸ್ಲಿಂ ಯುವತಿ ಬೇಬಿ ಆಯೇಷಾ ಕಾಣೆಯಾಗಿದ್ದಾಳೆ. ತಮ್ಮ ಮಗಳು ಮಹೇಂದ್ರನ ಜೊತೆ ಓಡಿ ಹೋಗಿರಬೇಕು ಎಂದು ಯುವತಿಯ ಪೋಷಕರು ಶಂಕಿಸಿದ್ದಾರೆ. ಮಹೇಂದ್ರ ಸಂಬಂಧಿ ಆರ್ಮುಗಮ್ ಮಹೇಂದ್ರ ಕಾಣೆಯಾಗಿದ್ದಾನೆಂದು ದೂರು ಕೊಡಲು ಠಾಣೆಗೆ ಬಂದಿದ್ದರು. ಈ ವೇಳೆ ಠಾಣೆ ಬಳಿ ಕಾದು ಕುಳಿತ್ತಿದ್ದ ಜಾಕೀರ್ ಹಾಗೂ ಆತನ ಸ್ನೇಹಿತ ಆರ್ಮುಗಮ್ ಕುತ್ತಿಗೆಗೆ ಚೂರಿಯಿಂದ ಇರಿದಿದ್ದಾರೆ. ಸದ್ಯ ನಾಪತ್ತೆ ಹಾಗೂ ಚಾಕು ಇರಿತ ಸಂಬಂಧ ಪ್ರಕರಣ ದಾಖಲಾಗಿದೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ಆರ್ಮುಗಮ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.