ಸಿಎಂ ಸಿದ್ದರಾಮಯ್ಯ 
ರಾಜ್ಯ

ಮನುವಾದಿಗಳ ಮನಸ್ಸಲ್ಲಿ ಜಾತಿ ಮೂಲದ ಅಸಮಾನತೆ ಭಧ್ರವಾಗಿರುವುದಕ್ಕೆ ಈ ಘಟನೆಯೇ ಸಾಕ್ಷಿ: CJI ಮೇಲೆ 'ಶೂ' ಎಸೆತ ಘಟನೆಗೆ ಸಿದ್ದರಾಮಯ್ಯ ಖಂಡನೆ

ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ.

ಬೆಂಗಳೂರು: ವಕೀಲನೊಬ್ಬ ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದು, ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ ಎಂದು ಸೋಮವಾರ ಹೇಳಿದ್ದಾರೆ.

ಸಿಜೆಐ ಮೇಲೆ 'ಶೂ' ಎಸೆತ ಘಟನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆಂದು ಹೇಳಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ.

ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಇಲ್ಲವೇ ಧರ್ಮಕ್ಕೆ ಸೇರಿದವರಲ್ಲ. ಈ ದೃಷ್ಟಿಯಿಂದ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ ಇಂದು ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕೆಂದು ಮನವಿ ಮಾಡುತ್ತೇನೆಂದು ತಿಳಿಸಿದ್ದಾರೆ.

ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆದುಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟುಹಾಕಿರುವ ಕಾರಣಕ್ಕಾಗಿಯೇ ರಾಕೇಶ್ ಕಿಶೋರ್ ನಂತಹ ಮನುವಾದಿ ಮನಸ್ಸುಗಳು ಸಮಾಜದಲ್ಲಿ ಹುಟ್ಟಿಕೊಂಡಿವೆ ಎನ್ನುವುದನ್ನು ನಾವು ಮರೆಯಬಾರದು. ನಾಥೂರಾಮ್ ಗೋಡ್ಸೆಯಂತಹ ಒಬ್ಬ ಕೊಲೆಗಡುಕನನ್ನು ದೇಶಪ್ರೇಮಿ ಎಂದು ಮೆರೆಸಲು ಹೊರಟಿರುವ ರೀತಿಯಲ್ಲಿಯೇ ಕೆಲವು ಪುಂಡರು ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ಹೇಳಿದ್ದಾರೆ.

ಗೃಹ ಡಾ.ಜಿ.ಪರಮೇಶ್ವರ್ ಅವರು ಪ್ರತಿಕ್ರಿಯಿಸಿ, ದೇಶದ ಸರ್ವೋಚ್ಛ ನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಯಾದ ಶ್ರೀ. ಬಿ.ಆರ್. ಗವಾಯಿ ಅವರ ಮೇಲೆ ನ್ಯಾಯಾಲಯ ಆವರಣದಲ್ಲಿ ಶೂ ಎಸೆದಿರುವ ವಕೀಲನ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಕಾನೂನು ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ನಡೆದಿರುವ ನಾಚಿಕೆಗೇಡಿನ, ಸಹಿಸಲಾಗದ ಆಕ್ರಮಣ ಎಂದು ಹೇಳಿದ್ದಾರೆ.

ಶೋಷಿತ ಸಮುದಾಯದವರಾದ ಬಿ.ಆರ್. ಗವಾಯಿ ಅವರು ತಮ್ಮ ಶ್ರಮ, ಬುದ್ಧಿವಂತಿಕೆ ಮತ್ತು ನಿಷ್ಠೆಯಿಂದ ದೇಶದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಹೊರಹೊಮ್ಮಿದ್ದಾರೆ. ಅವರ ಮೇಲಿನ ಹಿಂಸಾತ್ಮಕ ಕೃತ್ಯ ನೇರವಾಗಿ ನಮ್ಮ ದೇಶದ ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ವಿರುದ್ಧವಾದ ಅಪಮಾನಕಾರಿ ಕೃತ್ಯವಾಗಿದೆ.

ನ್ಯಾಯಾಧೀಶರು ನಮ್ಮ ಪ್ರಜಾಪ್ರಭುತ್ವದ ಧುರೀಣರು ಮತ್ತು ನ್ಯಾಯದ ಕಂಬಗಳಾಗಿದ್ದಾರೆ. ಈ ಕೃತ್ಯವನ್ನು ಎಸಗಿದ ವಕೀಲನ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸುತ್ತೇನೆ. ನ್ಯಾಯಾಂಗ ವ್ಯವಸ್ಥೆಯ ಗೌರವವನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

4 ಲಕ್ಷ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಅನುಮತಿ ನೀಡಿದವರಿಂದ ಪಾಠದ ಅಗತ್ಯವಿಲ್ಲ: ವಿಶ್ವಸಂಸ್ಥೆಯಲ್ಲಿ ಪಾಕ್‌ ವಿರುದ್ಧ ಗುಡುಗಿದ ಭಾರತ

ನನ್ನ ಸೂಚನೆ ಪರಿಣಾಮಕಾರಿಯಾಗಿತ್ತು, ಹೀಗಾಗಿ ಯುದ್ಧ ನಿಲ್ಲಿಸಿದರು: ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಟ್ರಂಪ್ ಪುನರುಚ್ಛಾರ

CJI ಮೇಲೆ 'ಶೂ' ಎಸೆತ: ಯಾವುದೇ ಪಶ್ಚಾತ್ತಾಪವಿಲ್ಲ, ನಾನು ಮಾಡಿದ್ದು ಸರಿಯಿದೆ ಎಂದ ವಕೀಲ ರಾಕೇಶ್ ಕಿಶೋರ್

'ಮುಸ್ಲಿಂ' ಮಹಿಳೆಗೆ ಚಿಕಿತ್ಸೆ ನೀಡಲ್ಲ: ಯೋಗಿ ನಾಡಲ್ಲಿ ಹೊಸ ವಿವಾದ ಹುಟ್ಟುಹಾಕಿದ ಡಾಕ್ಟರ್! ಮುಂದಿನ ಸಮಾಜದ ಗತಿ ಏನು?

ಹಾಸನಾಂಭ ಉತ್ಸವದಲ್ಲಿ VIP ಸಂಸ್ಕೃತಿಗೆ ಬ್ರೇಕ್- ಜನಸ್ನೇಹಿ ಉತ್ಸವಕ್ಕೆ ಅವಕಾಶ: ಕೃಷ್ಣ ಬೈರೇಗೌಡ

SCROLL FOR NEXT