ಪರಿಸರ ಸ್ನೇಹಿ ವಾಹನಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ 
ರಾಜ್ಯ

EV Vehicles: 68 ಪರಿಸರ ಸ್ನೇಹಿ ವಾಹನಗಳಿಗೆ ಸಿಎಂ ಚಾಲನೆ; ರಾಸಾಯನಿಕ ಪಟಾಕಿ ಮಾರಾಟಗಾರರ ಲೈಸೆನ್ಸ್ ರದ್ದು ಮಾಡಿ- ಈಶ್ವರ್ ಖಂಡ್ರೆ

ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ ಖಂಡ್ರೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು: ವಿಧಾನಸೌಧದ ಮೆಟ್ಟಿಲುಗಳ ಬಳಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ‌ ಹಾಗೂ ವಲಯ ಕಚೇರಿಗಳ ಬಳಕೆಗಾಗಿ 68 ಪರಿಸರ ಸ್ನೇಹಿ ವಿದ್ಯುತ್ ಚಾಲಿತ (ಇವಿ) ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ ಖಂಡ್ರೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಈಶ್ವರ್ ಖಂಡ್ರೆ, ಪಟಾಕಿ ಮಳಿಗೆ ಮಾಲೀಕರಿಂದ ಭಾರ ಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡದಂತೆ ಮತ್ತು ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವಂತೆ ಮುಚ್ಚಳಿಕೆ ಬರೆಸಿಕೊಳ್ಳುವಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ ನೀಡಿದರು.

15 ವರ್ಷ ಪೂರೈಸಿದ ಡಿಸೆಲ್ ವಾಹನಗಳನ್ನು ಬಳಕೆ ಮಾಡುವಂತಿಲ್ಲ. ಅದನ್ನು ಸ್ಕ್ರ್ಯಾಪ್ ನೀತಿಯಂತೆ ಬಳಕೆಯಿಂದ ದೂರವಿಡಬೇಕು. ಮಂಡಳಿಯಲ್ಲಿ ವಾಹನಗಳ ಕೊರತೆಯಿಂದ ಏಕ ಬಳಕೆ ಪ್ಲಾಸ್ಟಿಕ್, ವೈದ್ಯಕೀಯ ತ್ಯಾಜ್ಯ, ಇ-ತ್ಯಾಜ್ಯ ವಿಲೇವಾರಿ ಘಟಕಗಳ ಮೇಲೆ ನಿಗಾ ಇಡಲು ಮತ್ತು ಏಕ ಬಳಕೆ ಪ್ಲಾಸ್ಟಿಕ್ ತಯಾರಿಕಾ ಘಟಕ, ಮಳಿಗೆಗಳ ತಪಾಸಣೆ, ಪರಿಶೀಲನೆ ಮಾಡಲು, ಜಲ ಮೂಲಗಳ ಗುಣಮಟ್ಟ ಪರೀಕ್ಷೆ ಮಾಡಲು ಅಡ್ಡಿಯಾಗುತ್ತಿತ್ತು. ಈ ನಿಟ್ಟಿನಲ್ಲಿ 68 ಇವಿ ವಾಹನಗಳಿಗೆ ಮಂಡಳಿ ಕಳುಹಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದರು.

ಈ ವಾಹನಗಳನ್ನು ಸದ್ಬಳಕೆ ಮಾಡಿಕೊಂಡು, ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಪರಿಸರ ಸಂರಕ್ಷಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಮಂಡಳಿಯ ಅಧಿಕಾರಿಗಳಿಗೆ ಈಶ್ವರ ಖಂಡ್ರೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ