ಮಧು ಬಂಗಾರಪ್ಪ 
ರಾಜ್ಯ

ಮಂಗಳೂರು: ರಾಜ್ಯದಲ್ಲಿ 18 ಸಾವಿರಕ್ಕೂ ಅಧಿಕ 'ಶಿಕ್ಷಕರ ನೇಮಕ'ಕ್ಕೆ ಸಿದ್ಧತೆ- ಮಧು ಬಂಗಾರಪ್ಪ

ಪರಿಶಿಷ್ಟ ಜಾತಿಯಲ್ಲಿನ ಒಳ ಮೀಸಲಾತಿ ಕುರಿತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವಾಗಿದೆ ಎಂದು ಅವರು ತಿಳಿಸಿದರು.

ಮಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಿಗೆ 13,000 ಶಿಕ್ಷಕರು ಹಾಗೂ ಅನುದಾನಿತ ಶಾಲೆಗಳಿಗೆ ಸುಮಾರು 5,500 ಶಿಕ್ಷಕರು ಸೇರಿದಂತೆ 18.500 ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗಳ ಸಿದ್ಧತೆ ನಡೆಯುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಕೇವಲ 4,700 ಶಿಕ್ಷಕರ ನೇಮಕಾತಿ ನಡೆದಿತ್ತು. ತಾನು ಶಿಕ್ಷಣ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಈಗಾಗಲೇ 13,000 ಶಿಕ್ಷಕರ ನೇಮಕಾತಿ ನಡೆದದ್ದು, ಮತ್ತೆ 18, 500 ಶಿಕ್ಷಕರ ನೇಮಕಾತಿಗೆ ಸಿದ್ಧತೆ ನಡೆದಿದೆ ಎಂದರು.

ಪರಿಶಿಷ್ಟ ಜಾತಿಯಲ್ಲಿನ ಒಳ ಮೀಸಲಾತಿ ಕುರಿತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವಾಗಿದೆ ಎಂದು ಅವರು ತಿಳಿಸಿದರು.

ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಕೆಪಿಎಸ್ ಮಾದರಿಯಡಿ ಶೇ. 80 ರಷ್ಟು ಸರಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಈ ಶಾಲೆಗಳಲ್ಲಿ ಫಲಿತಾಂಶದ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಿ ಪರೀಕ್ಷೆಯಲ್ಲಿ ನಕಲು ಮಾಡುವುದಕ್ಕೆ ಕಡಿವಾಣ ಹಾಕಲಾಗಿದೆ ಎಂದು ಅವರು ಹೇಳಿದರು.

ಇದೇ ವೇಳೆ 3 ನೇ ಸ್ತರದ ಪರೀಕ್ಷಾ ಪದ್ಧತಿಯೂ ಕೂಡಾ ಮಕ್ಕಳ ಫಲಿತಾಂಶವನ್ನು ಉತ್ತಮ ಪಡಿಸಲು ಸಹಕಾರಿಯಾಗಿದೆ. ಈ ಪರೀಕ್ಷಾ ವ್ಯವಸ್ಥೆಯಿಂದ 2ನೇ ಸ್ತರ ಹಾಗೂ 3ನೇ ಸ್ತರದ ಎಸೆಸೆಲ್ಸಿ ಪರೀಕ್ಷೆಯಲ್ಲಿ 11,6000 ಮಕ್ಕಳು ಉತ್ತೀಣರಾಗಿದ್ದು, ಪಿಯುಸಿಯಲ್ಲಿಯೂ 56 ಸಾವಿರಕ್ಕೂ ಅಧಿಕ ಮಕ್ಕಳು ಉತ್ತೀಣರಾಗಿದ್ದಾರೆ ಎಂದವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತದಲ್ಲಿ ಮತದಾನ; ನ.14ಕ್ಕೆ ಫಲಿತಾಂಶ ಪ್ರಕಟ!

ಕರ್ನಾಟಕದಲ್ಲಿ 4ನೇ ದಿನಕ್ಕೆ KGF 2 ಕಲೆಕ್ಷನ್‌ ಧೂಳಿಪಟ ಮಾಡಿದ ಕಾಂತಾರ 1!

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮು, ಶೀತಕ್ಕೆ ಸಿರಪ್‌ ನೀಡಬೇಡಿ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

Kannada Biggbossಗೆ ಸಂಕಷ್ಟ: ಕೂಡಲೇ ಬಿಗ್‌ಬಾಸ್‌ ಮನೆಯನ್ನು ಬಂದ್ ಮಾಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್

CJI ಬಿಆರ್ ಗವಾಯಿಯತ್ತ 'ಶೂ' ಎಸೆತ: ಇದು ಕೇವಲ ಅವರ ಮೇಲಿನ ಹಲ್ಲೆಯಷ್ಟೇ ಅಲ್ಲ...: ಸೋನಿಯಾ ಗಾಂಧಿ

SCROLL FOR NEXT