ಬೆಂಗಳೂರು: ಡಾ. ಅಂಬೇಡ್ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಸತಿ ಸಂಕೀರ್ಣದಲ್ಲಿ ಭದ್ರತಾ ಸಿಬ್ಬಂದಿಯೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಬಿಹಾರ ಮೂಲದ ಲಖನ್ ವಿಶ್ವಕರ್ಮ (32) ಎಂದು ಗುರ್ತಿಸಲಾಗಿದೆ. ಈತ ಕಳೆದ ಒಂದೂವರೆ ತಿಂಗಳಿನಿಂದ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಭಾನುವಾರ ರಾತ್ರಿ ಡಬಲ್ ಬ್ಯಾರೆಲ್ ಬಂದೂಕಿನಿಂದ ಗುಂಡಿ ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಖಾಸಗಿ ಭದ್ರತಾ ಸಂಸ್ಥೆಯಿಂದ ನೇಮಕಗೊಂಡ ನಂತರ ಈತ ಬಂದೂಕು ಪರವಾನಗಿ ಪಡೆದಿದ್ದ. ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿಲ್ಲ. ಕುಟುಂಬದಲ್ಲಿ ಮನಸ್ತಾಪಗಳಿದ್ದಂತೆ ತೋರುತ್ತಿದೆ ಎಂದು ಹೇಳಿದ್ದಾರೆ.