ಸಿಎಂ ಸಿದ್ದರಾಮಯ್ಯ 
ರಾಜ್ಯ

ST ಗೆ ಕುರುಬರ ಸೇರ್ಪಡೆ: ಹೋರಾಟ ಮಾಡಿದವರು ನಾವಲ್ಲ, ಬಿಜೆಪಿಯಲ್ಲಿದ್ದ ಈಶ್ವರಪ್ಪ; ಸಿಎಂ ಸಿದ್ದರಾಮಯ್ಯ

ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕುರುಬ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರ್ಪಡೆ ಮಾಡುವ ಕುರಿತು ಪರ ಹಾಗೂ ವಿರುದ್ಧವಾದ ಚರ್ಚೆಗಳು ಜೋರಾಗಿ ನಡೆಯುತ್ತಿದೆ. ಶೇ. 7 ರಷ್ಟು ಮೀಸಲಾತಿ ಹೊಂದಿರುವ ಎಸ್ ಟಿ ಪಟ್ಟಿಗೆ ಕುರುಬ ಸಮುದಾಯದ ಹಲವು ಪಂಗಡಗಳ ಸೇರ್ಪಡೆಗೆ ಹಲವು ರಾಜಕೀಯ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಇಂದು ವಿಧಾನಸೌಧದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಎಸ್, ಟಿಗೆ ಕುರುಬರ ಸೇರ್ಪಡೆ ವಿಚಾರ ಕುರಿತು ಮಾತನಾಡಿದ ಮುಖ್ಯಮಂತ್ರಿ, ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ತಿಳಿಸಿದರು.

ಹಿಂದೆ ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ. ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ಉಗ್ರಪ್ಪ ಮತ್ತು ದೇವೇಗೌಡರ ನಡುವಿನ‌ ಒಡನಾಟ ಆಗಲೂ ಚೆನ್ನಾಗಿತ್ತು, ಈಗಲೂ ಚನ್ನಾಗಿದೆ. ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಡ ಚನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ಎಸ್.ಟಿ ಗೆ ಸೇರಿಸಿದರು. ವಾಲ್ಮೀಕಿ, ಬೇಡ ಮತ್ತು ನಾಯಕ‌ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು ಎಂದರು.

ಕುರುಬರನ್ನು ಎಸ್‌.ಟಿ ಗೆ ಸೇರಿಸಿದರೆ ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ. ಜೆ.ಹೆಚ್.ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ಎಸ್.ಟಿ ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು. ಇವತ್ತಿನವರೆಗೂ ಇದು ಸಾಧ್ಯವಾಗಿಲ್ಲ ಎಂದು ತಿಳಿಸಿದರು.

ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಶೋಷಿತ ಸಮುದಾಯದ ವಾಲ್ಮೀಕಿ ಅವರು ವಿಶ್ವ ಮಾನವರಾಗಿ, ಶ್ರೇಷ್ಠವಾದ ರಾಮಾಯಣ ಮಹಾಕಾವ್ಯವನ್ನು ರಚಿಸಿದರು. ಹೀಗಾಗಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು. ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆಯೂ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ನನ್ನದೇ ನೇತೃತ್ವದ ಸರ್ಕಾರ. ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ದೇಸಾಯಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BiggBoss Kannada: ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ, ಮನೆ ಖಾಲಿ ಮಾಡಲು ಬಿಗ್‌ಬಾಸ್‌ ಸ್ಪರ್ಧಿಗಳಿಗೆ 1 ಗಂಟೆ ಗಡುವು!

Watch | ಬಿಗ್ ಬಾಸ್ ಕನ್ನಡ ಮನೆಯಿಂದ ಸ್ಪರ್ಧಿಗಳು ಹೊರಕ್ಕೆ; ಶೋ ಸ್ಟುಡಿಯೋ ಬಂದ್!; ಕಾಂತಾರ ಚಾಪ್ಟರ್ 1: ಸಿನಿಮಾ ಅಭಿಮಾನಿಗಳಿಂದ ಕಂಡಕಂಡಲ್ಲಿ ದೈವ ವೇಷ, ನರ್ತನ ತುಳು ಕೂಟ ಅಸಮಾಧಾನ!

ತುಮಕೂರು: ಮಾರ್ಕೋನಹಳ್ಳಿ ಡ್ಯಾಂನಲ್ಲಿ ದುರಂತ; ಒಂದೇ ಕುಟುಂಬದ 6 ಮಂದಿ ನೀರುಪಾಲು!

CM ಬದಲಾವಣೆ ಹೇಳಿಕೆಗಳಿಗೆ 'ಬ್ರೇಕ್ ಹಾಕಿ': ಕಾಂಗ್ರೆಸ್ ಹೈಕಮಾಂಡ್​​ಗೆ ಹಿರಿಯ ಸಚಿವರ ಆಗ್ರಹ

News headlines 07-10-2025 | ಕನ್ನಡ ಬಿಗ್ ಬಾಸ್ ಸ್ಪರ್ಧಿ, ಸಿಬ್ಬಂದಿ ಮನೆಯಿಂದ ಹೊರಕ್ಕೆ, ಶೋ ಸ್ಟುಡಿಯೋ ಬಂದ್!; ದಸರಾ ರಜೆ ಅ.18 ವರೆಗೂ ವಿಸ್ತರಣೆ; ಬೌದ್ಧ ಮತಕ್ಕೆ ಮತಾಂತರ ಆದವರಿಗೂ SC ಜಾತಿ ಪ್ರಮಾಣಪತ್ರ

SCROLL FOR NEXT