ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ. 
ರಾಜ್ಯ

ರಾಜ್ಯದಲ್ಲಿ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ: BJPಯಿಂದ ಸಿದ್ಧತೆ ಆರಂಭ

ಮತದಾರರಾಗಲು ಪೌರತ್ವ ಪಡೆಯುವುದು ಅನಿವಾರ್ಯ. 2004ರವರೆಗೆ ನಿರಂತರವಾಗಿ ಎಸ್‌ಐಆರ್ ನಡೆಯುತ್ತಿತ್ತು. ಕೇಂದ್ರದಲ್ಲಿ ಕಾಂಗ್ರೆಸ್‌ ಆಡಳಿತಕ್ಕೆ ಬಂದ ಬಳಿಕ ಅದನ್ನು ರದ್ದು ಮಾಡಿದ್ದರು. ಮತ್ತೆ ಅದನ್ನು ಆರಂಭಿಸಿರುವುದು ಧನಾತ್ಮಕ ಮತ್ತು ಸಾರ್ಥಕ ಕ್ರಮ.

ಬೆಂಗಳೂರು: ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಶೀಲನೆ (ಎಸ್‌ಐಆರ್‌) ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದ್ದು, ಈ ನಡುವಲ್ಲೇ ರಾಜ್ಯದಲ್ಲೂ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆಗಾಗಿ ರಾಜ್ಯ ಬಿಜೆಪಿ ನಾಯಕರು ಸಿದ್ಧತೆ ಆರಂಭಿಸಿದ್ದಾರೆ.

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಗಾರವನ್ನು ರಾಜ್ಯ ಬಿಜೆಪಿ ಬೆಂಗಳೂರಿನಲ್ಲಿ ನಡೆಸಿದ್ದು, ಈ ಕಾರ್ಯಗಾರದಲ್ಲಿ ಶಾಸಕರು, ಜಿಲ್ಲಾ ಘಟಕದ ಅಧ್ಯಕ್ಷರು ಮತ್ತು ರಾಜ್ಯದಾದ್ಯಂತದ ಇತರರು ಸೇರಿದಂತೆ 200 ಕ್ಕೂ ಹೆಚ್ಚು ನಾಯಕರು ಭಾಗವಹಿಸಿದ್ದರು.

ಭಾರತೀಯ ಜನತಾ ಪಕ್ಷ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಅಧ್ಯಕ್ಷ ಓಂ ಪಾಠಕ್ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಭಾರತೀಯ ಚುನಾವಣಾ ಆಯೋಗ (ECI) ದೇಶಾದ್ಯಂತ ಕೈಗೊಳ್ಳಲಿರುವ ಮತದಾರರ ಪಟ್ಟಿಯ SIR ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಹೇಳಿದರು.

ಬಿಹಾರದಲ್ಲಿ SIR ಪೂರ್ಣಗೊಂಡಿದ್ದು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಕರ್ನಾಟಕದಲ್ಲೂ ಘೋಷಣೆಯಾಗಲಿದೆ. ಹೀಗಾಗಿ ಬಿಜೆಪಿ ಸಿದ್ಧತೆ ನಡೆಸುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ ಕಾಂಗ್ರೆಸ್ ಮತ್ತು ಇಂಡಿಯಾ ಬಣದ ಇತರೆ ಪಕ್ಷಗಳನ್ನು ಟೀಕಿಸಿದ ಅವರು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಶೀಲನೆ ಬಗ್ಗೆ ಕೆಲವರು ತಪ್ಪು ಕಲ್ಪನೆಗಳ ಸೃಷ್ಟಿಸಲು ಯತ್ನಿಸುತ್ತಿದ್ದಾರೆಂದು ಆರೋಪಿಸಿದರು.

ಪ್ರಜಾಪ್ರಭುತ್ವದಲ್ಲಿ ಸ್ವಚ್ಛ ಮತ್ತು ಅಧಿಕೃತ ಮತದಾರರ ಪಟ್ಟಿ ಬಹಳ ಮುಖ್ಯ, ಏಕೆಂದರೆ ಚುನಾವಣೆಯಲ್ಲಿ ಭಾಗವಹಿಸುವ ಅಕ್ರಮ ನುಸುಳುಕೋರರು ದೇಶದ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುತ್ತಾರೆ. ಯಾವುದೇ ದೇಶದಲ್ಲಿ, ಮತದಾರರಾಗಲು ನೀವು ನಾಗರಿಕರಾಗಿರಬೇಕು. ಹೀಗಾಗಿ ಚುನಾವಣಾ ಆಯೋಗವು ಈ ಅಭಿಯಾನವನ್ನು ಕೈಗೊಂಡಿದೆ ಎಂದು ಹೇಳಿದರು.

ಮತದಾರರಾಗಲು ಪೌರತ್ವ ಪಡೆಯುವುದು ಅನಿವಾರ್ಯ. 2004ರವರೆಗೆ ನಿರಂತರವಾಗಿ ಎಸ್‌ಐಆರ್ ನಡೆಯುತ್ತಿತ್ತು. ಕೇಂದ್ರದಲ್ಲಿ ಕಾಂಗ್ರೆಸ್‌ ಆಡಳಿತಕ್ಕೆ ಬಂದ ಬಳಿಕ ಅದನ್ನು ರದ್ದು ಮಾಡಿದ್ದರು. ಮತ್ತೆ ಅದನ್ನು ಆರಂಭಿಸಿರುವುದು ಧನಾತ್ಮಕ ಮತ್ತು ಸಾರ್ಥಕ ಕ್ರಮ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

4 ಲಕ್ಷ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಅನುಮತಿ ನೀಡಿದವರಿಂದ ಪಾಠದ ಅಗತ್ಯವಿಲ್ಲ: ವಿಶ್ವಸಂಸ್ಥೆಯಲ್ಲಿ ಪಾಕ್‌ ವಿರುದ್ಧ ಗುಡುಗಿದ ಭಾರತ

ನನ್ನ ಸೂಚನೆ ಪರಿಣಾಮಕಾರಿಯಾಗಿತ್ತು, ಹೀಗಾಗಿ ಯುದ್ಧ ನಿಲ್ಲಿಸಿದರು: ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಟ್ರಂಪ್ ಪುನರುಚ್ಛಾರ

ಪರಿಶಿಷ್ಟ ಜಾತಿಯವರು ಬೌದ್ಧ ಧರ್ಮಕ್ಕೆ ಮತಾಂತರ ಆದ್ರು 'SC ಜಾತಿ ಪ್ರಮಾಣಪತ್ರ': ರಾಜ್ಯ ಸರ್ಕಾರದ ಆದೇಶ!

Uttar Pradesh: ರಾತ್ರಿ ಹೊತ್ತಲ್ಲಿ 'ಹಾವಾಗಿ' ಕಚ್ಚಲು ಓಡಾಡಿಸುವ ಪತ್ನಿ: ಅಧಿಕಾರಿಗಳ ದುಂಬಾಲು ಬಿದ್ದ ಪತಿ!

CJI ಮೇಲೆ 'ಶೂ' ಎಸೆತ: ಯಾವುದೇ ಪಶ್ಚಾತ್ತಾಪವಿಲ್ಲ, ನಾನು ಮಾಡಿದ್ದು ಸರಿಯಿದೆ ಎಂದ ವಕೀಲ ರಾಕೇಶ್ ಕಿಶೋರ್

SCROLL FOR NEXT